• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಪ್ರತಿಧ್ವನಿ by ಪ್ರತಿಧ್ವನಿ
August 28, 2026
in Top Story, ಕರ್ನಾಟಕ, ರಾಜಕೀಯ
0
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ
Share on WhatsAppShare on FacebookShare on Telegram

ಬೆಂಗಳೂರು: “ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಸಮ್ಮತಿ ಇದೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ‌ತಿಳಿಸಿದ್ದಾರೆ.

ADVERTISEMENT
HD Kumaraswamy : ಯಾವ ಅಕೌಂಟ್ ಕೇಳಿ ಏನು ಮಾಡ್ತೀರಿ..! | #pratidhvani

ಕರ್ನಾಟಕ ರಾಜ್ಯ ಪೊಲೀಸರಿಗಾಗಿ ಸಮಗ್ರ ಸಾಮರ್ಥ್ಯ ವೃದ್ದಿ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಪೊಲೀಸರ ಆರ್ಥಿಕ ಅಗತ್ಯಗಳಿಗೆ ಮೊದಲು ಪ್ರಾಶಸ್ತ್ಯ ನೀಡಲಾಗುವುದು. ಗೃಹ ಇಲಾಖೆಯು ಪೊಲೀಸರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತದೆ” ಎಂದು ಭರವಸೆ ನೀಡಿದರು.

“ನಮ್ಮನ್ನು ರಕ್ಷಿಸಲು ನಮ್ಮ ಆರಕ್ಷಕರನ್ನು ಸಜ್ಜುಗೊಳಿಸುವ ಎನ್ಎಸ್ ಜಿ ಗೆ ಧನ್ಯವಾದಗಳು. ಸಜ್ಜನರನ್ನು ರಕ್ಷಿಸುವುದು, ದುರ್ಜನರನ್ನು ಶಿಕ್ಷಿಸುವುದೂ ಕೂಡ ಧರ್ಮ. ನೀವೆಲ್ಲರೂ ಧರ್ಮದ ಕಾರ್ಯವನ್ನು ಬಹಳ ನಿಷ್ಠೆಯಿಂದ ಮಾಡುತ್ತಿದ್ದೀರಿ. ಸಮಾಜದಲ್ಲಿ ಅಶಾಂತಿ, ಕಾನೂನು ಸುವ್ಯವಸ್ಥೆ ಹದಗೆಟ್ಟಾಗ ನೀವು ಶಿಷ್ಟರ ರಕ್ಷಣೆಗೆ ಬರುತ್ತೀರಿ. ರಾಷ್ಟ್ರೀಯ ಭದ್ರತಾ ಪಡೆ ತಮ್ಮ ಶಕ್ತಿಯನ್ನು ನಮ್ಮ ರಾಜ್ಯ ಪೊಲೀಸರಿಗೆ ಧಾರೆ ಎರೆಯುತ್ತಿದೆ. ಎನ್ ಎಸ್‌ಜಿಯಿಂದ ಪಡೆದ ತರಬೇತಿ ಸಾರ್ಥಕವಾಗಬೇಕು. ಅದನ್ನು ನಾಡಿನ, ಜನರ ರಕ್ಷಣೆಗೆ ಬಳಸಬೇಕು. ಎನ್ ಎಸ್ ಜಿ ತರಬೇತಿ ನಮ್ಮ ಪೊಲೀಸರ ಸಾಮರ್ಥ್ಯ ಹೆಚ್ಚಿಸುತ್ತದೆ ಕೌಶಲ್ಯವಂತರನ್ನಾಗಿ ಮಾಡುತ್ತದೆ” ಎಂದರು.

DK Shivakumar : ಪೊಲೀಸ್ ಇಲಾಖೆ ದೇಶಕ್ಕೆ ಸೇವೆ ನೀಡುತ್ತಿರುವ ಪ್ರಮುಖ ಇಲಾಖೆ..! #police #pratidhvani

“ಕರ್ನಾಟಕ ಪೊಲೀಸ್ ದೇಶದ ಹೆಮ್ಮೆ. ನಮ್ಮ ಪೊಲೀಸರು ದಕ್ಷತೆಗೆ, ಕಾರ್ಯಪರತೆಗೆ, ಕರ್ತವ್ಯ ನಿಷ್ಠೆಗೆ ಹೆಸರಾದವರು. ನಾವು ಹುಟ್ಟಿದ ಈ ಸಮಾಜಕ್ಕೆ ಋಣ ತೀರಿಸುವುದೇ ನಿಜವಾದ ಸೇವೆ. ಆ ಕೆಲಸವನ್ನು ನೀವು ಬಹಳ ಚೆನ್ನಾಗಿ ಮಾಡುತ್ತಿದ್ದೀರಿ. ಕಷ್ಟದ ಸಂದರ್ಭದಲ್ಲಿ ನೀವು ನಿಮ್ಮ ಪ್ರಾಣ ಪಣಕ್ಕಿಟ್ಟು ಹೋರಾಟ ಮಾಡಿ ನಾಡನ್ನು ರಕ್ಷಣೆ ಮಾಡುತ್ತಿದ್ದೀರಿ. ನಮ್ಮ ಆರಕ್ಷಕರು, ಕಾನೂನಿನ ಪಾಲಕರು, ಕಾನೂನಿನ ರಕ್ಷಕರು” ಎಂದು ಶ್ಲಾಘಿಸಿದರು.

“ನಾನು 35 ವರ್ಷಗಳ ಹಿಂದೆ ಗೃಹ ಇಲಾಖೆಗೆ ಸಂಬಂಧಿಸಿದ ಬಂಧಿಖಾನೆ ಸಚಿವನಾಗಿದ್ದಾಗ ಸಾಕಷ್ಟು ಮಾಹಿತಿ ಪಡೆದಿದ್ದೆ. ಹಗಲು ರಾತ್ರಿ ನೀವು ಶ್ರಮಿಸುತ್ತೀರಿ. ಕೆಲವು ದುರ್ಘಟನೆ ಸಂದರ್ಭದಲ್ಲಿ ನಾವು ರಾಜಕಾರಣಿಗಳು ನಿಮ್ಮನ್ನೇ ದೂಷಿಸಿರುವ ಉದಾಹರಣೆಗಳಿವೆ. ನೀವು ನಿಮ್ಮ ನಿಷ್ಠೆ, ಪ್ರಾಮಾಣಿಕತೆಯಲ್ಲಿ ದೇಶದ ಸಮಗ್ರತೆ, ಐಕ್ಯತೆ, ಶಾಂತಿ ಕಾಪಾಡುವುದು ಮುಖ್ಯ. ಗಡಿಯಲ್ಲಿ ಸೈನಿಕ. ಗಡಿಯ ಒಳಗೆ ಆರಕ್ಷಕ. ನೀವಿದ್ದರೆ ಸಮಾಜ ನೆಮ್ಮದಿ, ಸುಖವಾಗಿರುತ್ತದೆ. ನೀವು ನಿಮ್ಮ ಕರ್ತವ್ಯವನ್ನು ಪ್ರೀತಿಯಿಂದ ಒಪ್ಪಿ ಈ ಇಲಾಖೆ ಸೇರಿದ್ದೀರಿ. ಕೆಲವರು ಪೊಲೀಸ್ ಕೆಲಸವನ್ನು ಹೆಣ ಕಾಯುವ ಕೆಲಸ ಎಂದು ಟೀಕಿಸುತ್ತಾರೆ. ಆದರೆ ನೀವು ದೇಶ ಸೇವೆ ಮಾಡುತ್ತಿದ್ದೀರಿ. ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ” ಎಂದರು.

DK Shivakumar : ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನೂಲು ಹುಣ್ಣಿಮೆ ಸಂಭ್ರಮದಲ್ಲಿ ಡಿಕೆ ಶಿವಕುಮಾರ್.!

“ಸೈಬರ್ ಕ್ರೈಂಗಳು ಹೆಚ್ಚುತ್ತಿವೆ. ಇದನ್ನು ನಿಯಂತ್ರಿಸಲು ತಂತ್ರಜ್ಞಾನ ಬಳಸುತ್ತಿದ್ದೇವೆ. ದೇಶ ರಕ್ಷಣೆಗೂ ನಾವು ಡ್ರೋನ್ ಬಳಸುತ್ತಿದ್ದೇವೆ. ಬೆಂಗಳೂರು ಜಾಗತಿಕ ನಗರ. ಇಡೀ ವಿಶ್ವ ಈ ನಗರ ನೋಡುತ್ತಿದೆ. ನಮ್ಮ ಸಿಬ್ಬಂದಿ ಸಾಮರ್ಥ್ಯ ಹೆಚ್ಚಿಸಲು ನಮ್ಮ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಂದಾಗಿದ್ದಾರೆ” ಎಂದು ಹೇಳಿದರು.

ಗಗನಚುಂಬಿ ಕಟ್ಟಡಗಳ ಮೇಲೆ ಹೆಲಿಪ್ಯಾಡ್ ನಿರ್ಮಾಣ

“ಬೆಂಗಳೂರು ನಗರದಲ್ಲಿ ಗಗನಚುಂಬಿ ಕಟ್ಟಡಗಳು ನಿರ್ಮಾಣ ಹೆಚ್ಚಾಗುತ್ತಿವೆ. ಬೆಂಕಿ ಅನಾಹುತ, ಭಯೋತ್ಪಾದನೆ ದಾಳಿಗಳು ಸಂಭವಿಸಿದರೆ ನಾಗರಿಕ ರಕ್ಷಣೆ ನಮ್ಮ ಕರ್ತವ್ಯ. ಇಂಥ ತುರ್ತು ಸಂದರ್ಭಗಲ್ಲಿ ಜೀವ ಉಳಿಸಲು ಹೆಲಿಪ್ಯಾಡ್ ಗಳ ಬಳಸಿಕೊಳ್ಳುವ ವಿಚಾರವಾಗಿ ನಮ್ಮ ಸರ್ಕಾರ ಮಿಲಿಟರಿ, ವಾಯು ಸೇನಾ ಅಧಿಕಾರಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮಾತುಕತೆಯನ್ನು ಗೃಹಚಿವರು ನಡೆಸಲಿದ್ದಾರೆ. ಬೆಂಗಳೂರು ವಿಶ್ವಮಾನ್ಯ ನಗರ. ನಗರದಲ್ಲಿರುವ ಗಗನ ಚುಂಬಿ ಕಟ್ಟಡಗಳ ಮೇಲೆ ಹೆಲಿಪ್ಯಾಡ್ ನಿರ್ಮಾಣಕ್ಕೆ ಅಗತ್ಯ ಸ್ಥಳವನ್ನು ಒದಗಿಸಬೇಕು. ಕಾನೂನು ಚೌಕಟ್ಟಿನಲ್ಲಿ ಅನುಮತಿಯನ್ನು ನೀಡುವ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದು ಬಿಲ್ಡರ್ ಗಳು, ಡೆವಲಪರ್ ಗಳಿಗೆ ಮನವಿ ಮಾಡುತ್ತೇನೆ” ಎಂದರು.

Siddaramaiah : ಸುಮ್ಮನೆ ಕೂರದ ಸಿದ್ದರಾಮಯ್ಯ, ಅಹಿಂದ ಚಳವಳಿಗೆ ಮತ್ತೆ ಸಿದ್ದು ದನಿ   #siddaramaiah

“ಡಿಜಿಟಲ್ ಕ್ರೈಂಗಳು ಹೆಚ್ಚುತ್ತಿವೆ. ನಾವುಗಳು ಅಪ್ ಡೇಟ್ ಆಗಬೇಕು. ರಾಜ್ಯದ ಜನಸಂಖ್ಯೆ 7 ಕೋಟಿಯಾಗಿದೆ. 2 ಲಕ್ಷ ವಿದೇಶಿಗರು ನಮ್ಮನ್ನು ನಂಬಿ ಇಲ್ಲಿದ್ದಾರೆ. ವಿಶ್ವದ ಅತ್ಯುತ್ತಮ ಕಂಪನಿಗಳು ಇಲ್ಲೇ ಕಾರ್ಯನಿರ್ವಹಿಸುತ್ತಿವೆ. ಎಲ್ಲದಕ್ಕೂ ಕಾರಣ ನಂಬಿಕೆ, ವಿಶ್ವಾಸ. ನಮ್ಮನ್ನು ನಂಬಿ ಇಲ್ಲಿಗೆ ಬಂದಿದ್ದಾರೆ. ಅವರಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ. ಗೃಹ ಇಲಾಖೆ, ಪೊಲೀಸ್ ಇಲಾಖೆ ಒಟ್ಟಿಗೆ ಆ ಕೆಲಸವನ್ನು ಈಗಾಗಲೇ ಸಮರ್ಥವಾಗಿ ಮಾಡುತ್ತಿದೆ” ಎಂದು ಹೇಳಿದರು.

D. K. Shivakumar : ನೇಪಾಳ ದುರಂತ: ಕನ್ನಡಿಗನ ಜೊತೆ ಸಿಎಂ ವಿಡಿಯೋ ಕಾಲ್

ಪ್ರತ್ಯೇಕ ರೌಡಿ ನಿಗ್ರಹ ಪಡೆ

“ಪೊಲೀಸರಿಗ ಹೆಚ್ಚಿನ ವಸತಿ ವ್ಯವಸ್ಥೆ ಹಾಗೂ ಅವರ ಮೇಲಿರುವ ಒತ್ತಡ ಕಡಿಮೆ ಮಾಡುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಶೀಘ್ರದಲ್ಲೇ ಮಾಡುತ್ತೇವೆ. ಬೆಂಗಳೂರು ನಗರ ಒಳಗೊಂಡಂತೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ರೌಡಿಗಳನ್ನು ನಿಗ್ರಹಕ್ಕೆ ಪ್ರತ್ಯೇಕ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ರೌಡಿ ನಿಗ್ರಹ ಪಡೆ ರಚಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದೇವೆ. ಈ ತಂಡ ಯಾವ ರಾಜಕೀಯ ಒತ್ತಡಕ್ಕೂ ಮಣಿಯದೇ ಜನರಿಗೆ ಭದ್ರತೆ, ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಲಿದೆ” ಎಂದರು.

“ಕರ್ನಾಟಕದ ಪೊಲೀಸರು ದೇಶದ ಕೀರ್ತಿಯನ್ನು ಹೆಚ್ಚಿಸುವಂತಾಗಲಿ. ಕರ್ನಾಟಕ ಬಲಗೊಂಡರೆ ದೇಶ ಬಲಗೊಂಡಂತೆ. ವಿದೇಶದಿಂದ ಭಾರತಕ್ಕೆ ಬರುವವರು ಮೊದಲು ಕರ್ನಾಟಕಕ್ಕೆ ಕಾಲಿಡುತ್ತಾರೆ. ವಿಶ್ವ ಕರ್ನಾಟಕದ ಕಡೆ ನೋಡುತ್ತಿದೆ. ಹಾಗಾಗಿ ಪೊಲೀಸರ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ” ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದರು.

Previous Post

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

Next Post

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

August 28, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
Next Post
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada