ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಕರೋನಾ ಪ್ರಕರಣಗಳನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರ ಹರಸಾಹಸ ಪಡುತ್ತಿದೆ. ದಿನಕ್ಕೊಂದು ನಿರ್ಧಾರ ತಳೆದು ಗೊಂದಲ ಸೃಷ್ಟಿಸುತ್ತಿರುವ ಸರ್ಕಾರ ಪ್ರತಿ ಭಾನುವಾರ ಲಾಕ್‌ಡೌನ್ ಮಾಡುವುದಾಗಿ ಘೋಷಿಸಿದೆ.
ಕಳೆದ 24 ಗಂಟೆಗಳಲ್ಲಿ 918 ಹೊಸ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 11,923 ತಲುಪಿದೆ. ಇಂದು 371 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು ಒಟ್ಟು 7,287 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಕರೋನಾ ಸೋಂಕು ರಾಜ್ಯದಲ್ಲಿ 11 ಮಂದಿಯನ್ನು ಬಲಿ ಪಡೆದಿದ್ದು ಒಟ್ಟು ಮರಣ ಪ್ರಮಾಣ 191 ತಲುಪಿದೆ. 4441 ಸಕ್ರಿಯ ಪ್ರಕರಣಗಳಿರುವ ರಾಜ್ಯದಲ್ಲಿ 197 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಭಾರತದಲ್ಲಿ 18,552 ಹೊಸ ಕರೋನಾ ಸೋಂಕಿತರು ಪತ್ತೆಯಾಗಿದ್ದು ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದೆ. ಸದ್ಯ 1,97,387 ಸಕ್ರಿಯ ಪ್ರಕರಣಗಳಿರುವ ಭಾರತದಲ್ಲಿ 2,95,881 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದುವರೆಗೂ ಕರೋನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 15,685 ತಲುಪಿದೆ.
