ಕೃಷಿ ಮಸೂದೆಗಳನ್ನು ವಿರೋಧಿಸಿ ಬೀದಿಗಿಳಿದು ಪ್ರತಿಭಟಿಸಿದ್ದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ ರಾಣಾವತ್ ವಿರುದ್ದ ಎಫ್ಐಆರ್ ದಾಖಲಿಸುವಂತೆ ತುಮಕೂರು ಜೆಎಂಎಫ್ಸಿ ನ್ಯಾಯಾಲಯ ಆದೇಶ ನೀಡಿದೆ.
ನ್ಯಾಯಮೂರ್ತಿ ವಿನೋದ್ ಬಾಲನಾಯಕ್ ಅವರು ಕ್ಯಾತ್ಸಂದ್ರ ಪೊಲೀಸರಿಗೆ ಎಫ್ಐಆರ್ ದಾಖಲಿಸುವಂತೆ ಹೇಳಿದ್ದಾರೆ. ಕಂಗಣಾ ವಿರುದ್ದ ಮಕೂರು ತಾಲ್ಲೂಕು ಕದರನಹಳ್ಳಿ ತಾಂಡಾ ವಾಸಿ ಹಾಗೂ ಹೈಕೋರ್ಟ್ ವಕೀಲ ಎಲ್ ರಮೇಶ್ ನಾಯಕ್ ಅವರು ಡಿಜಿಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದರು.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ನ್ಯಾಯಾಲಯವು ಐಪಿಸಿ ಸೆಕ್ಷನ್ 153A, 504 ಮತ್ತು 108ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದೆ.
ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ನೇರವಾದ ನ್ಯಾಯಾಲಯದ ಕದ ತಟ್ಟಿದ ರಮೇಶ್ ಅವರು, ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಲು ಮನವ ಸಲ್ಲಿಸಿದ್ದರು. ಇಲ್ಲವಾದಲ್ಲಿ ನ್ಯಾಯಾಲಯವೇ ಕ್ರಮ ಕೈಗೊಳ್ಳಬೇಕೆಂದು ಕೇಳಿಕೊಂಡಿದ್ದರು.
Also Read: ಮೋದಿ ಓಲೈಕೆ ಭರದಲ್ಲಿ ಪ್ರತಿಭಟನಾನಿರತ ರೈತರನ್ನು ಭಯೋತ್ಪಾದಕರೆಂದ ಕಂಗನಾ