• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

ಪ್ರತಿಧ್ವನಿ by ಪ್ರತಿಧ್ವನಿ
August 21, 2026
in Top Story, ಕರ್ನಾಟಕ, ರಾಜಕೀಯ
0
500 KPS ಶಾಲೆಗಳ ಅಭಿವೃದ್ಧಿಗೆ  1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ ರೂ.ಗಳ ನೆರವು ಘೋಷಿಸಿರುವ ʻಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ʼ (ADB) ಮತ್ತು ರಾಜ್ಯ ಸರ್ಕಾರ ಇಂದು ಈ ಸಂಬಂಧದ ಮಹತ್ವದ ಒಪ್ಪಂದಕ್ಕೆ ಸಹಿ ಮಾಡಿವೆ.

Siddaramaiah : ಎಷ್ಟೋ ದಿನದ ನಂತರ ಮತ್ತೆ ರೊಚ್ಚಿಗೆದ್ದ ಸಿದ್ದರಾಮಯ್ಯ #pratidhvani

ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಡಿಬಿ ಬ್ಯಾಂಕಿನ ಅಧಿಕಾರಿಗಳು ಈ ಒಪ್ಪಂದಕ್ಕೆ ಸಹಿ ಹಾಕಿದರು. ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಅಂದರೆ 2029-30ನೇ ಸಾಲಿನ ಒಳಗೆ ರಾಜ್ಯ ಸರ್ಕಾರವು 2,500 ಕೋಟಿ ರೂ. ವಿನಿಯೋಗಿಸಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸಲಿದೆ. ಇದಕ್ಕೆ ಎಡಿಬಿ ಬ್ಯಾಂಕ್ 1,750 ಕೋಟಿ ರೂ.ಗಳ ನೆರವು ನೀಡಲಿದೆ.

 ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ಸಾಮರ್ಥ್ಯ ಹೊಂದಿರುವ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಪ್ರತಿ ಶಾಲೆಯಲ್ಲೂ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಾಮರ್ಥ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ಎಡಿಬಿಯ ನೆರವಿನಿಂದ ಒಟ್ಟು 500 ಕೆಪಿಎಸ್ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ.

Assembly session: ನಾಗೇಂದ್ರ ವಜಾಗೆ ಆಗ್ರಹಿಸಿ ಕಲಾಪದಲ್ಲಿ 5ನೇ ದಿನವೂ ವಿಪಕ್ಷ ಪ್ರತಿಭಟನೆ  #pratidhvani

ಮುಂದಿನ 4 ವರ್ಷಗಳಲ್ಲಿ ಅನುಷ್ಠಾನ

“ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಅಂದರೆ 2029-30ನೇ ಸಾಲಿನ ಒಳಗೆ ರಾಜ್ಯ ಸರ್ಕಾರವು 2,500 ಕೋಟಿ ರೂ. ವಿನಿಯೋಗಿಸಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸಲಿದೆ. ಇದಕ್ಕೆ ಎಡಿಬಿ ಬ್ಯಾಂಕ್ 1,750 ರೂ.ಗಳ ನೆರವು ಒದಗಿಸಲಿದೆ. ಉಳಿದ 750 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ನೀಡಬೇಕಾಗುತ್ತದೆ. ಈ ಒಪ್ಪಂದಕ್ಕೆ ಸಹಿ ಮಾಡುವುದಕ್ಕೂ ಮೊದಲೇ ನಾನು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ನ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಒಪ್ಪಂದವನ್ನು ಅಂತಿಮಗೊಳಿಸಿದ್ದೇನೆ” ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

“ಎಡಿಬಿ ಬ್ಯಾಂಕ್ ಭಾರತದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಇಷ್ಟೊಂದು ದೊಡ್ಡ ಮೊತ್ತದ ಆರ್ಥಿಕ ನೆರವು ನೀಡುತ್ತಿರುವುದು ಇದೇ ಮೊದಲು. ಅವರು ಈ ನೆರವು ಪ್ರಕಟಿಸುವುದಕ್ಕೂ ಮೊದಲೇ ನಮ್ಮ ಕೆಪಿಎಸ್ ಶಾಲೆಗಳ ಯೋಜನೆ, ಕಾರ್ಯಗತಗೊಳಿಸಲು ನಾವು ತೆಗೆದುಕೊಂಡಿರುವ ಕ್ರಮ, ನಮ್ಮ ಬದ್ಧತೆ ಪರಿಶೀಲಿಸಿದ್ದಾರೆ. ಅಲ್ಲದೆ, ನಾವು ಗುಣಮಟ್ಟದ ಶಿಕ್ಷಣ ನೀಡಲು ತೆಗೆದುಕೊಂಡಿರುವ ಕ್ರಮ ಬ್ಯಾಂಕಿನ ಅಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಿದೆ” ಎಂದು ಸಚಿವರು ವಿವರಿಸಿದ್ದಾರೆ.

B. K. Hariprasad : ಬರ ಪರಿಹಾರದ ಬಗ್ಗೆ ಸದನದಲ್ಲಿ ಚರ್ಚೆ ಮಾಡೋಕೆ ಬಿಡುತ್ತಿಲ್ಲ ಬಿಜೆಪಿ ನಾಯಕರು.! #bkhariprasad

“ದ್ವಿಭಾಷಾ ಶಿಕ್ಷಣ, ಮಕ್ಕಳ ಹಾಜರಾತಿ ದಾಖಲಿಸಲು ʻನಿರಂತರʼ ಯೋಜನೆ ಜಾರಿ, ಬೃಹತ್ ಪ್ರಮಾಣದಲ್ಲಿ ಅಂದರೆ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತಿರುವುದು, ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ನಿರಂತರವಾಗಿ ನೀಡುತ್ತಿರುವ ತರಬೇತಿ, ಕಂಪ್ಯೂಟರ್ ಶಿಕ್ಷಣ ನೀಡಲು ವಿಶೇಷವಾಗಿ ಕಂಪ್ಯೂಟರ್ ಸೈನ್ಸ್ ಶಿಕ್ಷಕರ ನೇಮಕ, ಎಐ ಕಲಿಸಲು ನಾವು ನಡೆಸಿರುವ ಸಿದ್ಧತೆ, ವೃತ್ತಿ ಮತ್ತು ಕೌಶಲ ಶಿಕ್ಷಣ, ಗ್ರಾಮೀಣ ಮಕ್ಕಳಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಮ್ಮ ಯೋಜನೆ ಎಲ್ಲವೂ ಈ ಮಹತ್ವದ ಒಪ್ಪಂದ ಏರ್ಪಡಲು ಕಾರಣವಾಗಿದೆ” ಎಂದು ಸಚಿವರು ಹೇಳಿದ್ದಾರೆ.

“ಈಗಾಗಲೇ ನಾವು 100 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಅಭಿವೃದ್ಧಿಪಡಿಸಲು ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿದ್ದೇವೆ. ಕೆಪಿಎಸ್ ಶಾಲೆಗಳಾಗಿ ಉನ್ನತೀಕರಿಸುವ ಶಾಲೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದ ಸಚಿವರು, ಸ್ಪಷ್ಟ ಮಾನದಂಡಗಳನ್ನು ಇಟ್ಟುಕೊಂಡು ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೇವೆ” ಎಂದಿದ್ದಾರೆ.

D. K. Shivakumar : ಕಾವೇರಿ ವಿವಾದ ಬಗ್ಗೆ ಪ್ರಶ್ನೆ ಕೇಳುತ್ತಿದ್ದಂತೆ ಡಿಕೆಶಿ ರಿಯಾಕ್ಷನ್‌..

“ಈಗಾಗಲೇ ಶೇ.15 ರಷ್ಟು ಅಂದರೆ 262.5 ಕೋಟಿ ರೂ.ಗಳನ್ನು ಎಡಿಬಿ ಬ್ಯಾಂಕ್ ನೆರವು ನೀಡಿದೆ. 2026-27 ನೇ ಸಾಲಿನಲ್ಲಿ ಶೇ. 20.5 358.75 ಕೋಟಿ ನೆರವು ನೀಡಲಿದೆ. 2027-28 ನೇ ಸಾಲಿನಲ್ಲಿ ಶೇ.22 ರಷ್ಟು ಎಂದರೆ 385 ಕೋಟಿ ರೂ. ಹಾಗೂ 2028-29 ಸಾಲಿನಲ್ಲಿ ಶೇ. 21.5 ರಷ್ಟು ಎಂದರೆ 376.25 ಕೋಟಿ ರೂ. ಮತ್ತು 2029-30 ನೇ ಸಾಲಿನಲ್ಲಿ ಶೇ. 21 ರಷ್ಟು ಎಂದರೆ 367.5 ಕೋಟಿ ರೂ. ನೆರವು ನೀಡಲಿದೆ” ಎಂದು ಸಚಿವರು ವಿವರಿಸಿದ್ದಾರೆ.

BJP leaders stage protest : ಸಚಿವ ನಾಗೇಂದ್ರ ವಿರುದ್ಧ ಬಿಜೆಪಿ ಶಾಸಕರು ಪ್ರತಿಭಟನೆ..!  | BJP | #pratidhvani
Previous Post

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

Next Post

ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

Related Posts

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು
Top Story

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು

by ಪ್ರತಿಧ್ವನಿ
August 21, 2026
0

ತಮಿಳುನಾಡು ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ನಡುವೆ ತೀವ್ರ ವಾಕ್ಸಮರ ನಡೆಯಿತು. ಉದಯನಿಧಿ ಸ್ಟಾಲಿನ್ ಅವರು...

Read moreDetails
ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

August 21, 2026
ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

August 21, 2026
ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

August 21, 2026
ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ- ಸಿಎಂ ಡಿ.ಕೆ ಶಿವಕುಮಾರ್

ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ- ಸಿಎಂ ಡಿ.ಕೆ ಶಿವಕುಮಾರ್

August 21, 2026
Next Post
ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada