• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, November 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ! ಹಲವು ಪ್ರಥಮಗಳು;ವಿಶೇಷತೆ ಏನು ಗೊತ್ತಾ?

ಪ್ರತಿಧ್ವನಿ by ಪ್ರತಿಧ್ವನಿ
October 20, 2026
in ಕರ್ನಾಟಕ
0
Countdown to the world-famous Mysuru Dasara Jumbo Savari: 'Prashantha' is all set to carry the 750 kg golden howdah.
Share on WhatsAppShare on FacebookShare on Telegram

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಬುಧವಾರ (ಅಕ್ಟೋಬರ್ 21) ನಡೆಯಲಿದೆ. ಹತ್ತು ದಿನಗಳಿಂದ ವೈಭವದಿಂದ ನಡೆದ ನಾಡಹಬ್ಬಕ್ಕೆ ಜಂಬೂಸವಾರಿ ಹಾಗೂ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತಿನೊಂದಿಗೆ ತೆರೆ ಬೀಳಲಿದೆ. ಈ ಬಾರಿಯ ಜಂಬೂಸವಾರಿ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲಿದ್ದು, ಇದೇ ಮೊದಲ ಬಾರಿಗೆ ಅಂಬಾರಿ ಹೊರುವ ಜವಾಬ್ದಾರಿಯನ್ನು ಪ್ರಶಾಂತ ಆನೆ ನಿರ್ವಹಿಸಲಿದೆ.

ADVERTISEMENT

ರಾಜ್ಯಪಾಲೆ ಡಾ. ಸುಧಾ ಯಾದವ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅಂಬಾರಿ ಆನೆ ಪ್ರಶಾಂತ ಪಾಲಿಗೆ ಇದು ಮೊದಲ ಜಂಬೂಸವಾರಿ ಎಂಬುದು ವಿಶೇಷ. ಅಲ್ಲದೆ, ಭಾರತೀಯ ಸೇನೆಯ ಮೂರು ತುಕಡಿಗಳು ಇದೇ ಮೊದಲ ಬಾರಿಗೆ ಮೆರವಣಿಗೆಯಲ್ಲಿ ಭಾಗವಹಿಸಲಿವೆ. ನೆರೆರಾಜ್ಯಗಳ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿದ್ದು, ಕೇರಳ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ದಸರಾ ಮಹೋತ್ಸವ ಆರಂಭವಾದಾಗ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹಲೋತ್ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಅವರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಡಾ. ಸುಧಾ ಯಾದವ್ ಅವರು ಅಕ್ಟೋಬರ್ 16ರಂದು ರಾಜ್ಯಪಾಲೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ನೂತನ ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು, ಅವರು ಮೊದಲ ಬಾರಿಗೆ ಜಂಬೂಸವಾರಿಯಲ್ಲಿ ಭಾಗವಹಿಸಲಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎರಡು ಅವಧಿಗಳಲ್ಲಿ ಒಟ್ಟು ಎಂಟು ಬಾರಿ ಜಂಬೂಸವಾರಿಗೆ ಚಾಲನೆ ನೀಡಿದ್ದರು. ಇದೀಗ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ದಸರಾ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.ಕಳೆದ 18 ವರ್ಷಗಳಿಂದ ಮೈಸೂರು ದಸರೆಯಲ್ಲಿ ಭಾಗವಹಿಸುತ್ತಿರುವ ಪ್ರಶಾಂತ ಆನೆ ಈ ಬಾರಿ ಮೊದಲ ಬಾರಿಗೆ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದೆ. ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಆಹ್ವಾನ ನೀಡಲಾಗಿದೆ. ತಮಿಳುನಾಡಿನ ಸಿ. ಜೋಸೆಫ್ ವಿಜಯ್ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರಿಗೂ ಆಹ್ವಾನ ನೀಡಲಾಗಿದ್ದರೂ, ಅವರು ಭಾಗವಹಿಸುತ್ತಿಲ್ಲ ಎಂದು ವರದಿಯಾಗಿದೆ.

Mysuru Dasara : ಜಗತ್ತಿನ ಎಲ್ಲರ ಕಣ್ಣುಗಳು ಮೈಸೂರಿನ ಕಡೆಗೆ ನೆಟ್ಟಿರುತ್ತವೆ.. #pratidhvani

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವಿಯ ಮೇರೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನೆಯ ಮೂರು ತುಕಡಿಗಳನ್ನು ಜಂಬೂಸವಾರಿಗೆ ಕಳುಹಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ನಟ-ನಟಿಯರೂ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಜಂಬೂಸವಾರಿ ಮಾರ್ಗವನ್ನು ಸಜ್ಜುಗೊಳಿಸಲಾಗಿದೆ. ಮೆರವಣಿಗೆಯನ್ನು ವೀಕ್ಷಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ರೈಲ್ವೆ ಇಲಾಖೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿವೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ.

ಬುಧವಾರ ಮಧ್ಯಾಹ್ನ 1.36ರಿಂದ 1.56ರವರೆಗೆ ಸಲ್ಲುವ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಂದಿಧ್ವಜ ಪೂಜೆ ನೆರವೇರಿಸಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.
ಬಳಿಕ ಸಂಜೆ 4.10ರಿಂದ 4.35ರವರೆಗೆ ಸಲ್ಲುವ ಮೀನ ಲಗ್ನದಲ್ಲಿ ಅರಮನೆಯ ಒಳಾವರಣದ ವಿಶೇಷ ವೇದಿಕೆಯಲ್ಲಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಯ ವಿಗ್ರಹಕ್ಕೆ ಪುಷ್ಪಾರ್ಚನೆ ನೆರವೇರಿಸಲಾಗುತ್ತದೆ. ಈ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

Mysuru Dasara : ಮೈಸೂರು ದಸರಾ ದೇಶದಲ್ಲೇ ದೊಡ್ಡ ಹಬ್ಬ, ನನಗೆ ತುಂಬಾ ಖುಷಿಯಾಗ್ತಿದೆ.. #pratidhvani

ಅರಮನೆಯ ಆವರಣದಲ್ಲಿ ಗಣ್ಯರು, ಆಹ್ವಾನಿತರು, ಗೋಲ್ಡ್ ಕಾರ್ಡ್ ಹಾಗೂ ಟಿಕೆಟ್ ಹೊಂದಿರುವವರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಪುರಭವನ ಮತ್ತು ನಗರದ ಬಸ್ ನಿಲ್ದಾಣದ ಎದುರಿನ ಪಾದಚಾರಿ ಮಾರ್ಗದಲ್ಲಿಯೂ ನಗರಪಾಲಿಕೆಯಿಂದ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.ನಂದಿಧ್ವಜ, ವೀರಗಾಸೆ, ನಾದಸ್ವರ, ನಿಶಾನೆ, ಅಭಿಮನ್ಯು, ನೌಫತ್ ಆನೆ ಗೋಪಿ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ವಿವಿಧ ಪೊಲೀಸ್ ತುಕಡಿಗಳು, ನಾಡಿನ ಕಲೆ-ಸಂಸ್ಕೃತಿಯನ್ನು ಬಿಂಬಿಸುವ ಸ್ತಬ್ಧಚಿತ್ರಗಳು ಹಾಗೂ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ.

ಮೆರವಣಿಗೆಯ ಕೊನೆಯಲ್ಲಿ ಪ್ರಶಾಂತ ಆನೆ ಮೊದಲ ಬಾರಿಗೆ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿದ್ದು, ಅದರೊಂದಿಗೆ ಕಾವೇರಿ ಮತ್ತು ರೂಪಾ ಆನೆಗಳು ಹೆಜ್ಜೆ ಹಾಕಲಿವೆ. ಅರಮನೆಯಿಂದ ಆರಂಭವಾಗುವ ಜಂಬೂಸವಾರಿ ಸುಮಾರು ಐದು ಕಿಲೋಮೀಟರ್ ದೂರ ಕ್ರಮಿಸಿ ಬನ್ನಿಮಂಟಪವನ್ನು ತಲುಪಲಿದೆ.ಬನ್ನಿಮಂಟಪದಲ್ಲಿ ಸಂಜೆ 7 ಗಂಟೆಗೆ ಪಂಜಿನ ಕವಾಯತು ನಡೆಯಲಿದೆ. ರಾಜ್ಯಪಾಲೆ ಡಾ. ಸುಧಾ ಯಾದವ್ ಗೌರವ ವಂದನೆ ಸ್ವೀಕರಿಸಲಿದ್ದು, ಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಭಾಗವಹಿಸಲಿದ್ದಾರೆ. ಈ ಮೂಲಕ ಈ ವರ್ಷದ ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ತೆರೆ ಬೀಳಲಿದೆ.

Tags: chamundeshwariDasara CelebrationJamboo SavariKarnataka FestivalsMysore Dasara 2026Mysuru Dasaramysuru newsPrashantha ElephantTorchlight Parade
Previous Post

ಕಾಂಗ್ರೆಸ್ ಪಕ್ಷವೇ ಸ್ಟಿಂಗ್ ಆಪರೇಷನ್‍ನ ಕಾರ್ಖಾನೆ : ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

Next Post

ಸೂಜಿ ಹಿಡಿದು ದ್ರಾಕ್ಷಿಗೆ ಹೊಲಿಗೆ ಹಾಕುವ ವೈದ್ಯಕೀಯ ವಿದ್ಯಾರ್ಥಿಗಳು! ಏಕೆ ಗೊತ್ತಾ?

Related Posts

ಬೆಂಗಳೂರಿನಲ್ಲಿ ನಾಲ್ಕು ದಿನ ವಿದ್ಯುತ್ ವ್ಯತ್ಯಯ; ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!
ಕರ್ನಾಟಕ

ಬೆಂಗಳೂರಿನಲ್ಲಿ ನಾಲ್ಕು ದಿನ ವಿದ್ಯುತ್ ವ್ಯತ್ಯಯ; ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

by Shivakumar
November 6, 2026
0

ಬೆಂಗಳೂರಿನಲ್ಲಿ ಒಂದು ದಿನ ವಿದ್ಯುತ್ ವ್ಯತ್ಯಯವಾದರೂ ಜನರು ಪರದಾಡುವ ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ಸತತ ನಾಲ್ಕು ದಿನಗಳ ಕಾಲ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ...

Read moreDetails
Awareness for Eco-friendly Diwali Celebrations in State Schools and Colleges: Education Department Order

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಾಗೃತಿ : ಶಿಕ್ಷಣ ಇಲಾಖೆ ಆದೇಶ

November 6, 2026
Scouts and Guides Foundation Day: Flag sticker released by Higher Education Minister Basavaraj Rayareddy

ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನ: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರಿಂದ ಧ್ವಜ ಚೀಟಿ ಬಿಡುಗಡೆ

November 6, 2026
Recruitment for Kalyana Karnataka to be conducted via KEA instead of KPSC: Minister Priyank Kharge issues firm directive

ಕೆಪಿಎಸ್‌ಸಿ ಬದಲು ಕೆಇಎ ಮೂಲಕ ಕಲ್ಯಾಣ ಕರ್ನಾಟಕದ ನೇಮಕಾತಿ : ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ

November 6, 2026
Blending of up to 31.2% ethanol in petrol: Karnataka government seeks clarification from the Centre

ಪೆಟ್ರೋಲ್‌ನಲ್ಲಿ ಶೇ. 31.2 ರವರೆಗೆ ಎಥೆನಾಲ್ ಮಿಶ್ರಣ : ಕೇಂದ್ರದಿಂದ ವಿವರಣೆ ಕೇಳಿದ ಕರ್ನಾಟಕ ಸರ್ಕಾರ

November 6, 2026
Next Post
ಸೂಜಿ ಹಿಡಿದು ದ್ರಾಕ್ಷಿಗೆ ಹೊಲಿಗೆ ಹಾಕುವ ವೈದ್ಯಕೀಯ ವಿದ್ಯಾರ್ಥಿಗಳು! ಏಕೆ ಗೊತ್ತಾ?

ಸೂಜಿ ಹಿಡಿದು ದ್ರಾಕ್ಷಿಗೆ ಹೊಲಿಗೆ ಹಾಕುವ ವೈದ್ಯಕೀಯ ವಿದ್ಯಾರ್ಥಿಗಳು! ಏಕೆ ಗೊತ್ತಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada