ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜುಲೈ 14ರಂದು ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ 2496 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಒಟ್ಟು ಕರೋನಾ ಸೋಂಕಿತರ ಸಂಖ್ಯೆ 44,077ಕ್ಕೇರಿದೆ.
ಬೆಂಗಳೂರಿನಲ್ಲಿ 1267 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ 125, ಕಲಬುರಗಿಯಲ್ಲಿ 121 ಹಾಗೂ ಧಾರವಾಡದಲ್ಲಿ 100 ಪ್ರಕರಣಗಳು ದಾಖಲಾಗಿವೆ. ಈ ನಾಲ್ಕು ಜಿಲ್ಲೆಗಳು ಸೋಂಕಿತ ಪ್ರಕರಣಗಳಲ್ಲಿ ನೂರರ ಸಂಖ್ಯೆಯನ್ನು ದಾಟಿವೆ.
ಇಂದು 1142 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ರಾಜ್ಯದಲ್ಲಿ 17.390 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ರಾಜ್ಯದಲ್ಲಿ ಸಕ್ರಿಯವಾಗಿರುವ 25,839 ಆರೋಗ್ಯ ಸ್ಥಿತಿ ಗಂಭೀರವಾಗಿರುವ 540 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದಾಗಿ 842 ಮಂದಿ ಅಸುನೀಗಿದ್ದಾರೆಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.