ಬೆಂಗಳೂರು : ಖಾತೆಯ ಹಂಚಿಕೆಯ ಅಸಮಾಧಾನದ ನಡುವೆಯೇ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದೇಶವನ್ನು ತಿರಸ್ಕರಿಸಿದ್ದಾರೆ.

ಆಗಸ್ಟ್ ೧೫ ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸುವ ಹೊಣೆಗಾರಿಕೆಯಿಂದ ಬಿಡುಗಡೆಗೊಳಿಸುವಂತೆ ಜಮೀರ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಜಮೀರ್ ಅಹ್ಮದ್ ಖಾನ್ ಅವರು ಕಾರಣ ನೀಡಿದ್ದು, ಜಿಬಿಎ ಸೇರಿದಂತೆ ಇತರ ಚುನಾವಣೆಗಳಲ್ಲಿ ಪಕ್ಷವನ್ನು ಬಲ ಪಡಿಸುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಪತ್ರದ ಸಾರಾಂಶದಲ್ಲೇನಿದೆ..?
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬರೆದ ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್, ದಿನಾಂಕ 11.08.2026 ರ ಆದೇಶದನ್ವಯ ನನ್ನನ್ನು ವಿಜಯನಗರ ಜಿಲ್ಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣದ ಹೊಣೆಗಾರಿಕೆಯನ್ನು ನೀಡಿರುವುದು ಸರಿಯಷ್ಟೇ. ಆದರೆ, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಬಿಎಂಪಿ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಸಭೆ ಉಪಚುನಾವಣೆ ಹಾಗೂ ಪಕ್ಷ ಸಂಘಟನೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನಿಭಾಯಿಸಲು ಸಮಯದ ಅಭಾವ ಇರುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಆದುದರಿಂದ ನನಗೆ ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ನೀಡದಂತೆ ತಮ್ಮಲ್ಲಿ ಕೋರುತ್ತೇನೆ. ಮುಂದುವರೆದಂತೆ ದಿನಾಂಕ: 15.08.2026 ರಂದು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಹೊಣೆಗಾರಿಕೆ ನೀಡಿದ್ದು, ನಾನು ಹಾಜರಾಗಲು ಸಾಧ್ಯವಾಗದ ಕಾರಣ ಅದರಿಂದ ವಿನಾಯಿತಿ ನೀಡಲು ತಮ್ಮಲ್ಲಿ ಕೋರಲಾಗಿದೆ. ಇನ್ನು ಸದರಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ನೀಡಲಾಗಿದ್ದು, ಈಗಾಗಲೇ ಈ ಸಂಬಂಧ ವರದಿಯನ್ನು ಸಲ್ಲಿಸಲಾಗಿರುತ್ತದೆ” ಎಂದು ಜಮೀರ್ ಅವರು ತಮ್ಮ ಪತ್ರದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕೋರಿದ್ದಾರೆ.
ವಿಜಯನಗರಕ್ಕೆ ಬಸವಂತಪ್ಪ..
ಹೀಗಾಗಿ ಜಮೀರ್ ಮನವಿಗೆ ಸ್ಪಂದಿಸಿರುವ ಸಿಎಂ ಡಿಕೆ ಶಿವಕುಮಾರ್ ತಕ್ಷಣವೇ ನೂತನ ಆದೇಶ ಹೊರಡಿಸಿದ್ದಾರೆ. ಅದರ ಪ್ರಕಾರ, ಈ ಹಿಂದೆ ಉಡುಪಿ ಜಿಲ್ಲೆಯ ಧ್ವಜಾರೋಹಣಕ್ಕೆ ನಿಯೋಜನೆಗೊಂಡಿದ್ದ ಮುಜರಾಯಿ ಸಚಿವ ಬಸವಂತಪ್ಪ ಅವರನ್ನು ವಿಜಯನಗರ ಜಿಲ್ಲೆಗೆ ಧ್ವಜಾರೋಹಣಕ್ಕೆ ವರ್ಗಾಯಿಸಲಾಗಿದೆ. ಅಲ್ಲದೆ ಬಸವಂತಪ್ಪ ಅವರ ಜಾಗತಕ್ಕೆ ಉಡುಪಿ ಜಿಲ್ಲೆಯ ಧ್ವಜಾರೋಹಣದ ಜವಾಬ್ದಾರಿಯನ್ನು ಆಹರಾ ಸಚಿವ ಸಚಿವ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡುವ ಮೂಲಕ ಮುಖ್ಯಮಂತ್ರಿಯವರು ಆದೇಶ ಹೊರಡಿಸಿದ್ದಾರೆ.






