• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಸಂಪುಟ ಸಭೆ: ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ವಯೋಮಿತಿ ಹೆಚ್ಚಳವಾಗುವುದೇ?

by
July 9, 2020
in ಕರ್ನಾಟಕ
0
ಸಚಿವ ಸಂಪುಟ ಸಭೆ: ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ವಯೋಮಿತಿ ಹೆಚ್ಚಳವಾಗುವುದೇ?
Share on WhatsAppShare on FacebookShare on Telegram

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಸಾವಿರಾರು ಆಕಾಂಕ್ಷಿಗಳು ಅರ್ಜಿ ಹಾಕಿಕೊಂಡು ಪೊಲೀಸ್‌ ಇಲಾಖೆ ಸೇರಿಕೊಳ್ಳಲು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಆದರೆ ಪೊಲೀಸ್‌ ಆಗಬೇಕು ಎಂದು ಕಾಯುತ್ತಿದ್ದ ಆಕಾಂಕ್ಷಿಗಳಿಗೆ ಸಣ್ಣದೊಂದು ಸಮಸ್ಯೆ ಎದುರಾಗಿದೆ ಅದುವೇ ವಯೋಮಿತಿ ವಿಚಾರ.

ADVERTISEMENT

ದೇಶದ ಹಲವು ರಾಜ್ಯಗಳಲ್ಲಿ ಪೊಲೀಸ್‌ ಕಾನ್ಸ್‌ಟೇಬಲ್‌ ವಯೋಮಿತಿಯನ್ನು ಹೆಚ್ಚಳ ಮಾಡಿ ನೂತನ ಅಧಿಸೂಚನೆ ಹೊರಡಿಸಲಾಗಿದೆ. ಇದು ಕರೋನಾ ಸಂಕಷ್ಟದಲ್ಲಿ ಸಿಲುಕಿರುವ ಅಭ್ಯರ್ಥಿಗಳಿಗೆ ಸಂತಸವನ್ನುಂಟು ಮಾಡಿದೆ. ಈ ಬಗ್ಗೆ ಪ್ರತಿಧ್ವನಿ ಕೂಡ ವರದಿ ಮಾಡಿತ್ತು. ರಾಜ್ಯ ಸರ್ಕಾರ ಕೂಡ ಈ ಕುರಿತು ಗಮನ ಹರಿಸಬೇಕು. ವಯೋಮಿತಿ ಹೆಚ್ಚಳ ಮಾಡುವ ಮೂಲಕ ನಮಗೂ ಅವಕಾಶ ಸಿಗುವಂತೆ ಮಾಡಬೇಕು ಎಂದು ಆಕಾಂಕ್ಷಿಗಳು ಆಗ್ರಹ ಮಾಡಿದ್ದರು.

Also Read: ದೇಶಕ್ಕೆಲ್ಲಾ ಒಂದು ನ್ಯಾಯ..! ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೊಂದು..!!

ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯ ಮಾಡಿದ್ದಾರೆ. ಅನ್ಯ ರಾಜ್ಯಗಳಲ್ಲಿ ವಯೋಮಿತಿ ಏರಿಕೆ ಮಾಡಿರುವಂತೆ ನಮ್ಮ ರಾಜ್ಯದಲ್ಲೂ ವಯೋಮಿತಿ ಏರಿಕೆ ಮಾಡುವ ಮೂಲಕ ಸಾವಿರಾರು ಜನರಿಗೆ ಅನುಕೂಲ ಮಾಡಿಕೊಂಡುವಂತೆ ಮನವಿ ಮಾಡಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾನ್ಸ್‌ಟೇಬಲ್‌ ಹುದ್ದೆಗೆ ಕನಿಷ್ಠ 19 ಹಾಗೂ ಗರಿಷ್ಠ 25 ಮತ್ತು ಎಸ್‌ಸಿ ಎಸ್‌ಎಸ್ಟಿ ಅಭ್ಯರ್ಥಿಗಳಿಗೆ 27 ವರ್ಷಗಳೆಂದು ನಿಗದಿ ಮಾಡಲಾಗಿದೆ. ಇದೀಗ ಬೇರೆ ರಾಜ್ಯಗಳಲ್ಲಿ ಹೆಚ್ಚಳ ಮಾಡಿರುವಂತೆ ಹೆಚ್ಚಳ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ರಾಜ್ಯದ ನಾನಾ ಮೂಲೆಗಳಿಂದ ಸ್ವತಃ ಗೃಹ ಸಚಿವರಿಗೆ ಆಕಾಂಕ್ಷಿತರು ಕರೆ ಮಾಡಿ ಮಾತನಾಡಿದ್ದು, ವಯೋಮಿತಿ ಹೆಚ್ಚಳಕ್ಕೆ ಮನವಿ ಮಾಡಿಕೊಂಡಿದ್ದಾರೆ. ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಈ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುತ್ತೇನೆ ಎಂದು ಅಭ್ಯರ್ಥಿಗಳೆಗೆ ಭರವಸೆ ಕೊಟ್ಟಿದ್ದಾರೆ.

Also Read: ರಾಜ್ಯ ಆರ್ಥಿಕ ಬಿಕ್ಕಟ್ಟು: ಗೃಹ ರಕ್ಷಕ ಇಲಾಖೆಯಲ್ಲಿ ಭಾರೀ ಉದ್ಯೋಗ ಕಡಿತ

ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಈ ಬಗ್ಗೆ ಅಂತಿಮ ನಿರ್ಧಾರ ಹೊರ ಬೀಳುವ ನಿರೀಕ್ಷೆಯಲ್ಲಿ ಇದ್ದಾರೆ ಸಾವಿರಾರು ಆಕಾಂಕ್ಷಿಗಳು. ಬಸವರಾಜ ಬೊಮ್ಮಾಯಿ ಕರೋನಾ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಕಾನ್ಸ್‌ಟೇಬಲ್‌ ಹುದ್ದೆಯ ಆಕಾಂಕ್ಷಿಗಳ ಮನವಿಗೆ ಸ್ಪಂದಿಸುತ್ತಾರಾ ಎನ್ನುವ ಪ್ರಶ್ನಾರ್ಥಕ ಚಿನ್ಹೆಗೆ ಉತ್ತರ ಸಿಗಲಿದೆ. ಬಹುತೇಕ ವಯೋಮಿತಿ ಹೆಚ್ಚಳದ ಬಗ್ಗೆ ಅಂತಿಮ ನಿರ್ಧಾರ ಹೊರ ಬೀಳಲಿದೆ ಎನ್ನಲಾಗಿದೆ.

Tags: Cabinet MeetingPolice constable recruitmentಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಸಚಿವ ಸಂಪುಟ ಸಭೆ
Previous Post

ಭಾರತದ ವಿದೇಶಾಂಗ ನೀತಿ, ನೋಟು ನಿಷೇಧ ಪಾಠಗಳನ್ನು ಕೈ ಬಿಟ್ಟ CBSE

Next Post

ಸರ್ಕಾರದಿಂದ ಯಾವುದೇ ತಪ್ಪು ನಡೆದಿಲ್ಲ, ಎಲ್ಲಾ ವ್ಯವಸ್ಥೆ ಮಾಡುತ್ತೇವೆ – ಡಿಸಿಎಂ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಸರ್ಕಾರದಿಂದ ಯಾವುದೇ ತಪ್ಪು ನಡೆದಿಲ್ಲ

ಸರ್ಕಾರದಿಂದ ಯಾವುದೇ ತಪ್ಪು ನಡೆದಿಲ್ಲ, ಎಲ್ಲಾ ವ್ಯವಸ್ಥೆ ಮಾಡುತ್ತೇವೆ - ಡಿಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada