• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾದ ಚುನಾವಣಾ ಫಲಿತಾಂಶ

by
October 24, 2019
in ರಾಜಕೀಯ
0
ರಾಜ್ಯ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾದ ಚುನಾವಣಾ ಫಲಿತಾಂಶ
Share on WhatsAppShare on FacebookShare on Telegram

ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ಮತ್ತು ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶಗಳು ಬಿಜೆಪಿಗೆ ಖಂಡಿತವಾಗಿಯೂ ಎಚ್ಚರಿಕೆ ಗಂಟೆ. ಅಷ್ಟೇ ಅಲ್ಲ, ಮುಂದಿನ ಡಿಸೆಂಬರ್ ತಿಂಗಳಲ್ಲಿ ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ವಿಚಾರದಲ್ಲಿ ರಾಜ್ಯದ ಬಿಜೆಪಿ ಸರ್ಕಾರ ತಲೆಬಿಸಿ ಮಾಡಿಕೊಳ್ಳುವಂತೆಯೂ ಮಾಡಿದೆ. ಸರ್ಕಾರ ಉಳಿಸಿಕೊಳ್ಳಲು ಸಾಧ್ಯವೇ ಎಂಬ ಪ್ರಶ್ನೆಯೂ ಕಾಣಿಸಿಕೊಳ್ಳಲಾರಂಭಿಸಿದೆ.

ADVERTISEMENT

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬಂದಿರಬಹುದು. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಡೆದ ಸ್ಥಾನಗಳಲ್ಲಿ ಸಾಕಷ್ಟು ಸ್ಥಾನಗಳನ್ನು ಕಳೆದುಕೊಂಡಿದೆ. 2014ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಒಟ್ಟಾಗಿ 185 ಸ್ಥಾನ ಗಳಿಸಿದ್ದರೆ ಈ ಬಾರಿ ಮೈತ್ರಿಕೂಟದ ಸಂಖ್ಯಾಬಲ 160ಕ್ಕೆ ಕುಸಿದಿದೆ. ಅಂದರೆ, ಸರಿಸುಮಾರು 20 ಸ್ಥಾನಗಳನ್ನು ಕಳೆದುಕೊಂಡಿದೆ. ಹರಿಯಾಣದಲ್ಲಿ ಸರಳ ಬಹುಮತದೊಂದಿಗೆ ಅಧಿಕಾರದಲ್ಲಿದ್ದ ಪಕ್ಷ ಈ ಬಾರಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಅಷ್ಟೇ. 2014ರಲ್ಲಿ 46 ಸ್ಥಾನ ಪಡೆದಿದ್ದ ಪಕ್ಷ ಈ ಬಾರಿ 39 ಸ್ಥಾನಗಳಿಗೆ (ಎರಡೂ ರಾಜ್ಯಗಳ ಫಲಿತಾಂಶ, ವರದಿ ಪ್ರಕಟಿಸುವ ಹೊತ್ತಿಗೆ) ತೃಪ್ತಿಪಟ್ಟುಕೊಂಡಿದೆ.

ಅದೇ ರೀತಿ ವಿವಿಧ ರಾಜ್ಯಗಳ ಉಪ ಚುನಾವಣೆಯಲ್ಲೂ ಬಿಜೆಪಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಅಸ್ಸಾಂಗಳಲ್ಲಿ ಪಕ್ಷ ಗೆಲುವು ಸಾಧಿಸಿದೆಯಾದರೂ ರಾಜಸ್ತಾನದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಜಯ ಸಾಧಿಸಿದೆ. ಪಂಜಾಬ್‍ನ 4 ಕ್ಷೇತ್ರಗಳಲ್ಲಿ , 3ರಲ್ಲಿ ಕಾಂಗ್ರೆಸ್ ಮತ್ತು 1 ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿದಳ ಜಯ ದಾಖಲಿಸಿದೆ. ಒಡಿಶಾದ ಎರಡು ಸ್ಥಾನಗಳಲ್ಲಿ ಬಿಜು ಜನತಾದಳ ಜಯಿಸಿದೆ. ಪ್ರಮುಖವಾಗಿ ಪಕ್ಷಾಂತರಿಗಳ ಚುನಾವಣೆಯಾಗಿದ್ದ ಗುಜರಾತ್‍ನ 6 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆರು ಕ್ಷೇತ್ರಗಳ ಪೈಕಿ ಬಿಜೆಪಿ ಗೆದ್ದಿದ್ದು ಮೂರು ಮಾತ್ರ. ಉಳಿದ ಮೂರು ಸ್ಥಾನಗಳು ಕಾಂಗ್ರೆಸ್ ಪಾಲಾಗಿವೆ.

ರಾಜ್ಯದ ಉಪ ಚುನಾವಣೆಗೆ ಎಚ್ಚರಿಕೆ ಗಂಟೆ ಏಕೆ?

ಮುಂದಿನ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಪ್ರಮುಖವಾಗಿ ಚರ್ಚೆಗೆ ಬರಲಿರುವ ಅಂಶಗಳು ಪ್ರವಾಹ ಪರಿಹಾರ ಮತ್ತು ಶಾಸಕರ ಪಕ್ಷಾಂತರ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಬರಲು ಕಾರಣರಾದ 15 ಮಂದಿಗೂ ಬಿಜೆಪಿಯಿಂದ ಟಿಕೆಟ್ ನೀಡಬೇಕಾಗುತ್ತದೆ. ಹೀಗಾಗಿ ಪ್ರಸ್ತುತ ಮಹಾರಾಷ್ಟ್ರ, ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ವಿವಿಧ ರಾಜ್ಯಗಳ ವಿಧಾನಸಭಾ ಉಪ ಚುನಾವಣೆಗಳ ಫಲಿತಾಂಶ ರಾಜ್ಯಕ್ಕೆ ಎಚ್ಚರಿಕೆ ಗಂಟೆ ಆಗಲಿದೆ. ರಾಜ್ಯದಲ್ಲೂ ಇದೇ ಪರಿಸ್ಥಿತಿ ಇರುವುದರಿಂದ ಬಿಜೆಪಿ ಆತಂಕಕ್ಕೆ ಒಳಗಾಗಲು ಮೂರು ಕಾರಣಗಳಿವೆ.

ಕಾರಣ-1

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ಹೇಗೆ ಸ್ಪಂದಿಸುತ್ತದೆ ಎಂಬುದು ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ. ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಹಾಪುರ ಜಿಲ್ಲೆಗಳಲ್ಲಿ ಇತ್ತೀಚೆಗೆ ಭಾರೀ ಪ್ರವಾಹ ಬಂದಿತ್ತು. ಆದರೆ, ಸರ್ಕಾರ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಲ್ಲಿ ಹೆಚ್ಚು ಗಮನಕೊಡದೆ ಚುನಾವಣೆಯತ್ತ ಗಮನಹರಿಸಿದ್ದು ಫಲಿತಾಂಶದಲ್ಲಿ ವ್ಯಕ್ತವಾಗಿದೆ. ಈ ಎರಡೂ ಜಿಲ್ಲೆಗಳ ಒಟ್ಟು 18 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿಗೆ ಕೇವಲ ಎರಡು ಸ್ಥಾನ ದೊರೆತರೆ, ಒಂದು ಸ್ಥಾನ ಶಿವಸೇನೆಗೆ ಸಿಕ್ಕಿದೆ. ಉಳಿದ 15 ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಪಿ ಗೆದ್ದಿದೆ. ಅದೇ ರೀತಿ ಬರಗಾಲ ಆವರಿಸಿರುವ ವಿದರ್ಭ ವಿಭಾಗದಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಹಿನ್ನಡೆ ಅನುಭವಿಸಿದೆ. ಅಂದರೆ, ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟದ ಪ್ರದರ್ಶನ ಕುಂಠಿತವಾಗಲು ಪ್ರಕೃತಿ ವಿಕೋಪಕ್ಕೆ ಒಳಗಾದ ಪ್ರದೇಶಗಳಲ್ಲಿ ಆಗಿರುವ ಸೋಲೇ ಕಾರಣ ಎಂಬುದು ಸ್ಪಷ್ಟ.

ಪ್ರಸ್ತುತ ರಾಜ್ಯದಲ್ಲೂ ಪ್ರವಾಹ ಪರಿಸ್ಥಿತಿ ಇದೆ. ಉತ್ತರ ಕರ್ನಾಟಕ ಎರಡು ಸತತ ಭಾರೀ ಪ್ರವಾಹದಿಂದ ನಲುಗಿ ಹೋಗಿದೆ. ಪರಿಹಾರ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ, ಕೇಂದ್ರ ಸರ್ಕಾರ ಅಗತ್ಯ ನೆರವು ಕೊಡುತ್ತಿಲ್ಲ ಎಂಬ ಆರೋಪವಿದೆ. ಉಪ ಚುನಾವಣೆ ನಡೆಯುವ ಬಹುತೇಕ ಕ್ಷೇತ್ರಗಳು ಈ ಭಾಗದಲ್ಲೇ ಬರುತ್ತವೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೊರತುಪಡಿಸಿ ಇತರೆ ಸಚಿವರ ಕಾರ್ಯವೈಖರಿ ಬಗ್ಗೆ ಸಂತ್ರಸ್ತರಿಗೆ ಬೇಸರವಿದೆ. ಕೇಂದ್ರ ಸರ್ಕಾರ ಅಗತ್ಯ ಹಣ ಬಿಡುಗಡೆ ಮಾಡಿಲ್ಲ ಎಂಬ ಆಕ್ರೋಶವಿದೆ. ಚುನಾವಣೆ ನಡೆದಾಗ ಈ ಆಕ್ರೋಶ ಮತಯಂತ್ರಗಳಲ್ಲಿ ದಾಖಲಾದರೆ ಆಗ ಬಿಜೆಪಿ ಸರ್ಕಾರ ಸಂಕಷ್ಟಕ್ಕೆ ಸಿಲುಕಬಹುದು.

ಕಾರಣ-2

ಹರಿಯಾಣಾದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಲು ಕಾರಣವಾಗಿದ್ದು ಜಾತಿ, ಆಡಳಿತ ವಿರೋಧಿ ಅಲೆಗಿಂತ ಹೆಚ್ಚಾಗಿ ನಿಷ್ಠಾವಂತರಿಗೆ ಕೈಕೊಟ್ಟು ಸೆಲಬ್ರಿಟಿಗಳಿಗೆ ಟಿಕೆಟ್ ನೀಡಿದ ವಿಚಾರ. ಟಿಕೆಟ್ ಹಂಚಿಕೆಯಲ್ಲಿ ಈ ರೀತಿಯಾಗಿರುವುದು ಕೆಲವೇ ಕ್ಷೇತ್ರಗಳಲ್ಲಾದರೂ ರಾಜ್ಯದಲ್ಲಿ ಪರಿಣಾಮ ಬೀರಿತ್ತು. ಇದರಿಂದಾಗಿ ನಿಷ್ಠಾವಂತ ಮುಖಂಡರು ಮತ್ತು ಕಾರ್ಯಕರ್ತರಿಗೆ ಬೇಸರವಾಗಿ ಚುನಾವಣೆಯಲ್ಲಿ ತಟಸ್ಥರಾಗಿ ಉಳಿದಿದ್ದರು. ಅದೇ ರೀತಿ ಗುಜರಾತಿನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಆರು ಮಂದಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಪಕ್ಷದ ನಿಷ್ಠಾವಂತರು ಬೇಸರಗೊಂಡಿದ್ದರು. ಪರಿಣಾಮ ಆರರಲ್ಲಿ ಮೂರು ಕಡೆ ಬಿಜೆಪಿ ಸೋತಿತು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ಉರುಳಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾದವರಿಗೆ ಉಪ ಚುನಾವಣೆಯಲ್ಲಿ ಟಿಕೆಟ್ ನೀಡಲೇ ಬೇಕಾಗುತ್ತದೆ. ಇದರಿಂದ ಪಕ್ಷದಲ್ಲಿ ನಿಷ್ಟಾವಂತರಿಗೆ, ಅದರಲ್ಲೂ ಮಾಜಿ ಶಾಸಕರು ಮತ್ತು ಕಳೆದ ಬಾರಿ ಸೋತವರಿಗೆ ಬೇಸರ, ಅಸಮಾಧಾನ ಉಂಟಾಗುತ್ತದೆ. ಒಂದೋ ಅವರು ಚುನಾವಣೆಯಲ್ಲಿ ತಟಸ್ಥರಾಗಬಹುದು ಇಲ್ಲವೇ ಟಿಕೆಟ್ ಸಿಕ್ಕಿದರೆ ಬೇರೆ ಪಕ್ಷ ಸೇರಬಹುದು. ಹರಿಯಾಣ ಮತ್ತು ಗುಜರಾತ್ ನಂತೆ ಆದರೆ ಹೊರಗಿನಿಂದ ಬಂದವರಿಗೆ ಸೋಲು ಉಂಟಾಗಬಹುದು.

ಕಾರಣ-3

ಬಿಜೆಪಿಯೇತರ ಸರ್ಕಾರಗಳಿರುವ ಮೂರು ರಾಜ್ಯಗಳ ಉಪ ಚುನಾವಣೆಯಲ್ಲಿ ಅಧಿಕಾರದಲ್ಲಿರುವ ಪಕ್ಷಗಳು ಗೆಲುವು ಸಾಧಿಸಿದೆ. ರಾಜಸ್ತಾನದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಜಯ ಸಾಧಿಸಿದರೆ, ಪಂಜಾಬ್‍ನ 4 ಕ್ಷೇತ್ರಗಳಲ್ಲಿ , 3ರಲ್ಲಿ ಕಾಂಗ್ರೆಸ್, ಒಡಿಶಾದ ಎರಡು ಸ್ಥಾನಗಳಲ್ಲಿ ಬಿಜು ಜನತಾದಳ ಜಯಿಸಿದೆ. ಅಂದರೆ, ಬಿಜೆಪಿಯೇತರ ಪಕ್ಷಗಳನ್ನು ಜನ ಒಪ್ಪಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.

ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಶಕ್ತಿಯುತವಾಗಿಯೇ ಇದೆ. ಕಳೆದ ವಿಧಾನಸಭೆಯಲ್ಲಿ ಕಾಂಗ್ರೆಸ್ ಸೋಲಲು ಜಾತಿ ವಿಚಾರದಲ್ಲಿ ತೆಗೆದುಕೊಂಡ ನಿರ್ಧಾರಗಳೇ ಕಾರಣವಾದವು. ಈ ವಿಚಾರ ಜನರಿಂದ ಮರೆಯಾಗುತ್ತಿದೆ. ಆದರೆ, ಪ್ರವಾಹದ ವಿಚಾರದಲ್ಲಿ ಲಾಭ ಪಡೆಯಲು ಕಾಂಗ್ರೆಸ್ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಿದ್ದು, ಇದಕ್ಕೆ ಮತದಾರರು ಸ್ಪಂದಿಸಿದರೆ ಆಗ ಬಿಜೆಪಿಗೆ ಕಷ್ಟದ ಪರಿಸ್ಥಿತಿ ಬರಬಹುದು.

ಹೀಗಾಗಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಉಪ ಚುನಾವಣೆಯ ಫಲಿತಾಂಶವನ್ನು ಆಧರಿಸಿ ರಾಜ್ಯದಲ್ಲಿ ಇರುವ ಅಂತಹದ್ದೇ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸದೇ ಇದ್ದಲ್ಲಿ ಬಿಜೆಪಿ ಸರ್ಕಾರ ಇಕ್ಕಟ್ಟಿಗೆ ಸಿಲುಕಬಹುದು. ಹೀಗಾಗಿಯೇ ಬಿಜೆಪಿಗೆ ಈ ಚುನಾವಣಾ ಫಲಿತಾಂಶಗಳು ಎಚ್ಚರಿಕೆಯ ಗಂಟೆಯಾಗುವುದರಲ್ಲಿ ಸಂಶಯವೇ ಇಲ್ಲ.

Tags: Assembly PollsBJPCongress PartyDisqualified MLAsHaryana Assembly PollsMaharashtra Assembly Pollsಅನರ್ಹ ಶಾಸಕರುಕಾಂಗ್ರೆಸ್ ಪಕ್ಷಬಿಜೆಪಿಮಹಾರಾಷ್ಟ್ರ ವಿಧಾನಸಭೆವಿಧಾನಸಭಾ ಚುನಾವಣೆಹರಿಯಾಣ ವಿಧಾನಸಭೆ
Previous Post

ಬುದ್ಧಿ ಕಲಿಯಲು ನಿರಾಕರಿಸುತ್ತಿರುವ ಕಾಂಗ್ರೆಸ್ ಹೈಕಮಾಂಡ್

Next Post

ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಇದು ಸಕಾಲ

Related Posts

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ
ಕರ್ನಾಟಕ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

by ಪ್ರತಿಧ್ವನಿ
December 13, 2025
0

ಮೈಸೂರಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಶ್ಮಾಮಿತ್ರ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿನೇಶ್ ಗುಂಡೂರಾವ್ ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ...

Read moreDetails
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025
Next Post
ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಇದು ಸಕಾಲ

ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಇದು ಸಕಾಲ

Please login to join discussion

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada