ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಸಿರುವ ಸ್ಟಿಂಗ್ ಆಪರೇಷನ್ (Sting Operation) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಲ್ಲಿದ್ದ ಕಾಂಗ್ರೆಸ್‌ನ ಅಮಾನತುಗೊಂಡ ನಾಯಕಿ ಕೃಪಾ ಆಳ್ವಾ (Krupa Alva), ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಅವರಿಗೆ ಬೆಂಗಳೂರಿನ 66ನೇ ಸಿಸಿಹೆಚ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸ್ಟಿಂಗ್ ಆಪರೇಷನ್ ಕುರಿತಂತೆ ಸಿದ್ದರಾಮಯ್ಯನವರು ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದ ಸಿಸಿಬಿ ಪೊಲೀಸರು, ಈ ಮೂವರನ್ನೂ ಸುದೀರ್ಘ ವಿಚಾರಣೆಗೆ ಒಳಪಡಿಸಿ ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದರು. ತನಿಖೆ ತೀವ್ರಗೊಂಡ ಬೆನ್ನಲ್ಲೇ ಬಂಧನದಿಂದ ತಪ್ಪಿಸಿಕೊಳ್ಳಲು ಆರೋಪಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಮತ್ತು ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು ಎಂಬ ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಆದೇಶ ಹೊರಡಿಸಿದೆ.

ಇದೇ ಪ್ರಕರಣದಲ್ಲಿ ಈ ಹಿಂದೆ ಖಾಸಗಿ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ ಅವರಿಗೆ ಅಕ್ಟೋಬರ್ 23ರಂದು ನ್ಯಾಯಾಲಯವು ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ರಕ್ಷಣೆ ಒದಗಿಸಿತ್ತು. ಇದೀಗ ಉಳಿದ ಮೂವರಿಗೂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿರುವುದರಿಂದ ಸಿಸಿಬಿ ತನಿಖೆಯ ಮುಂದಿನ ನಡೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ವೋಟರ್ ಐಡಿ ಕಳೆದುಹೋಗಿದೆಯೇ? ಮೊಬೈಲ್‌ನಲ್ಲೇ ಡೌನ್‌ಲೋಡ್ ಮಾಡಿಕೊಳ್ಳಿ ಡಿಜಿಟಲ್ ಕಾರ್ಡ್






