• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಸ್ಲಾಂ ಶ್ರೇಷ್ಠ ಧರ್ಮ ಎಂದ ಬಸವರಾಜ ರಾಯರೆಡ್ಡಿಯನ್ನು ಸಂಪುಟದಿಂದ ವಜಾಗೊಳಿಸಿ-ಸಿಎಂಗೆ ಆರ್‌.ಆಶೋಕ್‌ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
August 31, 2026
in Top Story, ಕರ್ನಾಟಕ, ರಾಜಕೀಯ
0
ಕ್ಯಾಬಿನೆಟ್ ಸಭೆಯಲ್ಲಿ ಜಾತಿ ಜನಗಣತಿ ಚರ್ಚೆ ಅಪೂರ್ಣ ಆಗಿದ್ಯಾಕೆ..?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಜಗತ್ತಿನಲ್ಲಿ ಇಸ್ಲಾಂ ಅತ್ಯಂತ ಶ್ರೇಷ್ಠ ಹಾಗೂ ವೈಜ್ಞಾನಿಕವಾದ ಧರ್ಮವಾಗಿದ್ದು, ನನಗೆ ಮಕ್ಕಾ-ಮದೀನಾದ ಹಜ್ ಯಾತ್ರೆಗೆ ಹೋಗುವ ತೀವ್ರ ಆಸೆಯಿದೆ ಎನ್ನುವ ಸಚಿವ ಬಸವರಾಜ ರಾಯರೆಡ್ಡಿ ಹೇಳಿಕೆ ವಿರುದ್ಧ ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

Gruhalakshmi Guarantee Scheme : ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಗೆ 3 ವರ್ಷದ ಸಂಭ್ರಮ #pratidhvani

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಆರ್‌.ಅಶೋಕ್‌, ಸಿಎಂ ಡಿ.ಕೆ ಶಿವಕುಮಾರ್‌ ಅವರೇ, ನಿಮ್ಮ ಕಾಂಗ್ರೆಸ್ ಸರ್ಕಾರದ ಈ ಹಿಂದೂ ವಿರೋಧಿ ಮನಸ್ಥಿತಿಗೆ ಕೊನೆಯೇ ಇಲ್ಲವೇ? ದಿನಬೆಳಗಾದರೆ ದೇವಸ್ಥಾನ ಸುತ್ತುವ ನಾಟಕ ಮಾಡುತ್ತಾ, ಕ್ಯಾಮೆರಾ ಮುಂದೆ ಭಕ್ತಿಯ ಪ್ರದರ್ಶನ ನೀಡುವ ನೀವು, ನಿಮ್ಮದೇ ಸಂಪುಟದ ಸಚಿವರು ಸನಾತನ ಹಿಂದೂ ಧರ್ಮದ ಬಗ್ಗೆ ಮತ್ತು ದೇವಸ್ಥಾನಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಾಗ ಮಾತ್ರ ಮೌನ ವಹಿಸಿರುವುದೇಕೆ ಡಿಕೆಶಿ ಅವರೇ? ಎಂದು ಪ್ರಶ್ನಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಉದ್ಧಟತನದ ಹೇಳಿಕೆಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಳ್ಳಿ. “ಮಠಮಾನ್ಯಗಳಿಗೆ, ದೇವಸ್ಥಾನಗಳಿಗೆ ಹೋಗುವುದಿಲ್ಲ” ಎಂದು ಹೇಳುವ ಮೂಲಕ ನಾಡಿನ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರಗಳನ್ನು ತುಚ್ಛವಾಗಿ ಬಣ್ಣಿಸಿದ್ದಾರೆ. “ಇತರ ಧರ್ಮಗಳಿಗಿಂತ ಇಸ್ಲಾಂ ಧರ್ಮವೇ ಶ್ರೇಷ್ಠ” ಎಂಬ ರೀತಿಯಲ್ಲಿ ಹೇಳಿಕೆ ನೀಡಿ ಸನಾತನ ಧರ್ಮವನ್ನು ಕೀಳಾಗಿ ಬಿಂಬಿಸಿದ್ದಾರೆ. ಇದೇನಾ ನಿಮ್ಮ ಕಾಂಗ್ರೆಸ್‌ ಪಕ್ಷದ ‘ಸರ್ವಧರ್ಮ ಸಮಭಾವ’? ಇದೇನಾ ನಿಮ್ಮ ‘ಸರ್ವ ಜನಾಂಗದ ಶಾಂತಿಯ ತೋಟ’? ಅಥವಾ ನಿಮ್ಮ ನಾಟಕ, ಬೂಟಾಟಿಕೆಯೆಲ್ಲ ಹಿಂದೂಗಳ ಮತಕ್ಕಾಗಿ ಹಾಕಿಕೊಂಡಿರುವ ಮತ್ತೊಂದು ಮುಖವಾಡವೇ? ಎಂದು ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

MLA Annapoorna on MP  Tukaram : ಗಣಿಗಾರಿಕೆಗೆ ಭೂಮಿ ನೀಡಿಲ್ಲ ಎಂದ ಅರಣ್ಯ ಇಲಾಖೆ..! #pratidhvani

ಇನ್ನು ಮೊದಲು ಬಸವರಾಜ ರಾಯರೆಡ್ಡಿ ಅವರು ತಮ್ಮ ಹೇಳಿಕೆಗಳನ್ನು ಹಿಂಪಡೆದು, ನಾಡಿನ ಸಮಸ್ತ ಹಿಂದೂಗಳ ಕ್ಷಮೆ ಕೇಳಲಿ. ಅದಕ್ಕೆ ಸಿದ್ಧರಿಲ್ಲದಿದ್ದರೆ, ಅವರನ್ನು ಸಂಪುಟದಿಂದ ವಜಾಗೊಳಿಸುವ ಬದ್ಧತೆಯನ್ನು ಸಿಎಂ ಡಿಕೆಶಿ ಅವರು ತೋರಿಸಲಿ. ಇಲ್ಲವಾದರೆ ಕನ್ನಡ ನಾಡಿನ ಕೋಟ್ಯಾಂತರ ಹಿಂದೂಗಳಿಗೆ ಒಂದು ವಿಷಯ ಸ್ಪಷ್ಟವಾಗುತ್ತದೆ. ನಿಮ್ಮ ದೇವಸ್ಥಾನ ಭೇಟಿ ಭಕ್ತಿಗಾಗಿ ಅಲ್ಲ, ನಿಮ್ಮ ಮಾತುಗಳು ಹಿಂದೂ ಧರ್ಮದ ಮೇಲಿನ ಗೌರವಕ್ಕಾಗಿ ಅಲ್ಲ, ಎಲ್ಲವೂ ಕೇವಲ ಮತಕ್ಕಾಗಿ, ತೋರಿಕೆಗಾಗಿ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

H. C. Balakrishna : ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ಕೈ ನಾಯಕ ಹೇಳಿದ್ದೇನು..! #kumaraswamy #hcbalakrishna
Previous Post

ಬೆಂಗಳೂರು ಬಿಜೆಪಿ ಮುಖಂಡನ ಕಿಡ್ನ್ಯಾಪ್ ಆರೋಪ: ಆಂಧ್ರ ಶಾಸಕರ ವಿರುದ್ಧ FIR

Next Post

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

Related Posts

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ
Top Story

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ

by ಪ್ರತಿಧ್ವನಿ
August 31, 2026
0

ಪ್ಯಾಕೆಟ್ ಆಹಾರ ಪದಾರ್ಥಗಳಲ್ಲಿ ಸಕ್ಕರೆ, ಉಪ್ಪು ಅಥವಾ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೆಚ್ಚಿದ್ದರೆ, ಗ್ರಾಹಕರಿಗೆ ಸುಲಭವಾಗಿ ತಿಳಿಯುವಂತೆ ಪ್ಯಾಕೆಟ್‌ನ ಮುಂಭಾಗದಲ್ಲೇ ಕೆಂಪು ಬಣ್ಣದ ಎಚ್ಚರಿಕೆ ಲೇಬಲ್ ಅಳವಡಿಸುವ...

Read moreDetails
ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

August 31, 2026
ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ

ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ

August 31, 2026
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

August 31, 2026
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

August 31, 2026
Next Post
KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada