• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
August 5, 2026
in ಕರ್ನಾಟಕ
0
ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ
Share on WhatsAppShare on FacebookShare on Telegram

ಮಹಿಳೆಯರ ಆರೋಗ್ಯ ಮತ್ತು ಋತುಬಂಧ (ಮೆನೋಪಾಸ್) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ‘ಋತುತಾರೆ’ ಎಂಬ ವಿಶೇಷ ಯೋಜನೆಯನ್ನು ಆರಂಭಿಸಿದೆ. ಮಹಿಳೆಯರು ಋತುಬಂಧದ ಅವಧಿಯಲ್ಲಿ ಎದುರಿಸುವ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿ, ಸೂಕ್ತ ಮಾರ್ಗದರ್ಶನ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ADVERTISEMENT

 

ಋತುಮತಿ ಎನ್ನುವುದು ಮಹಿಳೆಯ ಜೀವನದ ಮಹತ್ವದ ಹಂತವಾಗಿದ್ದರೆ, ಋತುಬಂಧವೂ ಸಹಜ ದೈಹಿಕ ಪ್ರಕ್ರಿಯೆಯ ಮತ್ತೊಂದು ಪ್ರಮುಖ ಘಟ್ಟವಾಗಿದೆ. ಆದರೆ ಈ ವಿಷಯಗಳ ಬಗ್ಗೆ ಸಮಾಜದಲ್ಲಿ ಇನ್ನೂ ಮುಕ್ತ ಚರ್ಚೆಗಳು ನಡೆಯದಿರುವುದು ಹಾಗೂ ಅರಿವಿನ ಕೊರತೆ ಇರುವುದರಿಂದ ಅನೇಕ ಮಹಿಳೆಯರು ಅನಗತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ರಾಜ್ಯ ಸರ್ಕಾರ ‘ಋತುತಾರೆ’ ಅಭಿಯಾನಕ್ಕೆ ಚಾಲನೆ ನೀಡಿದೆ.ಯೋಜನೆ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ನಟಿ ರಮ್ಯಾ ಮಾಹಿತಿ ನೀಡಿದರು. ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಟಿ ರಮ್ಯಾ ಅವರನ್ನು ಸರ್ಕಾರ ನೇಮಕ ಮಾಡಿದೆ. ಮಹಿಳೆಯರ ಆರೋಗ್ಯ ಸಮಸ್ಯೆಗಳ ಅಧ್ಯಯನ ಮತ್ತು ಪರಿಹಾರ ಕ್ರಮಗಳನ್ನು ರೂಪಿಸಲು ಮಹಿಳಾ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಮಿತಿಯನ್ನೂ ರಚಿಸಲಾಗಿದೆ.

Congress :ಇರುವುದೊಂದು ಸ್ಥಾನ, ಯಾರ ಪರ ನಾಯಕರ ಬ್ಯಾಟಿಂಗ್?

ಸಾಮಾನ್ಯವಾಗಿ ಮಹಿಳೆಯರು 45ರಿಂದ 55 ವರ್ಷದೊಳಗೆ ಋತುಬಂಧ ಹಂತವನ್ನು ತಲುಪುತ್ತಾರೆ. ಈ ಅವಧಿಯಲ್ಲಿ ಹಾರ್ಮೋನ್‌ಗಳಲ್ಲಿ ಆಗುವ ಬದಲಾವಣೆಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವು ರೀತಿಯ ಪರಿಣಾಮಗಳು ಕಾಣಿಸಿಕೊಳ್ಳುತ್ತವೆ. ಆದರೆ ಇವು ಮೆನೋಪಾಸ್‌ನ ಲಕ್ಷಣಗಳೆಂಬ ಅರಿವು ಅನೇಕ ಮಹಿಳೆಯರಿಗೆ ಇರುವುದಿಲ್ಲ. ಇದೇ ಅರಿವಿನ ಕೊರತೆಯನ್ನು ನಿವಾರಿಸುವುದು ‘ಋತುತಾರೆ’ ಯೋಜನೆಯ ಪ್ರಮುಖ ಗುರಿಯಾಗಿದೆ ಎಂದು ಸರ್ಕಾರ ತಿಳಿಸಿದೆ.

KRISHNABYRE GOWDA : ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ...

ಈ ಕುರಿತು ಮಾತನಾಡಿದ ನಟಿ ರಮ್ಯಾ, “ಮೆನೋಪಾಸ್ ಯಾವುದೇ ರೋಗವಲ್ಲ; ಅದು ಮಹಿಳೆಯ ಜೀವನದ ಸಹಜ ಹಂತ. ಈ ಸಮಯದಲ್ಲಿ ಕುಟುಂಬದ ಬೆಂಬಲ ಹಾಗೂ ಸರಿಯಾದ ಆರೋಗ್ಯ ಮಾರ್ಗದರ್ಶನ ಅತ್ಯಗತ್ಯ. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ರಾಜ್ಯ ಸರ್ಕಾರದ ಈ ಯೋಜನೆಯ ಭಾಗವಾಗಿರುವುದು ಸಂತಸದ ವಿಷಯ” ಎಂದು ಹೇಳಿದರು. ಭಾರತದಲ್ಲಿ ಬೇರೆ ದೇಶಗಳಿಗೆ ಹೋಲಿಸಿದರೆ ಮೆನೋಪಾಸ್ ಬೇಗ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ಈ ಹಂತವನ್ನು ಸಮರ್ಥವಾಗಿ ಎದುರಿಸಲು ಅರಿವು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು.

KRISHNABYRE GOWDA :ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಕೃಷ್ಣ ಭೈರೇಗೌಡ ಬಿಗ್ ಅಪ್ಡೇಟ್..!

ಯೋಜನೆಯ ಭಾಗವಾಗಿ ಮುಂದಿನ ಆರು ತಿಂಗಳಲ್ಲಿ ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ಮೆನೋಪಾಸ್ ಕುರಿತು ಮಹಿಳೆಯರಿಗೆ ಮಾಹಿತಿ ನೀಡಲಿದ್ದಾರೆ. ಋತುಬಂಧದ ಸಮಯದಲ್ಲಿ ಅನುಸರಿಸಬೇಕಾದ ಆರೋಗ್ಯ ಕ್ರಮಗಳು, ಜೀವನಶೈಲಿ ಬದಲಾವಣೆಗಳು ಹಾಗೂ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸುವ ಕುರಿತು ಜಾಗೃತಿ ಮೂಡಿಸಲಿದ್ದಾರೆ.

Tags: #HealthDepartment#KannadaNews#karnataka#Menopause#ramya#Women'sHealth#Women'sWellbeingHealthAwarenessKarnatakagovernmentRuthutare
Previous Post

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

Related Posts

ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ
ಕರ್ನಾಟಕ

ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ವಾಹನಕ್ಕೆ ಚಾಲನೆ

by ಪ್ರತಿಧ್ವನಿ
August 4, 2026
0

ಧಾರವಾಡ: ಅಪಾಯ ಅಥವಾ ಸಂಕಷ್ಟದ ಪರಿಸ್ಥಿತಿಯಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತುರ್ತು ರಕ್ಷಣೆ ಹಾಗೂ ತಕ್ಷಣದ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ...

Read moreDetails
ಬಿಡದಿ ಟೌನ್‌ಶಿಪ್‌ಗೆ ಹೈಕೋರ್ಟ್ ಬ್ರೇಕ್? ಸರ್ಕಾರಕ್ಕೆ ಸೂಚನೆ ಏನು

ಬಿಡದಿ ಟೌನ್‌ಶಿಪ್‌ಗೆ ಹೈಕೋರ್ಟ್ ಬ್ರೇಕ್? ಸರ್ಕಾರಕ್ಕೆ ಸೂಚನೆ ಏನು

August 4, 2026
ಸಿಲಿಕಾನ್‌ ಸಿಟಿ ಜನರೇ ಗಮನಿಸಿ..!: ಪೀಣ್ಯ ಫ್ಲೈಓವರ್‌ನ ರಾತ್ರಿ ಸಂಚಾರ ದಿಢೀರ್‌ ನಿಷೇಧ

ಸಿಲಿಕಾನ್‌ ಸಿಟಿ ಜನರೇ ಗಮನಿಸಿ..!: ಪೀಣ್ಯ ಫ್ಲೈಓವರ್‌ನ ರಾತ್ರಿ ಸಂಚಾರ ದಿಢೀರ್‌ ನಿಷೇಧ

August 4, 2026
ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

ಡಿ.ಕೆ ಶಿವಕುಮಾರ್ ಸಂಪುಟ:ಯಾರಿಗೆ ಯಾವ ಖಾತೆ? ಇಲ್ಲಿದೆ ಎಕ್ಸ್‌ಕ್ಲೂಸಿವ್‌ ಮಾಹಿತಿ..!

August 4, 2026
ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

ಡಿಕೆಶಿ ಸಂಪುಟದಲ್ಲಿ ಮಹಿಳೆಯರಿಗಿಲ್ಲ ಅವಕಾಶ- ಮುಂದಿನ ನಡೆ ಬಗ್ಗೆ ಸಿಎಂ ಹೇಳಿದ್ದೇನು..?

August 4, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada