ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಪಕ್ಷದ ವತಿಯಿಂದ ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೊಂಡಿರುವುದನ್ನು ಅಧಿಕೃತವಾಗಿ ಘೋಷಿದ್ದಾರೆ.
ರಾಜ್ಯಸಭೆಗೆ ಕರ್ನಾಟಕದಿಂದ ಒಬ್ಬ ಸದಸ್ಯನನ್ನು ಆಯ್ಕೆ ಮಾಡಲು ಅವಕಾಶವಿದ್ದು ಆ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೊಳ್ಳುವುದು ಬಹುತೇಕ ಖಚಿತವಾಗಿದೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 19 ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಉಳಿದ ಮೂರು ಅಭ್ಯರ್ಥಿಗಳ ಆಯ್ಕೆ ಇನ್ನೂ ಬಹಿರಂಗಗೊಳಿಸಿಲ್ಲ.









