ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 3ರಂದು ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ 4752 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 1,39,571ಕ್ಕೇರಿದೆ. ಬೆಂಗಳೂರು ಒಂದರಲ್ಲೇ 1497 ಪ್ರಕರಣಗಳು ದಾಖಲಾಗಿವೆ.
ಇದುವರೆಗೂ ರಾಜ್ಯದಲ್ಲಿ 62,500 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ರಾಜ್ಯದಲ್ಲಿ ಸಕ್ರಿಯವಾಗಿರುವ 74,469 ಪ್ರಕರಣಗಳಲ್ಲಿ ಆರೋಗ್ಯ ಸ್ಥಿತಿ ಗಂಭೀರವಾಗಿರುವ 629 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದಾಗಿ 2594 ಮಂದಿ ಅಸುನೀಗಿದ್ದಾರೆಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
ಇಂದು ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮೈಸೂರಿನಲ್ಲಿ 372, ಬಳ್ಳಾರಿ 305 ಮತ್ತು ಬಾಗಲಕೋಟೆಯಲ್ಲಿ 209 ಪ್ರಕರಣಗಳು ಕಂಡುಬಂದಿವೆ.
ಇಂದು ರಾಜ್ಯದಲ್ಲಿ ಒಟ್ಟು 27,989 ಕೋವಿಡ್ ಮಾದರಿಗಳ ಪರೀಕ್ಷೆಯನ್ನು ಮಾಡಲಾಗಿದ್ದು, ಈವರೆಗಿನ ಒಟ್ಟು ಮಾದರಿಗಳ ಸಂಖ್ಯೆ 14,46,558ಕ್ಕೆ ಏರಿದೆ.
![](https://pratidhvani.in/wp-content/uploads/2021/02/Support_us_Banner_New_3-102.png)