• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

ಪ್ರತಿಧ್ವನಿ by ಪ್ರತಿಧ್ವನಿ
August 8, 2026
in ಕರ್ನಾಟಕ
0
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*
Share on WhatsAppShare on FacebookShare on Telegram

*ಬೆಂಗಳೂರು, ಆಗಸ್ಟ್ 8, 2026*: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌. ಶಿವಶಂಕರ ಅವರ ಮುಂದಾಳತ್ವದಲ್ಲಿ ನಗರದ ಹಲವು ಭಾಗಗಳ ಪಾದಚಾರಿ ಮಾರ್ಗಗಳಲ್ಲಿದ್ದ ಸ್ಥಗಿತಗೊಂಡ ಅಥವಾ ಬಳಕೆಯಲ್ಲಿಲ್ಲದ ವಿದ್ಯುತ್ ಪರಿವರ್ತಕ ಕೇಂದ್ರಗಳು ಸೇರಿದಂತೆ ಇತರ ಪರಿಕರಗಳನ್ನು ಶನಿವಾರ ತೆರವುಗೊಳಿಸಿದೆ.

ADVERTISEMENT

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಘೋಷಿಸಿದ್ದ ಕ್ಲೀನ್ ಅಪ್ ಬೆಂಗಳೂರು ತಿಂಗಳ ಅಭಿಯಾನದ ಭಾಗವಾಗಿ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಅವರು ಆಗಸ್ಟ್‌ 1ರಂದು ಅಭಿಯಾನಕ್ಕೆ ಚಾಲನೆ ನೀಡಿ, ಈ ಕಾರ್ಯವನ್ನು ಮುಂದುವರಿಸುವಂತೆ ಸೂಚಿಸಿದ್ದರು. ಅಂದರಂತೆ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಶನಿವಾರ ಬೆಳಗ್ಗೆ 7 ಗಂಟೆಯಿಂದಲೇ ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡರು.

ಯಲಹಂಕದಲ್ಲಿ ಬೆಳಗ್ಗೆ 7 ಗಂಟೆಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಎನ್.ಶಿವಶಂಕರ ಅವರು ಆಂದೋಲನಕ್ಕೆ ಚಾಲನೆ ನೀಡಿದ ಬಳಿಕ ಕಾರ್ಯಾಚರಣೆ ಮುಂದುವರಿಸಿದ ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿ, ಯಲಹಂಕ, ಸಹಕಾರ ನಗರ, ದಾಸರಹಳ್ಳಿ, ಹೆಬ್ಬಾಳ, ಎಂಎಸ್‌ಆರ್‌ ನಗರ, ಹೆಚ್‌ಬಿಆರ್‌ ಬಡಾವಣೆ, ಕೃಷ್ಣರಾಜಪುರ, ಚನ್ನಸಂದ್ರ ಮುಖ್ಯರಸ್ತೆ, ವೈಟ್‌ಫೀಲ್ಡ್‌, ಬೆಳ್ಳಂದೂರು, ಹೆಚ್‌ಎಸ್‌ಆರ್ ಬಡಾವಣೆ, ಜೆಪಿ ನಗರ, ಶಿವಾಜಿ ನಗರ ಸೇರಿದಂತೆ ವಿವಿಧೆಡೆ ಪಾದಚಾರಿ ಮಾರ್ಗಗಳಲ್ಲಿರುವ ಸ್ಥಗಿತಗೊಂಡ ಅಥವಾ ಬಳಕೆಯಲ್ಲಿಲ್ಲದ ವಿದ್ಯುತ್ ಪರಿವರ್ತಕ ಕೇಂದ್ರಗಳು ಸೇರಿದಂತೆ ಇತರ ಪರಿಕರಗಳನ್ನು ಶನಿವಾರ ತೆರವುಗೊಳಿಸಿದರು.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ಸೇರಿದಂತೆ ಅಭಿಯಾನದ ಮೇಲುಸ್ತುವಾರಿ ಅಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳ ತಂಡ ವಿವಿಧೆಡೆ ತೆರಳಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಯನ್ನು ಪ್ರೋತ್ಸಾಹಿಸಿದರಲ್ಲದೆ, ಈ ಕಾರ್ಯಾಚರಣೆಗೆ ಕೈಜೋಡಿಸಿದರು. ಸ್ವಚ್ಛತಾ ಕಾರ್ಯದ ಬಳಿಕ ಆರ್‌ಎಂಯುಗಳ ಬಳಿ ಕಸ ಎಸೆಯದಂತೆ, ಮೂತ್ರ ವಿಸರ್ಜನೆ ಮಾಡದಂತೆ ಜಾಗೃತಿ ಪತ್ರಗಳನ್ನು ಅಂಟಿಸಲಾಯಿತು. ಜಿಒಎಸ್‌ ಜಿಒಎಸ್ ರಾಡ್ ಗಳನ್ನು ನೆಲಮಟ್ಟದಿಂದ ಏಳು ಅಡಿ ಎತ್ತರಿಸುವ ಕಾರ್ಯವನ್ನು ನಡೆಸಲಾಯಿತು.

ಅಭಿಯಾನದ ಕುರಿತು ಮಾತನಾಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ, “ಆಗಸ್ಟ್‌ 1ರಂದು ಆರಂಭವಾಗಿರುವ ಅಭಿಯಾನದಲ್ಲಿ ಆಗಸ್ಟ್ 8ರ ವರೆಗೆ 592 ಕಂಬಗಳು, 334 ಜಿಎಸ್ ಆಪರೇಟಿಂಗ್ ರಾಡ್‌ಗಳು, 2,888 ಡಿಟಿಸಿ ಯಾರ್ಡ್‌ಗಳ ಸ್ವಚ್ಛತೆ, 998 ಆರ್‌ಎಂಯು ಯಾರ್ಡ್‌ಗಳ ಸ್ವಚ್ಛತೆ ಹಾಗೂ 380 ಸ್ಪನ್ ಪೋಲ್/ಡಿಪಿ ಯಾರ್ಡ್‌ಗಳ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ, 140 ಫೀಡರ್ ಪಿಲ್ಲರ್ ಬಾಕ್ಸ್/ಯುಜಿ ಕೇಬಲ್ ಮತ್ತು ಲೈನ್ ಬಲವರ್ಧನೆ ಕಾಮಗಾರಿಗಳು ಹಾಗೂ 101 ಆರ್‌ಸಿಸಿ ಕಂಬಗಳ ರಿವೈರಿಂಗ್ ಮತ್ತು ಯಾರ್ಡ್ ಸ್ವಚ್ಛತಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ,” ಎಂದು ಹೇಳಿದರು.

“ಬೆಂಗಳೂರು ನಗರವನ್ನು ಸ್ವಚ್ವವಾಗಿಡುವ ಕಾರ್ಯದಲ್ಲಿ ಜಿಬಿಎ ಜತೆ ಕೈಜೋಡಿಸುವಲ್ಲಿ ಬೆಸ್ಕಾಂ ಯಾವತ್ತೂ ಮುಂಚೂಣಿಯಲ್ಲಿರುತ್ತದೆ. ಇಂಧನ ಮತ್ತು ಪ್ರವಾಸೋದ್ಯಮ ಸಚಿವರ ಸೂಚನೆ ಮೇರೆಗೆ ಅನುಪಯುಕ್ತ, ಪಾದಚಾರಿಗಳಿಗೆ ಅಡಚಣೆಯಾಗುತ್ತಿರುವ ವಿದ್ಯುತ್ ಸಲಕರಣೆಗಳನ್ನು ನಮ್ಮ ತಾಂತ್ರಿಕ ಪರಿಣಿತರ ತಂಡದ ಮಾರ್ಗದರ್ಶನ ಹಾಗೂ ಮುಂದಾಳತ್ವದಲ್ಲಿ ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸುತ್ತಿದ್ದೇವೆ. ವಿದ್ಯುತ್ ಉಪಕರಣಗಳ ಸಮೀಪ ಹಾಕಲಾಗಿದ್ದ ಕಸ ತೆರವುಗೊಳಿಸಲಾಗುತ್ತಿದೆ,” ಎಂದು ಹೇಳಿದರು.

DK Shivakumar ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ Kumaraswamy..! | JDS | Pratidhvani

“ಕ್ಲೀನ್ ಅಪ್ ಬೆಂಗಳೂರು ಅಭಿಯಾನಕ್ಕೆ ದೊಡ್ಡ ಮಟ್ಟದಲ್ಲಿ ಕೈಜೋಡಿಸಿ ಇದನ್ನು ಆಂದೋಲನದ ರೀತಿ ರೂಪಿಸಲಾಗಿದೆ. ನೂರಾರು ಅಧಿಕಾರಿಗಳು, ಸಿಬ್ಬಂದಿ, ಸಾವಿರಾರು ಪವರ್‌ಮೆನ್‌ಗಳ ದೊಡ್ಡ ತಂಡದೊಂದಿಗೆ ಶನಿವಾರ ಕಾರ್ಯಾಚರಣೆ ನಡೆಸಲಾಗಿದ್ದು, ಇದೇ ರೀತಿ ಭಾನುವಾರವೂ ಕಾರ್ಯಾಚರಣೆ ಮುಂದುವರಿಯಲಿದೆ,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ.

ಲೂಟಿ ಹೊಡೆದು, ಜನರು ಮೇಲೆ ಸಾಲದ ಹೊರೆ ಹೊರೆಸ್ತಿದ್ದೀರಿ..! | DK Shivakumar | Pratidhvani

*ಕೋಟ್*

“ಜನತೆಗೆ ವಿದ್ಯುತ್ ಒದಗಿಸುವುದರ ಜತೆಗೆ ಸುರಕ್ಷತೆಗೂ ಆದ್ಯತೆ ನೀಡುತ್ತದೆ. ಪಾದಚಾರಿಗಳು ಸುರಕ್ಷಿತವಾಗಿರಬೇಕಾದರೆ ಅವರ ಓಡಾಟಕ್ಕೆ ಸೂಕ್ತ ಪಾದಚಾರಿ ಮಾರ್ಗ ಅಗತ್ಯ. ಅದನ್ನು ನಿರ್ವಹಿಸುವ ಕಾರ್ಯಕ್ಕೆ ಜಿಬಿಎ ಜತೆ ಬೆಸ್ಕಾಂ ಕೈಜೋಡಿಸಿ ಕ್ಲೀನ್ ಅಪ್ ಬೆಂಗಳೂರು ಅಭಿಯಾನದಲ್ಲಿ ಭಾಗಿಯಾಗಿದೆ. ಈ ತಿಂಗಳ ಅಂತ್ಯದೊಳಗೆ ನಾವು ಜನತೆಗೆ ಸುರಕ್ಷಿತ ಪಾದಚಾರಿ ಮಾರ್ಗ ಹಾಗೂ ಕಸಮುಕ್ತ ವಾತಾವರಣ ನಿರ್ಮಿಸಿಕೊಡಲಿದ್ದೇವೆ.

– *ಕೆ.ಜೆ.ಜಾರ್ಜ್, ಇಂಧನ ಮತ್ತು ಪ್ರವಾಸೋದ್ಯಮ ಸಚಿವರು*

Tags: #bangalore#bengaluru#BengaluruCleanUp#CleanBengaluru#CleanUpBengaluru#karnatakaBengaluruNewsBescomkarnatakanews
Previous Post

‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

Next Post

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

Related Posts

ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ
Top Story

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

by ಪ್ರತಿಧ್ವನಿ
August 8, 2026
0

ಬೆಂಗಳೂರು: ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಬಿಡದಿ ಬೃಹತ್ ಪಾದಯಾತ್ರೆಗೆ ಮಿತ್ರಪಕ್ಷ ಬಿಜೆಪಿ ನೈತಿಕ ಬೆಂಬಲ ವ್ಯಕ್ತಪಡಿಸಿದೆ ಎಂದು ಕೇಂದ್ರ...

Read moreDetails
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

August 8, 2026
SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

August 8, 2026
ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

August 8, 2026
ನಮ್ಮ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಕ್ಕೇ ಸಿಗಲಿದೆ: ಸಿಎಂ ಡಿ.ಕೆ ಶಿವಕುಮಾರ್

ನಮ್ಮ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಕ್ಕೇ ಸಿಗಲಿದೆ: ಸಿಎಂ ಡಿ.ಕೆ ಶಿವಕುಮಾರ್

August 8, 2026
Next Post
ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada