• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಮಮಂದಿರ ನಿರ್ಮಾಣಕ್ಕೆ ನರೇಂದ್ರ ಮೋದಿಯವರ ಯಾವುದೇ ಕೊಡುಗೆ ಇಲ್ಲ: ಸುಬ್ರಮಣಿಯನ್ ಸ್ವಾಮಿ

by
August 3, 2020
in ದೇಶ
0
ರಾಮಮಂದಿರ ನಿರ್ಮಾಣಕ್ಕೆ ನರೇಂದ್ರ ಮೋದಿಯವರ ಯಾವುದೇ ಕೊಡುಗೆ ಇಲ್ಲ: ಸುಬ್ರಮಣಿಯನ್ ಸ್ವಾಮಿ
Share on WhatsAppShare on FacebookShare on Telegram

ಸುಪ್ರೀಂ ಕೋರ್ಟ್‌ನಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅನುಕೂಲಕರವಾದ ತೀರ್ಪು ಬರಲು ಕಾರಣವಾದ ಅಂಶವೆಂದು ಕರೆಯಲ್ಪಡುವ ಯಾವುದನ್ನೂ ಕೇಂದ್ರ ಸರ್ಕಾರ ಮಾಡಲಿಲ್ಲ ಎಂದು ಬಿಜೆಪಿ ಹಿರಿಯ ನಾಯಕರಾದ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

ADVERTISEMENT

ಟಿವಿ 9 ಭಾರತ್‌ವರ್ಷ್ ನಲ್ಲಿ ನಡೆದ ಡಿಬೇಟ್‌ ಒಂದರಲ್ಲಿ ಭಾಗಿಯಾದ ಭಾರತೀಯ ಜನತಾ ಪಕ್ಷದ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಆಗಿರುವ ಸುಬ್ರಮಣಿಯನ್ ಸ್ವಾಮಿ, ಅಯೋಧ್ಯೆಯಲ್ಲಿ ರಾಮ್ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಯಾವುದೇ ಕೊಡುಗೆ ಇಲ್ಲ ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನಾವು ದೇವಾಲಯಕ್ಕಾಗಿ ಎಲ್ಲಾ ವಾದಗಳು ಮತ್ತು ಚರ್ಚೆಗಳನ್ನು ಮಾಡಿದ್ದೇವೆ. ದೇವಾಲಯದ ನಿರ್ಮಾಣಕ್ಕೆ ಅನುಕೂಲಕರವಾದ ತೀರ್ಪು ಸುಪ್ರೀಂ ಕೋರ್ಟ್‌ನಲ್ಲಿ ಬರಲು ಕಾರಣವಾದ ಅಂಶವೆಂದು ಕರೆಯಲ್ಪಡುವ ಯಾವುದನ್ನೂ ಕೇಂದ್ರ ಸರ್ಕಾರ ಮಾಡಲಿಲ್ಲ ಎಂದು ಬಿಜೆಪಿ ಹಿರಿಯ ನಾಯಕರಾದ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

ಮಾಜಿ ಪ್ರಧಾನ ಮಂತ್ರಿಗಳಾದ ರಾಜೀವ್ ಗಾಂಧಿ, ಪಿ.ವಿ.ನರಸಿಂಹ ರಾವ್, ಮತ್ತು ವಿಶ್ವ ಹಿಂದೂ ಪರಿಷತ್ತಿನ ಅಶೋಕ್ ಸಿಂಘಾಲ್ ಅವರು ಅಯೋಧ್ಯೆಯಲ್ಲಿ ರಾಮ್ ದೇವಾಲಯ ನಿರ್ಮಾಣದ ಕಾರ್ಯಸೂಚಿಯನ್ನು ಮುಂದಿಟ್ಟ ಪ್ರಮುಖ ವ್ಯಕ್ತಿಗಳು ಎಂದು ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

Also Read: ಎಸ್ಒಪಿ(SOP) ಪಾಲಿಸಿದರೆ ರಾಮಮಂದಿರ ಭೂಮಿ ಪೂಜೆಗೆ ಸ್ವತಃ ಪ್ರಧಾನಿಯೇ ಹೋಗುವಂತಿಲ್ಲ!

1992 ರ ಡಿಸೆಂಬರ್ 6 ರವರೆಗೆ 16 ನೇ ಶತಮಾನದ ಬಾಬರಿ ಮಸೀದಿ ಆಕ್ರಮಿಸಿಕೊಂಡಿದ್ದ ಸ್ಥಳದಲ್ಲಿಯೇ ಈ ದೇವಾಲಯವನ್ನು ನಿರ್ಮಿಸಲಾಗುತ್ತಿದೆ.. ಇದು ಶ್ರೀ ರಾಮಮ ಜನ್ಮಸ್ಥಳ ಎಂದು ಅವರು ಪ್ರತಿಪಾದಿಸಿ ಅಲ್ಲಿದ್ದ ಬಾಬರಿ ಮಸೀದಿಯನ್ನು ಧ್ವಂಸಗೈಯಲಾಗಿತ್ತು. ಸುದೀರ್ಘ ಕಾನೂನು ಹೋರಾಟದ ನಂತರ, ನವೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ದೇವಾಲಯವನ್ನು ನಿರ್ಮಿಸಲು ಸ್ಥಳವನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ಗೆ ಹಸ್ತಾಂತರಿಸುವಂತೆ ಆದೇಶಿಸಿತ್ತು.‌

ರಾಮ ಮಂದಿರ ಹಾಗೂ ರಫೇಲ್‌ ವಿಮಾನಗಳಿಗೆ ನರೇಂದ್ರ ಮೋದಿ ಅಬಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಪ್ರಧಾನಿ ನರೇಂಧ್ರ ಮೋದಿಗೆ ಧನ್ಯವಾದ ಅರ್ಪಿಸುತ್ತಿದ್ದಾರೆ. ಭಾರತಕ್ಕೆ ರಫೇಲ್‌ ತರಲು ಯುಪಿಎ ಅವಧಿಯಲ್ಲೇ ತೀರ್ಮಾನವಾಗಿತ್ತು. ಈಗ ಸುಬ್ರಮಣಿಯನ್‌ ಸ್ವಾಮಿ ಅವರು ರಾಮಮಂದಿರದ ಕ್ರೆಡಿಟನ್ನು ಕಾಂಗ್ರೆಸ್‌ ನಾಯಕರಾಗಿದ್ದ ಪಿ.ವಿ ನರಸಿಂಹ ರಾವ್‌ ಹಾಗೂ ರಾಜೀವ್‌ ಗಾಂಧಿಗೆ ನೀಡಿದ್ದಾರೆ.

Tags: ನರೇಂದ್ರ ಮೋದಿರಾಮ ಮಂದಿರಸುಬ್ರಮಣಿಯನ್ ಸ್ವಾಮಿ
Previous Post

ಸಿಎಂ ಬಿ.ಎಸ್ ಯಡಿಯೂರಪ್ಪರಿಗೂ ಕರೋನಾ..! ಉಸ್ತುವಾರಿ ಯಾರಿಗೆ..?

Next Post

ಶಿಲಾನ್ಯಾಸ ಸಂದರ್ಭದಲ್ಲೂ ವಿವಾದ; ರಾಮಮಂದಿರ ಭೂಮಿ ಪೂಜೆ ಸುತ್ತ ಅಷ್ಟ ವಿಘ್ನ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಶಿಲಾನ್ಯಾಸ ಸಂದರ್ಭದಲ್ಲೂ ವಿವಾದ; ರಾಮಮಂದಿರ ಭೂಮಿ ಪೂಜೆ ಸುತ್ತ ಅಷ್ಟ ವಿಘ್ನ

ಶಿಲಾನ್ಯಾಸ ಸಂದರ್ಭದಲ್ಲೂ ವಿವಾದ; ರಾಮಮಂದಿರ ಭೂಮಿ ಪೂಜೆ ಸುತ್ತ ಅಷ್ಟ ವಿಘ್ನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!