• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇಂದ್ರದ ತ್ರಿಭಾಷಾ ಸೂತ್ರಕ್ಕೆ ತಮಿಳುನಾಡಿನಲ್ಲಿ ಅವಕಾಶ ಇಲ್ಲ

by
August 3, 2020
in ದೇಶ
0
ಕೇಂದ್ರದ ತ್ರಿಭಾಷಾ ಸೂತ್ರಕ್ಕೆ ತಮಿಳುನಾಡಿನಲ್ಲಿ ಅವಕಾಶ ಇಲ್ಲ
Share on WhatsAppShare on FacebookShare on Telegram

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರಲ್ಲಿನ ತ್ರಿಭಾಷಾ ಸೂತ್ರವು ಅತ್ಯಂತ ದುಃಖಕರವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಅವರು ಹೊಸ ನೀತಿಯನ್ನು ಜಾರಿಗೆ ತರುವುದಿಲ್ಲ ಎಂದು ಶಪಥ ಮಾಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹಿಂದಿ ಹೇರುವಿಕೆಯನ್ನು ವಿರೋಧಿಸಲು ದಿವಂಗತ ಮುಖ್ಯಮಂತ್ರಿಗಳಾದ ಅನ್ನಾದುರೈ, ಎಂಜಿಆರ್ ಮತ್ತು ಜಯಲಲಿತಾ ಅವರ ಸ್ಥಿರ ನಿಲುವನ್ನು ಉಲ್ಲೇಖಿಸಿದ ಪಳನಿಸ್ವಾಮಿ, ಕೇಂದ್ರದ ತ್ರಿಭಾಷಾ ನೀತಿಯನ್ನು ತಮಿಳುನಾಡು ಎಂದಿಗೂ ಅನುಮತಿಸುವುದಿಲ್ಲ. ಹೊಸ ಶಿಕ್ಷಣ ನೀತಿಯಲ್ಲಿನ ತ್ರಿ ಭಾಷಾ ನೀತಿ ತೀವ್ರ ದುಃಖಕರವಾಗಿದೆ. ಪ್ರಧಾನಿ ನರೇಂದ್ರ ಮೋದಿ ತ್ರಿಭಾಷಾ ನೀತಿಯನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

1965 ರಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಲು ಪ್ರಯತ್ನಿಸಿದಾಗ ತಮಿಳುನಾಡು ವಿದ್ಯಾರ್ಥಿಗಳು ನಡೆಸಿದ ಹಿಂದಿ ವಿರೋಧಿ ಆಂದೋಲನವನ್ನು ಕೂಡಾ ಅವರು ಉಲ್ಲೇಖಿಸಿದ್ದಾರೆ.

ತ್ರಿಭಾಷಾ ಅಳವಡಿಕೆ ನಿರ್ಧರಿಸಲು ರಾಜ್ಯಗಳಿಗೆ ಬಿಟ್ಟರೂ, ತಮಿಳುನಾಡಿನ ರಾಜಕೀಯ ಪಕ್ಷಗಳು ಇದನ್ನು ಹಿಂದಿ ಹೇರುವ ಕೇಂದ್ರದ ಪ್ರಯತ್ನವೆಂದು ಪರಿಗಣಿಸುತ್ತಿದೆ.

பொன் ராதாகிருஷ்ணன் ஜி, தமிழ்நாட்டில் தேசிய கல்விக் கொள்கை (NEP)-ஐ நடைமுறைப்படுத்துவதற்கான உங்கள் வழிகாட்டலை எதிர்பார்க்கிறோம். மத்திய அரசு, எந்தவொரு மாநிலத்தின் மீதும் எந்த மொழியையும் திணிக்காது என்பதை மீண்டும் வலியுறுத்த விரும்புகிறேன். https://t.co/YtiRZXtCpf

— Dr. Ramesh Pokhriyal Nishank (@DrRPNishank) August 2, 2020


ADVERTISEMENT

ಕೇಂದ್ರವು ಯಾವುದೇ ರಾಜ್ಯದ ಮೇಲೆ ಯಾವುದೇ ಭಾಷೆಯನ್ನು ಹೇರುವ ಪ್ರಯತ್ನ ಮಾಡುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ತಮಿಳು ಭಾಷೆಯಲ್ಲಿ ಟ್ವೀಟ್ ಮಾಡಿ ತಮಿಳುನಾಡಿನ ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ವರನ್ನು ಸಮಾಧನಿಸಲು ಯತ್ನಿಸಿದ್ದಾರೆ.

ಅದಕ್ಕೂ ಮೊದಲು, ಮಾಜಿ ಕೇಂದ್ರ ಸಚಿವ ಪೊನ್‌ ರಾಧಾಕೃಷ್ಣನ್‌ ಕೇಂದ್ರದ ಹೊಸ ನೀತಿಯನ್ನು ಬಲವಾಗಿ ವಿರೋಧಿಸಿದ್ದರು.

ತಮಿಳುನಾಡಿನಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸುವಲ್ಲಿ ಮಾಜಿ ಕೇಂದ್ರ ಸಚಿವರ ಮಾರ್ಗದರ್ಶನಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.

ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಮತ್ತು ತಮಿಳುನಾಡಿನ ಅನೇಕ ವಿರೋಧ ಪಕ್ಷಗಳು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿವೆ ಮತ್ತು ಅದು ಪ್ರಸ್ತಾಪಿಸಿರುವ ವ್ಯಾಪಕ ಸುಧಾರಣೆಗಳ ಪುನರ್ವಿಮರ್ಶೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ನೀತಿಯು ಹಿಂದಿ ಮತ್ತು ಸಂಸ್ಕೃತವನ್ನು ಹೇರುವ ಪ್ರಯತ್ನವಾಗಿದೆ ಎಂದು ಡಿಎಂಕೆ ಮುಖ್ಯಸ್ಥರು ಶನಿವಾರ ಹೇಳಿದ್ದಾರೆ ಹಾಗೂ ಸಮಾನ ಮನಸ್ಕ ರಾಜಕೀಯ ಪಕ್ಷಗಳು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೈಜೋಡಿಸಿ ಅದರ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ.

1960 ರ ದಶಕದಲ್ಲಿ ಆಗಿನ ಕಾಂಗ್ರೆಸ್ ಸರ್ಕಾರ ಹಿಂದಿಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಲು ಪ್ರಯತ್ನಿಸಿದಾಗ ತಮಿಳುನಾಡು ಭಾರೀ ಹಿಂದಿ ವಿರೋಧಿ ಆಂದೋಲನಕ್ಕೆ ಸಾಕ್ಷಿಯಾಗಿತ್ತು.

Tags: ತಮಿಳುನಾಡುಹಿಂದಿ ಹೇರಿಕೆ
Previous Post

ಶಿಲಾನ್ಯಾಸ ಸಂದರ್ಭದಲ್ಲೂ ವಿವಾದ; ರಾಮಮಂದಿರ ಭೂಮಿ ಪೂಜೆ ಸುತ್ತ ಅಷ್ಟ ವಿಘ್ನ

Next Post

ಕರ್ನಾಟಕ: ಕರೋನಾ ಸೋಂಕಿನಿಂದ ಚೇತರಿಸಿಕೊಂಡ 62,500 ಸೋಂಕಿತರು

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಕರ್ನಾಟಕ: ಕರೋನಾ ಸೋಂಕಿನಿಂದ ಚೇತರಿಸಿಕೊಂಡ 62

ಕರ್ನಾಟಕ: ಕರೋನಾ ಸೋಂಕಿನಿಂದ ಚೇತರಿಸಿಕೊಂಡ 62,500 ಸೋಂಕಿತರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada