ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸತತ ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನಿತೀಶ್ ಒಟ್ಟು ಏಳು ಬಾರಿ ಮುಖ್ಯಮಂತ್ರಿ ಖುರ್ಚಿಯಲ್ಲಿ ಕುಳಿತಿದ್ದಾರೆ.
ಎನ್ಡಿಎ ಮೈತ್ರಿಕೂಟ ಸರ್ಕಾರ ರಚಿಸಿದ್ದು, ನಿತೀಶ್ ಮಾತ್ರವಲ್ಲದೆ, ಜೆಡಿಯು ಮತ್ತು ಬಿಜೆಪಿಯ 14 ಶಾಸಕರು ಸಚಿವಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಅದರಲ್ಲಿ ಬಿಜೆಪಿಯ ತರಿಕಿಶೋರ್ ಪ್ರಸಾದ್ ಹಾಗೂ ರೇಣು ದೇವಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಪಾಲ್ಗೊಂಡಿದ್ದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಪಾಲ್ಗೊಂಡಿದ್ದರು. ಸಂತೋಶ್ ಕುಮಾರ್ ಸುಮನ್(HAM), ಮುಖೇಶ್ ಸಾಹ್ನಿ(VIP), ಜೆಡಿಯು ಪಕ್ಷದ ನಾಲ್ವರು ಶಾಸಕರಾದ ವಿಜಯ್ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಅಶೋಕ್ ಚೌಧರಿ, ಮೇವಾ ಲಾಲ್ ಚೌಧರಿ, ಬಿಜೆಪಿಯ ಮಂಗಲ್ ಪಾಂಡೆ ಹಾಗೂ ಅಮರೇಂದ್ರ ಪ್ರತಾಪ್ ಸಿಂಘ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Also Read: ನಿತೀಶ್ ಕುಮಾರ್ ಎಂಬ ಅಪರೂಪದಲ್ಲೇ ಅಪರೂಪದ ‘ಚಾಲಾಕಿ’ ರಾಜಕಾರಣಿ
ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಪಕ್ಷ ಮೂರನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರೂ, ತನ್ನ ಮೈತ್ರಿ ಪಕ್ಷ ಬಿಜೆಪಿಯ ಸಹಾಯದೊಂದಿಗೆ ಸರ್ಕಾರ ರಚಿಸಿದೆ. ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಅವರ ಜೆಡಿಯು, 43 ಸ್ಥಾನಗಳನ್ನು ಗೆದ್ದುಕೊಂಡರೆ, ಬಿಜೆಪಿ 74 ಸ್ಥಾನಗಳನ್ನು ಗೆದ್ದುಕೊಂಡು ಎರಡನೇ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.