• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ನಾಯಕರ ಅಜೆಂಡಾ: ಎಚ್‌ ಡಿ ಕುಮಾರಸ್ವಾಮಿ

by
October 18, 2020
in ಕರ್ನಾಟಕ
0
ಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ನಾಯಕರ ಅಜೆಂಡಾ:
Share on WhatsAppShare on FacebookShare on Telegram

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಗ್ಗೆರೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ದೇವೇಗೌಡರ ಕುಟುಂಬವನ್ನು ದುಡ್ಡು ಕೊಟ್ಟು ಕೊಂಡುಕೊಳ್ಳಲು ಆಗುವುದಿಲ್ಲ. ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಒಬ್ಬ ಮುಖ್ಯಮಂತ್ರಿ ದೇಶದಲ್ಲಿ ಕಣ್ಣೀರು ಹಾಕಿದ್ದಾರೆ ಅಂದರೆ ಅದು ನಾನು ಮಾತ್ರ. ಅಂತಹ ವಾತಾವರಣದಲ್ಲಿ ನಾನಿದ್ದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಜೆಪಿ ಹಾಗೂ ಬಿಜೆಪಿ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಸಾಫ್ಟ್‌ಕಾರ್ನರ್‌ ಹೊಂದಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಜನರ ಹಣ ಲೂಟಿ ಹೊಡೆಯೋರ ಬಗ್ಗೆ ನಾನು ಮಾತಾಡಲ್ಲ. 250 ಕೋಟಿ ರೂ. ಕಳ್ಳ ಬಿಲ್ ಮಾಡಿ ಹಣ ಗುಳುಂ ಮಾಡಿದ್ದಾರೆ. ಬೆವರು ಸುರಿಸಿ ದುಡಿದ ಹಣದಲ್ಲಿ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಕರೋನಾ ಸಮಯದಲ್ಲಿ ಜನಕ್ಕೆ ಸಹಾಯ ಮಾಡಿದ್ದಾರೆ. ಆದರೆ, ಜನರ ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಫುಡ್‌ಕಿಟ್‌ ನೀಡಿದ್ದಾರೆ ಎಂದು ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನನ್ನ ಸರಕಾರವನ್ನು ಯಾರೂ 10 ಪರ್ಸೆಂಟ್‌ ಸರಕಾರ ಎಂದು ಯಾರೂ ಹೇಳಲಿಲ್ಲ. ನಾನು ಅಧಿಕಾರದಲ್ಲಿದ್ದಾಗ ಜನರಿಗೆ ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಪ್ರಧಾನಿ ಮೋದಿ ನಮ್ಮ ಮುಖ್ಯಮಂತ್ರಿ ಜೊತೆ ಮಾತನಾಡಲು ಸಮಯ ನೀಡುತ್ತಿಲ್ಲ. ಈ ರೀತಿ ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅವಮಾನ ಮಾಡುತ್ತಿವೆ. ಕನ್ನಡಿಗರ ಸ್ವಾಭಿಮಾನ, ಗೌರವ ಉಳಿಸಲು ಈ ಚುನಾವಣೆ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಉತ್ತರ ನೀಡಿ ಎಂದು ಹೇಳಿದ್ದಾರೆ.

Also Read: ಆರ್‌ಆರ್‌ ನಗರ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಮುನಿರತ್ನ ಆಸ್ತಿಯಲ್ಲಿ ಭಾರಿ ಏರಿಕೆ

ಆರು ವರ್ಷದಲ್ಲಿ ಪ್ರಧಾನಿ ಮೋದಿ ಅವರಿಂದ ದೇಶ ಚೀನಾ ವಿರುದ್ಧ ಸ್ಪರ್ಧೆ ಮಾಡುವುದು ಇರಲಿ, ಬಾಂಗ್ಲಾದೇಶದ ಜೊತೆ ಸ್ಪರ್ಧೆ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ದಿನಕ್ಕೆ ಮೂರು ನಾಲ್ಕು ಡ್ರೆಸ್‌ ಹಾಕಿಕೊಂಡು ಚೆನ್ನಾಗಿ ಕಾಣುವುದೇ ಮೋದಿ ಅವರ ಸಾಧನೆಯಾಗಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ಇಲ್ಲಿ ಕೃಷ್ಣಮೂರ್ತಿ ಅಭ್ಯರ್ಥಿಯಲ್ಲ, ಕಾರ್ಯಕರ್ತರೇ ಅಭ್ಯರ್ಥಿಗಳು ಎಂದು ತಿಳಿದು ಜೆಡಿಎಸ್‌ ಸಮಾಧಿ ಮಾಡುತ್ತೇವೆ ಎಂದವರಿಗೆ ಉತ್ತರ ನೀಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಯಾವ ಪುರುಷಾರ್ಥಕ್ಕೆ ಚುನಾವಣೆ..?

ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್‌ ಮಾತನಾಡಿ, ಈ ಉಪಚುನಾವಣೆ ಫಲಿತಾಂಶದಿಂದ ಸರಕಾರದ ಮೇಲೆ ಪರಿಣಾಮ ಬೀರಲ್ಲ. ಆದರೆ, ರಾಜ್ಯ ಹಾಗೂ ದೇಶಕ್ಕೆ ಈ ಚುನಾವಣೆಯ ಫಲಿತಾಂಶ ಸಂದೇಶ ನೀಡಬೇಕಿದೆ. ಶಿರಾದಲ್ಲಿ ಸತ್ಯನಾರಾಯಣ ನಿಧನದಿಂದ ಚುನಾವಣೆ ಬಂದಿದೆ. ಆರ್‌ಆರ್ ನಗರದಲ್ಲಿ ಯಾವ ಪುರುಷಾರ್ಥಕ್ಕೆ ಚುನಾವಣೆ ಬಂದಿದೆ. ಶಾಸಕ ಸ್ಥಾನ ಮಾರಿಕೊಂಡಿದ್ದೇ ಈ ಚುನಾವಣೆಗೆ ಕಾರಣವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದು ಇಷ್ಟು ದಿನಗಳಾಗಿವೆ, ಪ್ರವಾಹ ಬಂದು ಜನರು ಸಂಕಷ್ಟದಲ್ಲಿದ್ದಾರೆ, ರಾಜ್ಯ ಮತ್ತು ಕೇಂದ್ರ ಸರಕಾರ ಜನರ ನೆರವಿಗೆ ಬರುತ್ತಿಲ್ಲ ಎಂದು ಕಿಡಿಕಾರಿದರು.

ಮುನಿರತ್ನ ಅಲ್ಲ ‘ಮನಿʼರತ್ನ..!

ಮಾಜಿ ಪರಿಷತ್‌ ಸದಸ್ಯ ಟಿ.ಎ.ಶರವಣ್ನ್ ಮಾತನಾಡಿ, ಬಿಜೆಪಿ ಅಭ್ಯರ್ಥಿ ಮುನಿರತ್ನ ಅಲ್ಲ, ‘ಮನಿ’ರತ್ನ ಆಗಿದ್ದಾರೆ. ದುಶ್ಯಾಸನಂತೆ ಕಾರ್ಪೊರೇಟರ್ ಸೀರೆ ಎಳೆದಿದ್ದ ಮುನಿರತ್ನ ಈಗ ಧರ್ಮರಾಯನಂತೆ ಕಾಣುತ್ತಿದ್ದಾರಾ ಎಂದು ಬಿಜೆಪಿ ಅಭ್ಯರ್ಥಿ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರು ಜೆಡಿಎಸ್‌ ಎಲ್ಲಿದೆ ಎಂದು ಪ್ರಶ್ನಿಸುತ್ತಾರೆ. ಜೆಡಿಎಸ್ ಎಲ್ಲಿದೆ ಎಂದು ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತೋರಿಸಿದ್ದೇವೆ. ಎಷ್ಟು ಬಾರಿ ನಿಮಗೆ ಜೆಡಿಎಸ್ ಎಲ್ಲಿದೆ ಎಂದು ತೋರಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

Also Read: ಉಪಚುನಾವಣೆ: ಕಾಂಗ್ರೆಸ್‌ ʼಕೈʼ ಹಿಡಿಯುವುದೇ ಡಿಕೆಶಿ ಜಾತಿ ಲೆಕ್ಕಾಚಾರ?

ರಾಷ್ಟ್ರೀಯ ಪಕ್ಷಗಳಿಂದ ಮತಗಳ ಮಾರಾಟ

ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ಮಾತನಾಡಿ, ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಮುನಿರತ್ನ‌ ಅವರು ಬಿಜೆಪಿಗೆ ಹೋಗಿದ್ದಾರೆ. ಹನುಮಂತರಾಯಪ್ಪನವರಿಗೆ ಜೆಡಿಎಸ್ ಎದುರು ನಿಲ್ಲಲು ಧೈರ್ಯ ಇಲ್ಲ. ನಮ್ಮ ಪಕ್ಷದ ನಾಯಕರನ್ನು ಸೆಳೆಯುವ ಕೆಲಸವನ್ನು ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ನಿಮ್ಮ ಮತಗಳನ್ನ ಗಿರವಿ ಅಂಗಡಿಯಲ್ಲಿ ಅಡ ಇಡುವ ಕೆಲಸ ಮಾಡುತ್ತಿವೆ ಎಂದು ಹೇಳಿದ್ದಾರೆ.

ಚುನಾವಣೆ ಪ್ರಚಾರ ಸಭೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ, ಜೆಡಿಎಸ್‌ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಪ್ರಕಾಶ್‌, ಪರಿಷತ್‌ ಸದಸ್ಯ ರಮೇಶ್‌ ಗೌಡ ಸೇರಿದಂತೆ ಹಲವಾರು ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.

Tags: ಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್
Previous Post

ಐಎಮ್ಎ ಹಗರಣ: 28 ಮಂದಿಯ ವಿರುದ್ಧ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ ಸಿಬಿಐ

Next Post

ಎಲ್ಲ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು – ಸಿದ್ದರಾಮಯ್ಯ

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post
ಎಲ್ಲ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು - ಸಿದ್ದರಾಮಯ್ಯ

ಎಲ್ಲ ಹಿಂದುಳಿದ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು - ಸಿದ್ದರಾಮಯ್ಯ

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!