• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾದಕದ್ರವ್ಯ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳು ಷಾಮೀಲಾದ ಆರೋಪಗಳಿವೆ- ಸಿದ್ದರಾಮಯ್ಯ

by
September 7, 2020
in ಕರ್ನಾಟಕ
0
ಮಾದಕದ್ರವ್ಯ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳು ಷಾಮೀಲಾದ ಆರೋಪಗಳಿವೆ- ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಖ್ಯ ಸುದ್ದಿಯಾಗಿರುವ ಮಾದಕ ದ್ರವ್ಯ ದಂಧೆಯ ಕುರಿತಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್‌ ಮಾಡಿದ ಸಿದ್ದರಾಮಯ್ಯ, ಮಾದಕ‌ವಸ್ತು ಸೇವನೆ/ಮಾರಾಟದ ಆರೋಪಿಗಳ ವಿರುದ್ಧ ಮುಖ್ಯಮಂತ್ರಿ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು. ಬಂಧಿತರಲ್ಲಿ ಕೆಲವರಿಗೆ ಬಿಜೆಪಿ ಜೊತೆ ಸಂಬಂಧ ಇದೆಯೆಂದು ಹೇಳಲಾಗುತ್ತಿದ್ದು, ಕೆಲವು ಸಚಿವರು ಆರೋಪಿಗಳ ರಕ್ಷಣೆಗೆ ಪ್ರಯತ್ನಿಸುತ್ತಿರುವ ಆರೋಪ ಕೇಳಿಬರುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.

ಕಳೆದ 10 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮಾದಕವಸ್ತು ಸೇವನೆ/ಮಾರಾಟದ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ? ಅವರ ಹೆಸರುಗಳೇನು? ಶಿಕ್ಷೆಯ ಪ್ರಮಾಣ ಎಷ್ಟು? ಮಾದಕ ವಸ್ತುಗಳು ಎಲ್ಲಿಂದ ಸರಬರಾಜು ಆಗುತ್ತಿವೆ? – ಈ ಎಲ್ಲಾ ವಿವರ ಕೇಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.

ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ?
ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ?@BSBommai@CMofKarnataka
6/6#DrugsMukthaKarnataka pic.twitter.com/06AvdbwL77

— Siddaramaiah (@siddaramaiah) September 6, 2020


ಮಾದಕ ವಸ್ತುಗಳ ದಂಧೆಯಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕೂಡಾ ಷಾಮೀಲಾಗಿರುವ ಆರೋಪಗಳಿವೆ. ಅವರ ಮೇಲೆ ಯಾವ ಕ್ರಮಕೈಗೊಳ್ಳಲಾಗಿದೆ? ಅವರಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಎಷ್ಟು ಜನರು ಶಿಕ್ಷೆಗೊಳಗಾಗಿದ್ದಾರೆ? ಎನ್ ಡಿಪಿಎಸ್ ಕಾಯ್ದೆಯ ಪ್ರಕಾರ ಮಾದಕವಸ್ತುಗಳ ಸೇವನೆ/ಮಾರಾಟ ನಿಯಂತ್ರಣಕ್ಕಾಗಿ ಜಿಲ್ಲೆ, ತಾಲೂಕು ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಬೇಕಾಗುತ್ತದೆ. ಇಂತಹ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ? ಈ ಸಮಿತಿಗಳ ಸಭೆಗಳು ಎಷ್ಟು ನಡೆದಿವೆ ಮತ್ತು ಏನು ಕ್ರಮಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಮಾದಕ ವಸ್ತುಗಳ ದಂಧೆಯಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕೂಡಾ ಷಾಮೀಲಾಗಿರುವ ಆರೋಪಗಳಿವೆ.
ಅವರ ಮೇಲೆ ಯಾವ ಕ್ರಮಕೈಗೊಳ್ಳಲಾಗಿದೆ? ಅವರಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ?
ಎಷ್ಟು ಜನರು ಶಿಕ್ಷೆಗೊಳಗಾಗಿದ್ದಾರೆ?
3/6#DrugsMuktaKarnataka pic.twitter.com/HSw3vpHJ9E

— Siddaramaiah (@siddaramaiah) September 6, 2020


ADVERTISEMENT

ರಾಜ್ಯದಲ್ಲಿ ಮಾದಕ ವಸ್ತುಗಳ ದುಶ್ಚಟಕ್ಕೆ ಸಿಕ್ಕಿರುವ ಮಕ್ಕಳ ತಂದೆ-ತಾಯಿಗಳಿಂದ ರಹಸ್ಯವಾಗಿ ಮಾಹಿತಿ ಪಡೆಯುವ ವ್ಯವಸ್ಥೆ ಇದೆಯೇ? ಇಂತಹ ಎಷ್ಟು ದೂರುಗಳನ್ನು ಸ್ವೀಕರಿಸಲಾಗಿದೆ? ಕೈಗೊಂಡ ಕ್ರಮಗಳೇನು? ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ? ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

Tags: ಮಾದಕ ವಸ್ತುಸಿದ್ದರಾಮಯ್ಯ
Previous Post

ಪಾರ್ಕ್‌‌ ನೈತಿಕ ಪೊಲಿಸ್‌ಗಿರಿ‌: ದೂರು ದಾಖಲಿಸಿದ ಸಂಯುಕ್ತಾ, ಭೇಷರತ್ ಕ್ಷಮೆಯಾಚಿಸಿದ ಕವಿತಾ

Next Post

ಚೀನಾವ ಸೇನೆಯನ್ನು ಹಿಮ್ಮೆಟ್ಟಿಸಿದ Special Frontier Force ಬಗ್ಗೆ ಒಂದಿಷ್ಟು..

Related Posts

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ
ಕರ್ನಾಟಕ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

by ಪ್ರತಿಧ್ವನಿ
April 26, 2026
0

ನವದೆಹಲಿ, ಏ. 26: ಎರಡು ದಿನಗಳ ದೆಹಲಿ ಪ್ರವಾಸದ ವೇಳೆ ಬೆಂಗಳೂರು ನಗರದ ಅಭಿವೃದ್ಧಿ, ಕೇಂದ್ರ ಸಚಿವರೊಂದಿಗೆ ಮಹತ್ವದ ಸಭೆಗಳು ಹಾಗೂ ವಿವಿಧ ರಾಜ್ಯಗಳ ಚುನಾವಣೆಗಳ ಕುರಿತು...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಚೀನಾವ ಸೇನೆಯನ್ನು ಹಿಮ್ಮೆಟ್ಟಿಸಿದ Special Frontier Force ಬಗ್ಗೆ ಒಂದಿಷ್ಟು..

ಚೀನಾವ ಸೇನೆಯನ್ನು ಹಿಮ್ಮೆಟ್ಟಿಸಿದ Special Frontier Force ಬಗ್ಗೆ ಒಂದಿಷ್ಟು..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada