• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತಮಿಳುನಾಡು: ʼಆಧ್ಯಾತ್ಮʼದ ಹೆಸರಿನಲ್ಲಿ ರಜನಿಕಾಂತ್ ರಾಜಕೀಯ ಪ್ರವೇಶ

by
December 4, 2020
in ದೇಶ
0
ತಮಿಳುನಾಡು: ʼಆಧ್ಯಾತ್ಮʼದ ಹೆಸರಿನಲ್ಲಿ ರಜನಿಕಾಂತ್ ರಾಜಕೀಯ ಪ್ರವೇಶ
Share on WhatsAppShare on FacebookShare on Telegram

ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆ ಗೆಲ್ಲಲು ಆಡಳಿತರೂಢ ಪಕ್ಷ ಎಐಎಡಿಎಂಕೆ, ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ, ಕಾಂಗ್ರೆಸ್‌, ಬಿಜೆಪಿ, ಕಮಲ್‌ ಹಾಸನ್‌ ನಾಯಕತ್ವದ ಮಕ್ಕಳ್‌ ನೀದಿ ಮೈಯಂ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಸದ್ದಿಲ್ಲದೇ ತಯಾರಿ ನಡೆಸಿವೆ. ಹೀಗಿರುವಾಗಲೇ ನಟ ಸೂಪರ್‌ ಸ್ಟಾರ್‌ ರಜನಿಕಾಂತ್‌ ಸಕ್ರಿಯ ರಾಜಕೀಯಕ್ಕೆ ಕಾಲಿರಿಸಲಿದ್ದಾರೆ ಎನ್ನುವ ಚರ್ಚೆ ನಡೆಯುತ್ತಲ್ಲೇ ಇತ್ತು. ಇದೀಗ ಸಕ್ರಿಯ ರಾಜಕೀಯಕ್ಕೆ ರಜನಿ ಯಾವಾಗ ಪ್ರವೇಶಿಸುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಡಿಸೆಂಬರ್‌ 31ನೇ ತಾರೀಕು ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸುವ ಮೂಲಕ ರಜನೀ ದಶಕಗಳ ಉಹಾಪೋಹಕ್ಕೆ ಬ್ರೇಕ್‌ ಹಾಕಿದ್ದಾರೆ.

ತಮಿಳುನಾಡಿನಲ್ಲಿ ಬದಲಾವಣೆ ತರಲು ಇದು ಸೂಕ್ತ ಸಮಯ, ನಾನೀಗ ರಾಜಕೀಯ ಪ್ರವೇಶ ಮಾಡಲು ನಿರ್ಧರಿಸಿದ್ದೇನೆ. ನನ್ನಿಂದ ಜನರಿಗಾಗಿ ಇದೊಂದು ಸಣ್ಣ ಪ್ರಯತ್ನವಷ್ಟೇ. ನಾನು ಇದರಲ್ಲಿ ಯಶಸ್ವಿಯಾದರೆ ಅದು ಜನರ ಯಶಸ್ಸು. ನಾನು ಸೋತರೆ, ಅದು ಜನರ ಸೋಲು. ರಾಜ್ಯದ ಬದಲಾವಣೆಗಾಗಿ ನನ್ನನ್ನು ಬೆಂಬಲಿಸಿ. ಎಲ್ಲರೂ ಸೇರಿ ರಾಜ್ಯ ಬದಲಿಸೋಣ ಎಂದು ಕರೆ ರಜನಿಕಾಂತ್‌ ಕರೆ ನೀಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪ್ರತಿಯೊಬ್ಬರಿಗೂ ಹಣೆಬರಹ ಇರುತ್ತದೆ. ಅಂತೆಯೇ ತಮಿಳುನಾಡಿಗೂ ಹಣೆಬರಹವಿದೆ. ಈಗ ರಾಜ್ಯದ ಹಣೆಬರಹ ಬದಲಾಯಿಸುವ ಸಮಯ. ಇದು ಜನರ ಬೆಂಬಲದಿಂದ ಮಾತ್ರ ಸಾಧ್ಯ. ಮುಂದಿನ ಚುನಾವಣೆಯಲ್ಲಿ ನಾವು ದೊಡ್ಡ ಗೆಲುವು ಸಾಧಿಸುತ್ತೇವೆ. ನಮ್ಮಿಂದಲೇ ಇಲ್ಲಿ ಪಾರದರ್ಶಕ ಮತ್ತು ಪ್ರಾಮಾಣಿಕವಾದ ರಾಜಕೀಯ ಮುನ್ನೆಲೆಗೆ ಬರಲಿದೆ. ಭ್ರಷ್ಟಾಚಾರವಿಲ್ಲದ, ಜಾತಿ-ಧರ್ಮಗಳ ಹೊರತಾದ ರಾಜಕೀಯ ಇದಾಗಿರಲಿದೆ ಎಂದು ರಜನಿ ಭರವಸೆ ನೀಡಿದ್ದಾರೆ.

ಹಲವು ದಶಕಗಳಿಂದ ರಜನಿ ರಾಜಕೀಯ ಪ್ರವೇಶ ಕುರಿತು ತಮಿಳುನಾಡಿನಲ್ಲಿ ಮಾತ್ರವಲ್ಲದೆ ಇಡೀ ದೇಶಾದ್ಯಂತ ಭಾರೀ ಚರ್ಚೆಯಾಗುತ್ತಿತ್ತು. ಇವರು ಯಾವಾಗ ಸಕ್ರಿಯ ರಾಜಕೀಯಕ್ಕೆ ಬರುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದರು. ಈಗ ಎಲ್ಲದ್ದಕ್ಕೂ ಉತ್ತರ ರಜನಿಕಾಂತ್‌ ಕೊಟ್ಟಿದ್ದಾರೆ.

ஜனவரியில் கட்சித் துவக்கம்,
டிசம்பர் 31ல் தேதி அறிவிப்பு. #மாத்துவோம்_எல்லாத்தையும்_மாத்துவோம்#இப்போ_இல்லேன்னா_எப்பவும்_இல்ல pic.twitter.com/9tqdnIJEml

— Rajinikanth (@rajinikanth) December 3, 2020


ADVERTISEMENT

ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯತೆ:

ಪ್ರಧಾನಿ ಮೋದಿ ಸರ್ಕಾರದ ಅನೇಕ ಯೋಜನೆಗಳನ್ನು ಹೊಗಳುತ್ತಲೇ ಇದ್ದ ರಜನಿ ಬಿಜೆಪಿಗೆ ಬಾಹ್ಯ ಬೆಂಬಲ ನೀಡಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಪಕ್ಷದ ರೂಪುರೇಷೆ, ಉದ್ದೇಶ, ಚುನಾವಣೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಹಲವರೊಂದಿಗೆ ಚರ್ಚಿಸಿರುವ ರಜನಿ, ಎಐಎಡಿಎಂಕೆ-ಬಿಜೆಪಿ ಮೈತ್ರಿಯೊಂದಿಗೆ ಕೈಜೋಡಿಸುವ ಬಗ್ಗೆಯೂ ಚಿಂತಿಸಿದ್ದಾರಂತೆ.

ಕಮಲ್- ರಜನಿ ಮೈತ್ರಿ:

ಕಮಲ್‌ ಹಾಸನ್‌ ತಮ್ಮನ್ನು ವಿಚಾರವಾದಿ ಎಂದು ಗುರುತಿಸಿಕೊಂಡಿದ್ದಾರೆ. ರಜನಿಕಾಂತ್‌ ಅವರದು ಆಧ್ಯಾತ್ಮಿಕ ರಾಜಕೀಯದ ಕಡೆಗೆ ಒಲವಿದೆ. ಇವರಿಬ್ಬರ ನಡುವೆ ರಾಜಕೀಯ ಚದುರಂಗದಾಟದಲ್ಲಿ ಹೊಂದಾಣಿಕೆ ನಡೆಯಲು ಎಷ್ಟು ಸಾಧ್ಯ ಎನ್ನುವ ಚರ್ಚೆ ಕೂಡ ನಡೆಯುತ್ತಿದೆ.

Also Read: ತಮಿಳುನಾಡು ರಾಜಕೀಯ: ಅಂದು ಎಂಜಿಆರ್-ಶಿವಾಜಿ ಗಣೇಶನ್; ಇಂದು ರಜಿನಿ-ಕಮಲ್

ತಮಿಳುನಾಡು ರಾಜಕೀಯಕ್ಕಿಂತ ಹೆಚ್ಚಾಗಿ ಈ ಪ್ರಶ್ನೆ ರಾಷ್ಟ್ರ ರಾಜಕಾರಣದಲ್ಲಿ ಪ್ರಬಲವಾಗಿ ಕೇಳಿಬರುತ್ತಿದೆ. ಈ ಬಗ್ಗೆ ಕಮಲ್‌ ಹಾಸನ್‌ ಈಗಾಗಲೇ ಸೂಪರ್‌ಸ್ಟಾರ್‌ ರಜನಿಕಾಂತ್‌ ಜತೆ ಕೈಜೋಡಿಸುವ ಕುರಿತು ಕಾಲವೇ ಉತ್ತರ ಕೊಡುತ್ತದೆ ಎಂದಿದ್ದಾರೆ. ಅಲ್ಲದೇ ನಮ್ಮ ವಿಭಿನ್ನ ದೃಷ್ಟಿಕೋನಗಳು ಮೈತ್ರಿಗೆ ಅವಕಾಶ ನೀಡುತ್ತವೆಯೇ ಎಂಬುದನ್ನು ಚಿಂತಿಸಬೇಕಿದೆ,” ಎಂದು ಕಮಲ್‌ ಪ್ರತಿಕ್ರಿಸಿದ್ದಾರೆ.

ಕಮಲ್‌ ಹಾಸನ್‌ ಮುಂದೊಂದು ದಿನ ರಜನಿ ಜತೆ ರಾಜಕೀಯ ಮೈತ್ರಿ ಸಾಧಿಸುವ ಸುಳಿವು ನೀಡಬಹುದು ಎನ್ನುತ್ತಿದ್ದ ಮೂಲಗಳು ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಂತರ ಕಷ್ಟ ಎನ್ನುತ್ತಿವೆ. ರಜನಿಕಾಂತ್‌ ಕೂಡ ಮೈತ್ರಿ ಪ್ರಶ್ನೆಗೆ ಕಾಲವೇ ಉತ್ತರಿಸುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ. ”ಒಂದು ವೇಳೆ ಇವರಿಬ್ಬರ ನಡುವೆ ಹೊಂದಾಣಿಕೆ ನಡೆದಿದ್ದೇ ಆದಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷವನ್ನು ಧೂಳಿಪಟ ಮಾಡಬಹುದು ಎನ್ನುತ್ತಾರೆ ರಾಜಕೀಯ ತಜ್ಞರು.

ಏಕಂಗಿ ಸ್ಪರ್ಧೆ:

‘ಆಧ್ಯಾತ್ಮಿಕ ರಾಜಕೀಯ’ ಮಂತ್ರ ಪಠಿಸುವ ರಜನಿಕಾಂತ್‌ ಎಲ್ಲರಿಗಿಂತಲೂ ಭಿನ್ನ. ತಮಿಳುನಾಡು ತನಗಿರುವ ವರ್ಚಸ್ಸಿನ ಆಧಾರದ ಮೇರೆಗೆ ಏಕಾಂಗಿಯಾಗಿ ಚುನಾವಣೆಗೆ ಹೋಗಬಹುದು.

Tags: ಆಧ್ಯಾತ್ಮತಮಿಳುನಾಡುರಜನಿಕಾಂತ್‌
Previous Post

ಕೃಷಿ ಕಾನೂನು ವಿರೋಧಿಸುವ ರೈತರಿಗೆ ಅನುಭೂತಿ ತೋರಿಸುತ್ತಲೇ ಅದೇ ಕಾನೂನನ್ನು ಜಾರಿಗೊಳಿಸಿದ AAP

Next Post

ಗಾಂಜಾ ಮೇಲಿನ ನಿರ್ಬಂಧ ಸಡಿಲಿಕೆ ಪರ ಮತ ಹಾಕಿದ ಭಾರತ!

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಕರ್ನಾಟಕ: 1247 ಹೊಸ ಕರೋನಾ ಪ್ರಕರಣಗಳು ದಾಖಲು

ಕರ್ನಾಟಕ: 1247 ಹೊಸ ಕರೋನಾ ಪ್ರಕರಣಗಳು ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada