ಪಶ್ಚಿಮ ಬಂಗಾಲ ಹಾಗೂ ಒಡಿಸ್ಸಾದ ತೀರ ಪ್ರದೇಶಗಳಲ್ಲಿ ಅಪ್ಪಳಿಸಿದ ಅಂಫಾನ್ ಚಂಡಮಾರುತವು ಬಂಗಾಲದಲ್ಲಿ ಭೀಕರ ಹಾನಿಯನ್ನುಂಟು ಮಾಡಿದೆ. ಈ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಚಂಡಮಾರುತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಆಗ್ರಹಿಸಿದ್ದರು.
ಕರೋನಾ ಸಾಂಕ್ರಾಮಿಕ ರೋಗ, ಆರ್ಥಿಕ ಮುಗ್ಗಟ್ಟು ಹಾಗೂ ಅಂಫಾನ್ ಚಂಡಮಾರುತ. ನಾವು ಈಗ ಈ ಮೂರು ದುರಂತಗಳನ್ನು ಎದುರಿಸುತ್ತಿದ್ದೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.
ಇಂದು ಬೆಳಿಗ್ಗೆ ಚಂಡಮಾರುತದ ವೈಮಾನಿಕ ಸಮೀಕ್ಷೆಯ ಬಳಿಕ ಮಾತನಾಡಿದ ಮೋದಿ ಪಶ್ಚಿಮ ಬಂಗಾಳಕ್ಕೆ 1,000 ಕೋಟಿ ಮಧ್ಯಂತರ ಪರಿಹಾರವನ್ನು ನೀಡುವುದಾಗಿ ಹೇಳಿದ್ದಾರೆ.