ಕರ್ನಾಟಕ ಸರ್ಕಾರ 10 ಕ್ಕೂ ಹೆಚ್ಚು IAS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರ ಸಂಪೂರ್ಣ ವಿವರ ಇಲ್ಲಿದೆ.
ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ. ರಾಜ್‌ಕುಮಾರ್ ಖತ್ರಿಯವರನ್ನು ಕಾರ್ಮಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಈ ಸ್ಥಾನದಲ್ಲಿದ್ದ ಮಹೇಶ್ವರ್ ರಾವ್ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.
ಮಹಿಳಾ, ಮಕ್ಕಳ ಅಭಿವೃದ್ಧಿ ಮತ್ತು ಸಬಲೀಕರಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಡಾ. ಎನ್ ನಾಗಾಂಬಿಕ ದೇವಿಯವರಿಗೆ ಅದರೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಸಾರ್ವಜನಿಕ ಲ್ಯಾಂಡ್ಸ್ ಕಾರ್ಪೊರೇಷನ್ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮನೋಜ್ ಜೈನ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಯೋಜನಾ ಆಯುಕ್ತರಾಗಿ ನೇಮಿಸಲಾಗಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹುಬ್ಬಳ್ಳಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಜೇಂದ್ರ ಚೋಳನ್ ಪಿ ಯವರನ್ನು ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತರನ್ನಾಗಿ (ಹಣಕಾಸು ಮತ್ತು ಐಟಿ) ವರ್ಗಾವಣೆ ಮಾಡಲಾಗಿದೆ.
ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿದ್ದ ಆರ್ ವಿನೋದ್ ಪ್ರಿಯಾ ಅವರನ್ನು ಸಣ್ಣ, ಮಧ್ಯಮ ಉದ್ಯಮ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ಮೈಸೂರು ಸಕ್ಕರೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಡಾ ಬಿ.ಆರ್. ಮಮತಾರನ್ನು ಸಕಾಲ ಮಿಷನ್‌ನ ಹೆಚ್ಚುವರಿ ಮಿಷನ್ ನಿರ್ದೇಶಕರಾಗಿ ನೇಮಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ ರೂಪೇಶ್ ಅವರನ್ನು ವಿದ್ಯುನ್ಮಾನ ನಾಗರೀಕ ಸೇವಾ ವಿತರಣಾ ನಿರ್ದೇಶನಾಲಯದ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ಬ್ರಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಶೇಷ ಆಯುಕ್ತ (ಹಣಕಾಸು ಮತ್ತು ಐಟಿ) ಪೊಮ್ಮಲಾ ಸುನೀಲ್ ಕುಮಾರ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಗಳಾಗಿ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ.
ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿ ನೇಮಿಸಲಾಗಿದೆ.
ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ದರ್ಶನ್.ಹೆಚ್.ವಿ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆಗಿ ವರ್ಗಾಯಿಸಲಾಗಿದೆ.
ಮೈಸೂರು ಸಕ್ಕರೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಎಚ್.ಎನ್.ಗೋಪಾಲ ಕೃಷ್ಣ ಅವರನ್ನು ನೇಮಿಸಲಾಗಿದೆ.
ಬೆಂಗಳೂರಿನ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ದೇಶಕರಾಗಿದ್ದ ಕವಿತಾ ಎಸ್.ಮನ್ನಿಕೇರಿಯವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ.
ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ ಪಾಟೀಲ್ ಯಲಗೌಡ ಶಿವನಗೌಡ ಮೈಸೂರು ಆಡಳಿತ ತರಬೇತಿ ವಿಭಾಗದಲ್ಲಿ ಜಂಟಿ ನಿರ್ದೇಶಕರಾಗಿ ನೇಮಿಸಲಾಗಿದೆ.