ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್ 28ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 6892 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 2722 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 5,82,458 ತಲುಪಿದ್ದು, ಇವರಲ್ಲಿ 4,69,750 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 1,04,048 ಪ್ರಕರಣಗಳಲ್ಲಿ, 822 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 8,641 ಮಂದಿ ಅಸುನೀಗಿದ್ದಾರೆ.