ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಿಸಿಹೆಚ್ ನ್ಯಾಯಾಲಯ ನೀಡಿದ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಪ್ರದೋಷ್ರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಮೊದಲು ತಮ್ಮ ವಾದವನ್ನೂ ಆಲಿಸಬೇಕು ಎಂದು ದರ್ಶನ್ ಪರ ವಕೀಲರು ಸಿಸಿಹೆಚ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಆರೋಪಿಗಳ ಆಕ್ಷೇಪಣೆ ಪರಿಗಣಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಅರ್ಜಿಯನ್ನು ಸ್ವೀಕರಿಸಿದ ಹೈಕೋರ್ಟ್ ಇಂದು ಮಧ್ಯಾಹ್ನ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ. ಜೊತೆಗೆ ವಿಶೇಷ ಸರ್ಕಾರಿ ಅಭಿಯೋಜಕರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ ಎನ್ನಲಾಗಿದೆ.

ಪ್ರದೋಷ್ಗೆ ಮಾಫಿ ಸಾಕ್ಷಿ ಸ್ಥಾನಮಾನ ದೊರೆತರೆ ಪ್ರಕರಣದ ತನಿಖೆ ಹಾಗೂ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಹೈಕೋರ್ಟ್ ನೀಡುವ ಆದೇಶದ ಮೇಲೆ ಇದೀಗ ಎಲ್ಲರ ಗಮನ ನೆಟ್ಟಿದೆ.







