• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಸಿದ್ದರಾಮಯ್ಯ ಆಗ್ರಹ

by
July 18, 2020
in ಕರ್ನಾಟಕ
0
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ಕಳೆದ ಎಂಟು ದಿನಗಳಿಂದ ಆಶಾ ಕಾರ್ಯಕರ್ತೆಯರು ಬೀದಿಯಲ್ಲಿ ನಿಂತು ಪ್ರತಿಭಟಿಸುತ್ತಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಕೇಳುತ್ತಿದ್ದಾರೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಕೂಡ ಸರಳವಾಗಿದ್ದು, ಆಶಾ ಕಾರ್ಯಕತೆಯರಿಗೆ ಮಾಸಿಕ ರೂ.12000 ಗೌರವಧನ ಖಾತರಿಪಡಿಸಬೇಕು. ಹಾಗೂ ಕೋವಿಡ್-19 ವಿರುದ್ದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷಣಾ ಸಾಮಗ್ರಿಗಳನ್ನು ನೀಡಬೇಕು ಎಂದಷ್ಟೇ ಕಾರ್ಯಕರ್ತರು ಸರ್ಕಾರದ ಎದುರಿಗಿಟ್ಟಿರುವ ಬೇಡಿಕೆ. ಆದರೆ ಸರ್ಕಾರ ಇದುವರೆಗೂ ಇದಕ್ಕೆ ಕಿವಿಗೊಟ್ಟಿಲ್ಲ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದೇ ವಿಚಾರ ಕುರಿತು ವಿಪಕ್ಷ ನಾಯಕ ಸಿದ್ಧರಾಮಯ್ಯ ಸರ್ಕಾರವನ್ನು ಟೀಕಿಸಿದ್ದಾರೆ. ಕರೋನಾ ವಾರಿಯರ್ಸ್‌ ಎಂದು ಬಣ್ಣಿಸಿ ಹೂಮಳೆಗೆರೆಯುವ ಸರ್ಕಾರ, ಜೀವದ ಹಂಗು ತೊರೆದು ಸೋಂಕಿತರ ಸೇವೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರನ್ನು ಬೀದಿಗೆ ತಂದು ನಿಲ್ಲಿಸಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಯನ್ನು ತಕ್ಷಣ ಈಡೇರಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪರಿಗೆ ಪತ್ರ ಬರೆದಿರುವ ಸಿದ್ಧರಾಮಯ್ಯ, ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರು ತಮ್ಮ ಪ್ರಾಣವನ್ನು ಲೆಕ್ಕಿಸದೇ ಕೋವಿಡ್ -19 ವಿರುದ್ದ ಹೋರಾಟ ನಡೆಸುತ್ತಿದ್ದಾರೆ. ಇವರಲ್ಲಿ ಅನೇಕರಿಗೆ ಕೋವಿಡ್ ಸೋಂಕು ತಗುಲಿದೆ. ಸರ್ಕಾರ ಇವರನ್ನು ಕರೋನಾ ವಾರಿಯರ್ಸ್ ಎಂದು ಕರೆಯಿತು. ಪ್ರಧಾನಿ ಮೋದಿಯವರಾದಿಯಾಗಿ ಚಪ್ಪಳೆ ತಟ್ಟಿ ಹೂ ಮಳೆಗರೆದರು. ಇದಕ್ಕೆ ಜನರು ಸಹ ಸಹಮತ ವ್ಯಕ್ತಪಡಿಸಿದರು. ಆದರೆ ಇವರಿಗೆ ನೀಡುತ್ತಿರುವ ಮಾಸಿಕ ವೇತನ ಕೇವಲ ರೂ.4,000 ರಿಂದ 6,000 ಸಾವಿರ ರೂಗಳು ಮಾತ್ರ ಸರ್ಕಾರ ರೂ.8,000 ರಿಂದ.9,000/ಗಳನ್ನು ನೀಡುವುದಾಗಿ ಬಜೆಟ್ ಘೋಷಿಸಲಾಗಿತ್ತು. ಆದರೆ ಇದುವರೆಗೂ ಕೂಡ 1 ರೂಪಾಯಿ ಕೂಡ ಹೆಚ್ಚಿಸಿಲ್ಲ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರ ಒಂದು ಬಾರಿ ವಿಶೇಷ ಪ್ಯಾಕೇಜ್ ಎಂದು ರಾಜ್ಯದ ಸಹಕಾರ ಇಲಾಖೆಯಿಂದ ರೂ.3,000/- ಗಳನ್ನು ನೀಡುವುದಾಗಿ ಘೋಷಣೆ ಮಾಡಿತ್ತು. ಇದು ಶೇ.50 ರಷ್ಟು ಅಶಾ ಕಾರ್ಯಕರ್ತೆರವರಿಗೆ ತಲುಪಿಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ.

ಅಲ್ಲದೆ ಕೋವಿಡ್-19 ಗೆ ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರವಾಗಿ ಸಂಪೂರ್ಣ ಚಿಕಿತ್ಸೆ ನೀಡಬೇಕು. ಪಾಣ ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಅತ್ಯಂತ ಸಣ್ಣ ಮಟ್ಟದವಾಗಿದೆ. ಅದರಿಂದ ಸರ್ಕಾರವು ಸರಳವಾದ ಈ 2 ಬೇಡಿಕೆಗಳನ್ನು ಮಾನವೀಯವಾಗಿ ಪರಿಗಣಿಸಿ ಈಡೇರಿಸಬೇಕು, ಜನ ಸಂಕಷ್ಟದಲ್ಲಿರುವಾಗ ಆಶಾ ಕಾರ್ಯಕರ್ತೆಯರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕಳೆದ ೮ ದಿನಗಳಿಂದ ಆಶಾ ಕಾರ್ಯಕರ್ತರು ಮುಷ್ಕರ‌ನಿರತರಾಗಿದ್ದಾರೆ.

'ಕೊರೊನಾ ವಾರಿಯರ್ಸ್' ಎಂದು ಬಣ್ಣಿಸಿ ಹೂಮಳೆಗರೆಯುವ ಸರ್ಕಾರ,
ಜೀವದ ಹಂಗು ತೊರೆದು ಸೋಂಕಿತರ ಸೇವೆ ಮಾಡುತ್ತಿರುವ ಆಶಾ ಕಾರ್ಯಕರ್ತೆಯರನ್ನು ಬೀದಿಯಲ್ಲಿ ನಿಲ್ಲಿಸಿದೆ. @CMofKarnataka ತಕ್ಷಣ ಗಮನ ಹರಿಸಿ ಅವರ ಬೇಡಿಕೆ ಈಡೇರಿಸಬೇಕು. pic.twitter.com/TrWO0dimpM

— Siddaramaiah (@siddaramaiah) July 18, 2020


ADVERTISEMENT
Tags: ಆಶಾ ಕಾರ್ಯಕರ್ತೆಯರುಕರೋನಾಸಿದ್ದರಾಮಯ್ಯ
Previous Post

ಕರೋನಾ ಸೋಂಕಿನ ಜೊತೆ ಹೆಚ್ಚುತ್ತಿವೆ ಅಮಾನವೀಯ ಘಟನೆಗಳು

Next Post

ಯೋಗಿ ಕಛೇರಿ ಎದುರು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ-ಮಗಳು

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಯೋಗಿ ಕಛೇರಿ ಎದುರು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ-ಮಗಳು

ಯೋಗಿ ಕಛೇರಿ ಎದುರು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ-ಮಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada