ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್ 9ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9265 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 4574 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 7,35,371ತಲುಪಿದ್ದು, ಇವರಲ್ಲಿ 6,11,167 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 1,13,987ಪ್ರಕರಣಗಳಲ್ಲಿ, 925ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 10,198 ಮಂದಿ ಅಸುನೀಗಿದ್ದಾರೆ.
ಕರ್ನಾಟಕದಲ್ಲಿ ಈವರೆಗೆ ಒಟ್ಟು 62,50,992 ಟೆಸ್ಟ್ಗಳನ್ನು ನಡೆಸಲಾಗಿದೆ. ಕಳೆದ 24 ಗಂಟೆಯಲ್ಲಿ 1,13,771 ಪರೀಕ್ಷೆಗಳನ್ನು ನಡೆಸಲಾಗಿದೆ.