ಬೆಂಗಳೂರು : ಬೆಂಗಳೂರಿನಲ್ಲಿ ನಡೆಯುವ ಮೆಟ್ರೋ ಉದ್ಘಾಟನಾ (Metro Inauguration) ಕಾರ್ಯಕ್ರಮದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರಿಗೆ ಮಾತನಾಡಲು ಅವಕಾಶ ನಿರಾಕರಿಸಲಾಗಿದೆ. ರಾಜ್ಯದ ಪರವಾಗಿ ನ್ಯಾಯಯುತ ಪಾಲು ಕೇಳಿದ್ದಕ್ಕಾಗಿ ಈ ರೀತಿಯ ಶಿಕ್ಷೆ ನೀಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೆಟ್ರೋ ಉದ್ಘಾಟನಾ ಸಭಾ ಕಾರ್ಯಕ್ರಮದ ಆರಂಭಿಕ ಡ್ರಾಫ್ಟ್‌ನಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರಿಗೆ ಭಾಷಣ ಮಾಡಲು ಅವಕಾಶ ನಿಗದಿಯಾಗಿತ್ತು. ಆದರೆ, ನಿನ್ನೆ ರಾತ್ರಿ ಬಿಡುಗಡೆಯಾದ ಅಂತಿಮ ಕಾರ್ಯಕ್ರಮದ ಪಟ್ಟಿಯಲ್ಲಿ ಉದ್ದೇಶಪೂರ್ವಕವಾಗಿ ಅವರ ಮಾತನ್ನು ಕಟ್ ಮಾಡಲಾಗಿದೆ. ಈ ಮೂಲಕ ವೇದಿಕೆಯಲ್ಲಿ ತಮ್ಮ ದನಿ ಅಡಗಿಸುವ ಪ್ರಯತ್ನ ನಡೆದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಮೆಟ್ರೋ ಯೋಜನೆಗೆ ಬಹುತೇಕ ಬಂಡವಾಳವನ್ನು ನಮ್ಮ ಕಡೆಯಿಂದಲೇ ಭರಿಸಲಾಗಿದೆ. ಹೀಗಿದ್ದರೂ ಕರ್ನಾಟಕ ರಾಜ್ಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಕೇಳಿದ್ದಕ್ಕಾಗಿ ಈ ರೀತಿ ಶಿಕ್ಷೆ ನೀಡಲಾಗುತ್ತಿದೆ. ರಾಜ್ಯದ ಹಕ್ಕನ್ನು ಪ್ರತಿಪಾದಿಸಿದ ಕಾರಣಕ್ಕಾಗಿಯೇ ಈ “ಬಹುಮಾನ” ದೊರೆತಿದೆ ಎಂದು ಅವರು ಮಾರ್ಮಿಕವಾಗಿ ನುಡಿದಿದ್ದಾರೆ.
ಕಾರ್ಯಕ್ರಮದಲ್ಲಿ ನನ್ನ ಮಾತಿಗೆ ಕತ್ತರಿ ಹಾಕಬಹುದು, ಆದರೆ ಬೆಂಗಳೂರಿನ ಅಭಿವೃದ್ಧಿಗಾಗಿ ನಾನು ಮಾಡುವ ಕೆಲಸವನ್ನು ಯಾರೂ ನಿಲ್ಲಿಸಲು ಸಾಧ್ಯವಿಲ್ಲ. ಎಷ್ಟೇ ಅಡೆತಡೆಗಳು ಎದುರಾದರೂ ಲೆಕ್ಕಿಸದೆ, ಮುಂದಿನ ದಿನಗಳಲ್ಲಿ ಈ ನಗರದ ಪ್ರಗತಿಗಾಗಿ ಇನ್ನೂ ಹೆಚ್ಚಿನ ಪರಿಶ್ರಮದಿಂದ ಶ್ರಮಿಸುತ್ತೇವೆ ಎಂದು ಸಚಿವರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
ಭಾರತದ ವೀಸಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ: ವೀಸಾ ವಿಭಾಗಗಳು 9ಕ್ಕೆ ಇಳಿಕೆ






