• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು- HD ಕುಮಾರಸ್ವಾಮಿ

by
September 14, 2020
in ಕರ್ನಾಟಕ
0
ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು- HD ಕುಮಾರಸ್ವಾಮಿ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಮಾಡುತ್ತಿರುವ ಕುರಿತು ಮತ್ತೆ ಅಪಸ್ವರಗಳು ಎದ್ದಿವೆ. ಸೆಪ್ಟೆಂಬರ್‌ 14ರಂದು ಹಿಂದಿ ದಿವಸ್‌ ಆಚರಿಸುವ ಹಿನ್ನಲೆಯಲ್ಲಿ ಹಿಂದಿ ಹೇರಿಕೆಯ ಹುನ್ನಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶಿತರಾಗಿ ಟ್ವೀಟ್‌ ಮಾಡಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್‌ ಮಾಡಿದ ಕುಮಾರಸ್ವಾಮಿ, ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ. ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದು ಎಚ್ಚರಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು. ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್‌ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರ್ಥಕ ಹಿಂದಿ ದಿವಸ ರದ್ದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್‌ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು. ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ ಎಂದು ಆಗ್ರಹಿಸಿದ್ದಾರೆ.

ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ.
1/10

— H D Kumaraswamy (@hd_kumaraswamy) September 14, 2020


ADVERTISEMENT

ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದ ಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ ಎನ್‌ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು. ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ. ಜೈ ಕನ್ನಡಾಂಬೆ ಜೈ ಭಾರತಾಂಬೆ ಎನ್ನುವ ಮೂಲಕ ತನ್ನ ಟ್ವೀಟ್‌ ಸರಣಿಯನ್ನು ನಿಲ್ಲಿಸಿದ್ದಾರೆ.

Tags: ಕನ್ನಡಕನ್ನಡ ಅಸ್ಮಿತೆಕನ್ನಡ ಭಾಷೆತ್ರಿಭಾಷಾ ಸೂತ್ರಭಾಷಾ ನೀತಿಹಿಂದಿಹಿಂದಿ ದಿವಸಹಿಂದಿ ಹೇರಿಕೆಹೆಚ್‌ಡಿ ಕುಮಾರಸ್ವಾಮಿ
Previous Post

ಅಸ್ಸಾಮ್:‌ ತನ್ನ ಮದುವೆಗೂ ರಜೆ ಪಡೆಯಲೊಲ್ಲದ ಮಹಿಳಾ ಜಿಲ್ಲಾಧಿಕಾರಿ

Next Post

ಜನರ ಪರವಾಗಿ ಯೋಚಿಸಲು ಆರಂಭಿಸಿದರೆ ದೇಶದ್ರೋಹಿ ಎಂಬ ಪಟ್ಟ ಕಟ್ಟುತ್ತಾರೆ – ಉಮರ್ ಖಾಲಿದ್

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ಜನರ ಪರವಾಗಿ ಯೋಚಿಸಲು ಆರಂಭಿಸಿದರೆ ದೇಶದ್ರೋಹಿ ಎಂಬ ಪಟ್ಟ ಕಟ್ಟುತ್ತಾರೆ – ಉಮರ್ ಖಾಲಿದ್

ಜನರ ಪರವಾಗಿ ಯೋಚಿಸಲು ಆರಂಭಿಸಿದರೆ ದೇಶದ್ರೋಹಿ ಎಂಬ ಪಟ್ಟ ಕಟ್ಟುತ್ತಾರೆ – ಉಮರ್ ಖಾಲಿದ್

Please login to join discussion

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada