• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಾರಣವೇನು ?

ಪ್ರತಿಧ್ವನಿ by ಪ್ರತಿಧ್ವನಿ
August 19, 2026
in ಕರ್ನಾಟಕ
0
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಾರಣವೇನು ?
Share on WhatsAppShare on FacebookShare on Telegram

ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.ಕಳೆದ ಒಂದು ವರ್ಷದಿಂದ ಬಿ.ಸಿ. ನಾಗೇಶ್ ಅವರು ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರ ನಿಧನದ ಸುದ್ದಿ ಬಿಜೆಪಿ ಹಾಗೂ ಅವರ ಅಭಿಮಾನಿಗಳಲ್ಲಿ ಆಘಾತ ಮೂಡಿಸಿದೆ.

ADVERTISEMENT
Karnataka Legislative Council : ಊರೊಳಗೆ ನನ್ನ ಬಿಟ್ಟುಕೊಳ್ಳಲಿಲ್ಲ..! |  #pratidhvani

 

ಬಿ.ಸಿ. ನಾಗೇಶ್ ಅವರು ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2008 ಮತ್ತು 2018ರ ವಿಧಾನಸಭಾ ಚುನಾವಣೆಯಲ್ಲಿ ಅವರು ಗೆಲುವು ಸಾಧಿಸಿದ್ದರು.ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಹಲವು ಸುಧಾರಣೆಗಳನ್ನು ಜಾರಿಗೆ ತರಲು ಅವರು ಶ್ರಮಿಸಿದ್ದರು.ಆರ್‌ಎಸ್‌ಎಸ್ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನ ಆರಂಭಿಸಿದ ನಾಗೇಶ್, ಆರ್‌ಎಸ್‌ಎಸ್‌ನ ಪೂರ್ಣಾವಧಿ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದರು. ಬಳಿಕ ಆರ್‌ಎಸ್‌ಎಸ್ ಮೂಲಕ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರ ಆಪ್ತರಾಗಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ಸೋಲು ಅನುಭವಿಸಿದ್ದರು.

Karnataka Legislative Council : ರಾಜಕೀಯಕ್ಕೆ Umashree ಬಂದಿದ್ದೇಗೆ..? | #pratidhvani

ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.ನಾಗೇಶ್ ಅವರ ಸರಳತೆ, ವೈಚಾರಿಕ ಬದ್ಧತೆ, ನಿಷ್ಠೆ ಹಾಗೂ ಜನಪರ ಕಾಳಜಿಯನ್ನು ಸ್ಮರಿಸಿರುವ ವಿಜಯೇಂದ್ರ, ಶಾಸಕರಾಗಿ ಮತ್ತು ಸಚಿವರಾಗಿ ಅವರು ಸಲ್ಲಿಸಿದ ಸೇವೆ, ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಪಕ್ಷದ ಸಂಘಟನೆಗೆ ಮಾಡಿದ ಕಾರ್ಯ ಅಪಾರ ಎಂದು ಹೇಳಿದ್ದಾರೆ.ಅವರ ಅಗಲಿಕೆಯಿಂದ ಬಿಜೆಪಿ ಪಕ್ಷ ಹಾಗೂ ರಾಜ್ಯ ಒಬ್ಬ ಸಜ್ಜನ ಜನಪ್ರತಿನಿಧಿ ಮತ್ತು ಆದರ್ಶ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದು ವಿಜಯೇಂದ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಿ.ಸಿ. ನಾಗೇಶ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ತಮ್ಮ ಆತ್ಮೀಯ ಸ್ನೇಹಿತರಾಗಿದ್ದ ನಾಗೇಶ್ ಅವರು ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿ ಅತ್ಯಂತ ಸಮರ್ಥವಾಗಿ ಸೇವೆ ಸಲ್ಲಿಸಿದ್ದರು ಎಂದು ಬೊಮ್ಮಾಯಿ ಸ್ಮರಿಸಿದ್ದಾರೆ.ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಹಾಗೂ ತಿಪಟೂರು ಮತ್ತು ತುಮಕೂರು ಭಾಗದ ಜನರ ಸೇವೆಗೆ ನಾಗೇಶ್ ನೀಡಿದ ಕೊಡುಗೆ ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ಬಿಜೆಪಿ ಮಾತ್ರವಲ್ಲದೆ ತುಮಕೂರು ಭಾಗದ ಜನತೆ ಹಾಗೂ ಅಪಾರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

Tags: #basavarajbommai#BCNageshDeath#BCNageshNews#BJP #Tipaturu#byvijayendra#FormerMinister#karnatakabjp#KarnatakaPolitics#politicalnews#TipaturuNewsbcnagesheducationministerkarnatakanewsRSStumakuru
Previous Post

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

Next Post

ಭದ್ರಾ ಜಲಾಶಯದಿಂದ ನೀರು ಹರಿಸುವ ಕುರಿತು ಶೀಘ್ರ ತೀರ್ಮಾನ: ಸಿಎಂ ಜೊತೆ ಚರ್ಚೆ-ಮಧು ಬಂಗಾರಪ್ಪ

Related Posts

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ
Top Story

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

by ಪ್ರತಿಧ್ವನಿ
August 19, 2026
0

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಫಾರ್ಮ್‌ಹೌಸ್‌ ಒಂದರಲ್ಲಿ ನಕಲಿ ಔಷಧಿಗಳನ್ನು ಮರುಪ್ಯಾಕ್‌ ಮಾಡುತ್ತಿದ್ದ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದಾಳಿ ವೇಳೆ ಸುಮಾರು 5 ಕೋಟಿ ರೂ. ಮೌಲ್ಯದ...

Read moreDetails
ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಇನ್ಮುಂದೆ ಫುಟ್‌ಪಾತ್‌ನಲ್ಲಿ ವಾಹನ ಚಲಾಯಿಸಿದರೆ ಭಾರಿ ದಂಡ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

August 19, 2026
ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

ಎರಡನೇ ಮುದ್ರಣಕ್ಕೆ ಸಜ್ಜಾದ ‘ಸದನದಲ್ಲಿ ಶ್ರೀರಾಮರೆಡ್ಡಿ’ ಕೃತಿಯ ವಿಶೇಷತೆಯೇನು..?

August 19, 2026
ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

ವಿಧಾನ ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ

August 19, 2026
ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

ನಕಲಿ ಪಿಂಚಣಿದಾರರಿಗೆ ಸರ್ಕಾರದ ಬಿಗ್‌ ಶಾಕ್: ರಾಜ್ಯದಲ್ಲಿ 18 ಲಕ್ಷ ಖಾತೆಗಳು ಸ್ಥಗಿತ

August 19, 2026
Next Post
ಭದ್ರಾ ಜಲಾಶಯದಿಂದ ನೀರು ಹರಿಸುವ ಕುರಿತು ಶೀಘ್ರ ತೀರ್ಮಾನ: ಸಿಎಂ ಜೊತೆ ಚರ್ಚೆ-ಮಧು ಬಂಗಾರಪ್ಪ

ಭದ್ರಾ ಜಲಾಶಯದಿಂದ ನೀರು ಹರಿಸುವ ಕುರಿತು ಶೀಘ್ರ ತೀರ್ಮಾನ: ಸಿಎಂ ಜೊತೆ ಚರ್ಚೆ-ಮಧು ಬಂಗಾರಪ್ಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada