• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 31, 2026
in Top Story, ಕರ್ನಾಟಕ, ರಾಜಕೀಯ
0
ನಮ್ಮ ವಿರುದ್ಧ ಅಲ್ಲ..ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬಿಜೆಪಿ ಇರಬಾರದು ಎಂದು ಹೆಚ್‌.ಡಿ ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದಾರೆ. ನಗರದ ನೆಹರು ತಾರಾಲಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕುಮಾರಸ್ವಾಮಿ ಅವರು ನಮ್ಮ ವಿರುದ್ಧ ಹೋರಾಟ ಮಾಡುತ್ತಿಲ್ಲ. ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರ ಕರ್ತವ್ಯ ಅವರು ಮಾಡಲಿ. ಅವರು ಏನು ಆರೋಪ ಮಾಡುತ್ತಾರೋ ಮಾಡಲಿ” ಎಂದರು.

Gruhalakshmi Guarantee Scheme : ಗೃಹಲಕ್ಷ್ಮೀ ಗ್ಯಾರಂಟಿ ಯೋಜನೆಗೆ 3 ವರ್ಷದ ಸಂಭ್ರಮ #pratidhvani

ಅಲ್ಲೋಲ ಕಲ್ಲೋಲವಾಗುವಂತಹ ದಾಖಲೆ ಬಿಡುಗಡೆ ಮಾಡುತ್ತೇನೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್ “ಬಹಳ ಸಂತೋಷ” ಎಂದು ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪಾದಯಾತ್ರೆ ಬಗ್ಗೆ ಮಾತನಾಡಿದ ಸಿಎಂ “ಅವರು ಪಾದಯಾತ್ರೆ ಮಾಡಲಿ, ಆನಂತರ ನಮ್ಮದು ಯಾವ ಯಾತ್ರೆ ನಡೆಯುತ್ತದೆ ಎಂದು ಹೇಳುವೆ. ನಾವು ರಾಜಕಾರಣಿಗಳಲ್ಲವೇ? ಅವರು ಶುರು ಮಾಡಲಿ. ನಾವು ಅವರಿಗೆ ಗೌರವ ಕೊಟ್ಟು ಅಧಿವೇಶನ ನಡೆಸಿದ್ದೆವು. ಯಾವುದೇ ವಿಚಾರ ಚರ್ಚೆ ಮಾಡಲಿಲ್ಲ. ಈಗ ಕಸ್ತೂರಿ ರಂಗನ್ ವರದಿ ವಿಚಾರವಾಗಿ, ರೈತರ ಹಿತ ವಿಚಾರವಾಗಿ ಚರ್ಚೆ ಮಾಡುವುದಿದೆ. ಅದಕ್ಕಾಗಿ ಶಾಸಕರ ಅಭಿಪ್ರಾಯ ಕೇಳಲಾಗುವುದು” ಎಂದು ತಿಳಿಸಿದರು.

Priyank Kharge : ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಸ್ಫೋಟಕ ಹೇಳಿಕೆ..! #hdkumaraswamy

ಕಾನೂನು ಪ್ರಕಾರ ದಾಖಲೆ ಸರಿ ಇದ್ದವರಿಗೆ ಭೂ ಗ್ಯಾರಂಟಿ

ಸರ್ಕಾರ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಈ ಭೂಮಿ ಗ್ಯಾರಂಟಿ ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಸರ್ಕಾರಕ್ಕಾಗಿ ತಮ್ಮ ಆಸ್ತಿಯನ್ನು ತ್ಯಾಗ ಮಾಡುವ ಎಲ್ಲರಿಗೂ ಇದು ಅನ್ವಯವಾಗಲಿದೆ. ಅವರ ಹೆಸರುಗಳನ್ನು ಶಾಶ್ವತವಾಗಿ ದಾಖಲಿಸಬೇಕು. ಅವರಿಗೆ ಸೂಕ್ತ ಪರಿಹಾರ ನೀಡಬೇಕು. ಅಲ್ಲದೆ, ಅವರು ಹೊಂದಿರುವ ಭೂಮಿಯಲ್ಲಿಯೇ ಅವರಿಗೆ ಹೆಚ್ಚಿನ ಅನುಕೂಲಗಳನ್ನು ಕಲ್ಪಿಸಬೇಕು. ಇದು ರಾಜ್ಯದ ಎಲ್ಲಾ ಭೂ ಮಾಲೀಕರಿಗೂ ಅನ್ವಯವಾಗಬೇಕು” ಎಂದರು.

DK Shivakumar : ಬಿಜೆಪಿ ಪಾದಯಾತ್ರೆ ಮಾಡಲಿ.. ನಾವೇನ್ ಮಾಡ್ತೀವಿ ಅಂತ ನೋಡಲಿ! #pratidhvani

“ಫಲಾನುಭವಿಗಳ ಭಾವಚಿತ್ರ ಸೇರಿದಂತೆ ಎಲ್ಲಾ ಅಗತ್ಯ ವಿವರಗಳನ್ನು ಒಳಗೊಂಡ ಸೂಕ್ತ ದಾಖಲೆಗಳನ್ನು ನೀಡಲು ನಾವು ವ್ಯವಸ್ಥೆ ಮಾಡುತ್ತಿದ್ದೇವೆ. ದಾಖಲೆಗಳು ಎಂದರೆ ಎಲ್ಲವೂ ಕಾನೂನುಬದ್ಧವಾಗಿ ಮಾನ್ಯವಾಗಿರಬೇಕು ಎಂಬುದು ನನ್ನ ಅರ್ಥ. ಬಿ ಖಾತಾದಿಂದ ಎ ಖಾತಾಗೆ ಪರಿವರ್ತಿಸುವಾಗಲೂ ಕಾನೂನು ಬದ್ಧತೆ ಇರಬೇಕು. ದಾಖಲೆಗಳು ಕಾನೂನುಬದ್ಧವಾಗಿರಬೇಕು. ಬೋಗಸ್ ನೋಂದಣಿ ಇದ್ದರೆ ಮಾಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

Priyank Kharge : KPSC ಹಗರಣದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಎದ್ದು ಹೋಗಿದ್ದುHDK ಏಕೆ..? #hdkumaraswamy

“ಕಾನೂನಿನ ಚೌಕಟ್ಟಿನೊಳಗೆ ಅವರಿಗೆ ಸೂಕ್ತ ದಾಖಲೆಗಳನ್ನು ಒದಗಿಸಲು ನಾವು ವ್ಯವಸ್ಥೆ ಮಾಡಿದ್ದೇವೆ. ಏಕೆಂದರೆ ಭವಿಷ್ಯದಲ್ಲಿ ಅವರ ಆಸ್ತಿ ವರ್ಗಾವಣೆ ಮಾಡಬೇಕಾಗಬಹುದು, ಸಾಲ ಪಡೆಯಬೇಕಾಗಬಹುದು ಅಥವಾ ಕುಟುಂಬದ ಸದಸ್ಯರ ನಡುವೆ ಆಸ್ತಿಯನ್ನು ಹಂಚಿಕೆ ಮಾಡಬೇಕಾಗಬಹುದು. ಇಂತಹ ಹಲವು ಸಾಧ್ಯತೆಗಳಿವೆ. ಸರ್ಕಾರವು ಅವರ ಹಕ್ಕುಗಳು ಮತ್ತು ಆಸ್ತಿಗಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು” ಎಂದರು.

H. C. Balakrishna : ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ಕೈ ನಾಯಕ ಹೇಳಿದ್ದೇನು..! #kumaraswamy #hcbalakrishna
Previous Post

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌: ಬೀದರ್ BJP ಮುಖಂಡನ ಬಂಧನ!

Next Post

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

Related Posts

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ
Top Story

ಬಿಸ್ಕತ್, ಕೂಲ್‌ಡ್ರಿಂಕ್ಸ್‌ ಪ್ಯಾಕೆಟ್‌ಗಳಲ್ಲಿ ಇನ್ಮುಂದೆ ಕೆಂಪು ಎಚ್ಚರಿಕೆ ಲೇಬಲ್? FSSAI ಮಹತ್ವದ ಪ್ರಸ್ತಾವನೆ

by ಪ್ರತಿಧ್ವನಿ
August 31, 2026
0

ಪ್ಯಾಕೆಟ್ ಆಹಾರ ಪದಾರ್ಥಗಳಲ್ಲಿ ಸಕ್ಕರೆ, ಉಪ್ಪು ಅಥವಾ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೆಚ್ಚಿದ್ದರೆ, ಗ್ರಾಹಕರಿಗೆ ಸುಲಭವಾಗಿ ತಿಳಿಯುವಂತೆ ಪ್ಯಾಕೆಟ್‌ನ ಮುಂಭಾಗದಲ್ಲೇ ಕೆಂಪು ಬಣ್ಣದ ಎಚ್ಚರಿಕೆ ಲೇಬಲ್ ಅಳವಡಿಸುವ...

Read moreDetails
ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

ರಾಮನಗರದಲ್ಲಿ ಖೋಟಾ ನೋಟು ದಂಧೆ ಬಯಲು:ಐವರು ವಶಕ್ಕೆ

August 31, 2026
ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ

ಬಿಗ್‌ಬಾಸ್ ಕನ್ನಡ ಸೀಸನ್‌ 13ಕ್ಕೆ ಸಂಕಷ್ಟ? ಸೆ.6ರ ಗ್ರ್ಯಾಂಡ್‌ ಓಪನಿಂಗ್‌ ಬಗ್ಗೆ ಹೆಚ್ಚಿದ ಅನುಮಾನ

August 31, 2026
ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

ಸರ್ಕಾರಿ ಕಟ್ಟಡಗಳ ಸೌರೀಕರಣಕ್ಕೆ ಆದ್ಯತೆ: ಎಸಿಎಸ್ ಗೌರವ್ ಗುಪ್ತ

August 31, 2026
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

August 31, 2026
Next Post
ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಸರ್ವೆ ಗಡುವು ವಿಸ್ತರಣೆ: ಇಲ್ಲಿದೆ ಮಹತ್ವದ ಮಾಹಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada