• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಕ್ಕೇ ಸಿಗಲಿದೆ: ಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 8, 2026
in Top Story, ಕರ್ನಾಟಕ, ರಾಜಕೀಯ
0
ನಮ್ಮ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಕ್ಕೇ ಸಿಗಲಿದೆ: ಸಿಎಂ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಕಾಂಗ್ರೆಸ್‌ನ ಮಹಿಳಾ ಶಾಸಕಿಯರಿಗೆ ಭರವಸೆ ನೀಡಿದ್ದಾರೆ.

ADVERTISEMENT
H.D.Kumaraswamy : ರೈತರ ಸಮಸ್ಯೆಗಳನ್ನು ಕಡೆಗಣಿಸಿರುವ ಈ ಕಾಂಗ್ರೆಸ್‌ಗೆ ಪಾಠ ಕಲಿಸ್ತೀವಿ ಎಂದ ಕುಮಾರಸ್ವಾಮಿ..

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಹೇಳಿಕೆಗೆ ಉತ್ತರ ನೀಡಿದರು.

“ಈ ಮಸೂದೆಯನ್ನು ರೂಪಿಸಿ, ಲೋಕಸಭೆಯಲ್ಲಿ ಪಾಸ್ ಮಾಡಿದ್ದವರು ಕಾಂಗ್ರೆಸ್‌ನವರು. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು ಮಹಿಳೆರಿಗೆ ಹೆಚ್ಚು ಸ್ಥಾನ ನೀಡಿದ್ದೆವು. ಸದ್ಯದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ. ಕಿರಣ್ ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ, ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ” ಎಂದರು.

R. Ashoka : ಜೆಡಿಎಸ್‌ನೊಂದಿಗೆ ಸೇರಿ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಡ್ತೀವಿ ಎಂದ ಆರ್.‌ ಅಶೋಕ್..

ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ ನಿಜಲಿಂಗಪ್ಪ

ಇನ್ನು ಎಸ್.ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್‌, “ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಅಂಗವಾಗಿ ನಾವೆಲ್ಲರೂ ಅವರಿಗೆ ಗೌರವ ಸಲ್ಲಿಸಿ ಸ್ಮರಿಸುತ್ತಿದ್ದೇವೆ. ನಾನು ಅನೇಕ ಬಾರಿ ನಿಜಲಿಂಗಪ್ಪ ಅವರ ಜೊತೆ ಚರ್ಚೆ ಮಾಡಿದ್ದೇನೆ. ನಾನು ಹಾಗೂ ಎಸ್ ಎಂ ಕೃಷ್ಣ ಅವರು ಹಲವು ಬಾರಿ ನಿಜಲಿಂಗಪ್ಪ ಅವರ ಜೊತೆಗೆ ಹೋಗಿದ್ದೇವೆ. ಸೋನಿಯಾ ಗಾಂಧಿ ಅವರು ಕೂಡ ನಿಜಲಿಂಗಪ್ಪ ಅವರನ್ನು ಭೇಟಿ ಮಾಡಬೇಕು ಎಂದು ಚಿತ್ರದುರ್ಗಕ್ಕೆ ಆಗಮಿಸಿದ್ದರು. ನಾನು ಎರಡನೇ ಬಾರಿಗೆ ಶಾಸಕನಾದಾಗಲೂ ಕರ್ನಾಟಕ ಭವನದಲ್ಲಿ ಅವರನ್ನು ಭೇಟಿ ಮಾಡಿದ್ದೆ” ಎಂದು ಸ್ಮರಿಸಿದರು.

Sowmiya Anbumani : ಕರ್ನಾಟಕದ ವಿರುದ್ಧ ಕಿಡಿ ಕಾರಿದ ಧರ್ಮಪುರಿ ಶಾಸಕಿ.. #thamilnadu #mekedhatu

“ನಿಜಲಿಂಗಪ್ಪ ಅವರು ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ. ಕರ್ನಾಟಕದ ಏಕೀಕರಣಕ್ಕೆ ದೊಡ್ಡ ಹೋರಾಟ ಮಾಡಿದ್ದರು. ಮಹಾತ್ಮಾ ಗಾಂಧೀಜಿ ಅವರ ಚಿಂತನೆ ಅಳವಡಿಸಿಕೊಂಡ ನಾಯಕರು. ನಮ್ಮ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು ನಿಜಲಿಂಗಪ್ಪ ಅವರು. ಅವರ ಬಳಿಕ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ. ಕೇಂದ್ರದಲ್ಲಿ ಕನ್ನಡ ಹಾಗೂ ಕರ್ನಾಟಕದ ಏಕೀಕರಣಕ್ಕೆ ಧ್ವನಿ ಎತ್ತಿದ ನಾಯಕ” ಎಂದು ಬಣ್ಣಿಸಿದರು.

D. K. Shivakumar : ನಮ್ಮ ಹಕ್ಕು ಪಡೆಯಲು ಯಾವುದೇ ಹೋರಾಟಕ್ಕೂ ಸಿದ್ಧ.

“ಸರಳತೆ ನಿಜಲಿಂಗಪ್ಪ ಅವರ ಆಸ್ತಿ. ಅವರ ಆಸ್ತಿ ಬೇರೆಯವರ ಪಾಲಾಗಬಾರದು ಎಂದು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಇಂತಹ ನಾಯಕರ ಆಡಳಿತ ಜಾತ್ಯಾತೀತ ತತ್ವ ಬಸವಣ್ಣನವರ ಚಿಂತನೆಯನ್ನು ಪ್ರತಿಬಿಂಬಿಸಿದ ಧೀಮಂತ ನಾಯಕ, ಮುಖ್ಯಮಂತ್ರಿಯಾಗಿದ್ದರು. ನಾವೆಲ್ಲರೂ ಅವರ ಹಾದಿಯಲ್ಲಿ ಸಾಗಬೇಕು” ಎಂದರು.

ಬಿಜೆಪಿ ಪೇಮೆಂಟ್‌ ಸಂಸ್ಕೃತಿ ಬಗ್ಗೆ ಯತ್ನಾಳ್‌ ಅವ್ರೇ ಏನಂತ ಹೇಳಿದ್ದಾರೆ ಗೊತ್ತಿದೆ.. #pratidhvani

“ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಎಐಸಿಸಿ ಅಧ್ಯಕ್ಷರಾಗಿ ಅವರು ಕೊಟ್ಟ ಮಾರ್ಗದರ್ಶನಗಳು, ದಾಖಲೆಗಳಲ್ಲಿ ಇವೆ. 1924ರ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಿಜಲಿಂಗಪ್ಪ ಅವರ ಪಾತ್ರ ದೊಡ್ಡದಾಗಿತ್ತು. ನೀರಾವರಿಗೆ ಭದ್ರಾ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಜಾರಿಗೆ ಪ್ರಮುಖ ಪಾತ್ರ ವಹಿಸಿದ ನಾಯಕರು. ಅವರ ಕುಟುಂಬದವರಿಗೆ ಒಳ್ಳೆಯದನ್ನು ಮಾಡಲಿ. ನಿಜಲಿಂಗಪ್ಪ ಅವರು ಸಿಎಂ ಆಗಿದ್ದರೂ ಅವರ ಪುತ್ರಿ ನಾನು ಓದಿದ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಅವರು ಸರಳ ಜೀವನ ನಡೆಸಿದ್ದರು. ಅವರ ಮಾರ್ಗದರ್ಶನ ನಮಗೆ ಸದಾ ಅಗತ್ಯ” ಎಂದು ತಿಳಿಸಿದರು.

Previous Post

ಗೃಹಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ: ಮೃ**ರ ಖಾತೆಗೆ ₹86 ಲಕ್ಷ ಜಮೆ..!

Next Post

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post
ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada