• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಮುಂದಿನ ಎರಡೇ ವರ್ಷದಲ್ಲಿ ಟೋಲ್ ಬೂತ್‌ ರಹಿತ ಇಂಡಿಯಾ: ನಿತಿನ್ ಗಡ್ಕರಿ

by
December 22, 2020
in ದೇಶ
0
ಮುಂದಿನ ಎರಡೇ ವರ್ಷದಲ್ಲಿ ಟೋಲ್ ಬೂತ್‌ ರಹಿತ ಇಂಡಿಯಾ: ನಿತಿನ್ ಗಡ್ಕರಿ
Share on WhatsAppShare on FacebookShare on Telegram

ಟೋಲ್ಬೂತ್ ರಹಿತ ಇಂಡಿಯಾ ಮಾಡಲು ಕೇಂದ್ರ ಸರ್ಕಾರ ಯೋಚಿಸಿದ್ದು, ಎರಡು ವರ್ಷಗಳಲ್ಲಿ ವಾಹನಗಳಿಗೆ ಜಿಪಿಎಸ್ ಸೇವೆ ಒದಗಿಸಿ ಆನ್ಲೈನ್ ಮೂಲಕ ನೇರವಾಗಿ ಟೋಲ್ ಸಂಗ್ರಹ ಮಾಡುವುದರ ಜೊತೆಗೆ ಹೆದ್ದಾರಿ ಮಧ್ಯೆಯಿರುವ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ADVERTISEMENT

ಈಗಾಗಲೆ ಪ್ರಯಾಣಿಕರ ಮತ್ತು ಸರಕು ಸಾಗಣೆಯ ಹೊಸ ಮಾದರಿ ವಾಹನಗಳಲ್ಲಿ ಜಿಪಿಎಸ್ ಸೇವೆ ಒದಗಿಸಲಾಗಿದೆ. ಹಳೆಯ ವಾಹನಗಳಿಗೂ ಜಿಪಿಎಸ್ ಅಳವಡಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಹೆಚ್ಚಿನ ಚಿಂತನೆ ಮತ್ತು ಪರೀಕ್ಷೆ ನಡೆಸಿ ಯೋಜನೆಗೆ ಅನುಮತಿ ನೀಡಲಾಗಿದ್ದು, ಎರಡು ವರ್ಷಗಳಲ್ಲಿ ಈ ಯೋಜನೆ ದೇಶಾದ್ಯಂತ ಸಂಪೂರ್ಣವಾಗಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮಾಡುವುದರಿಂದ ಟ್ರ್ಯಾಕ್ ಮಾಡಿ ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದಲೇ ನೇರವಾಗಿ ಟೋಲ್ ಹಣ ಸ್ವೀಕರಿಸಬಹುದು. ಇಂಡಿಯಾದಲ್ಲಿ ಟೋಲ್ ರಹಿತ ಹೆದ್ದಾರಿ ವ್ಯವಸ್ಥೆ ಜಾರಿ ಬರುವುದಲ್ಲದೆ, ಟೋಲ್ಗಳಲ್ಲಿ ನಡೆಯುತ್ತಿರುವ ಅಕ್ರಮ ವ್ಯವಹಾರ ತಪ್ಪಿಸಲು ಸಹಾಯಕವಾಗುತ್ತದೆ. ಜೊತಗೆ ಪ್ರಯಾಣಿಕರ ಸುಗಮ ಸಂಚಾರಕ್ಕೂ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಹೆಚ್ಚಲಿದೆ ಹೆದ್ದಾರಿ ಆದಾಯ; ಗಡ್ಕರಿ

ಹೆದ್ದಾರಿಗಳಿಂದ ಬರುವ ಆದಾಯ ₹ 34,000 ಕೋಟಿಯನ್ನು ತಲುಪಲಿದೆ ಎಂದು ಗಡ್ಕರಿ ಹೇಳಿದ್ದಾರೆ. ಜಿಪಿಎಸ್ ಆಧಾರಿತ ಟೋಲ್‌ ಬೂತ್‌ನೊಂದಿಗೆ ಹೆದ್ದಾರಿಗಳು ಮುಂದಿನ ಐದು ವರ್ಷಗಳಲ್ಲಿ 1,34,000 ಕೋಟಿ ಆದಾಯವನ್ನು ಗಳಿಸುತ್ತವೆ ಎಂದು ಅವರು ಅಂದಾಜಿಸಿದ್ದಾರೆ. “ಈಗ ಎಲ್ಲಾ ವಾಣಿಜ್ಯ ವಾಹನಗಳು ವಾಹನ ಟ್ರ್ಯಾಕಿಂಗ್ ವ್ಯವಸ್ಥೆಗಳೊಂದಿಗೆ ಬರುತ್ತಿದೆ, ಹಳೆಯ ವಾಹನಗಳಲ್ಲಿ ಜಿಪಿಎಸ್ ತಂತ್ರಜ್ಞಾನವನ್ನು ಸ್ಥಾಪಿಸಲು ಸರ್ಕಾರವು ಕೆಲವು ಯೋಜನೆಯನ್ನು ತರಲಿದೆ” ಎಂದು ಸರ್ಕಾರದ ಪತ್ರಿಕಾ ಪ್ರಕಟಣೆ ತಿಳಿಸಿದೆ.

Tags: ಟೋಲ್ ಗೇಟ್ಟೋಲ್ ರಹಿತ ಇಂಡಿಯಾಟೋಲ್ ಸಂಗ್ರಹ
Previous Post

ಹೊಸ ತಳಿಯ ಕರೋನಾ ವೈರಾಣು ಕುರಿತು ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು – ಪ್ರಿಯಾಂಕ್ ಖರ್ಗೆ

Next Post

ಪಶ್ಚಿಮ ಬಂಗಾಳ: ವಲಸೆ ನಾಯಕರಿಂದಾಗಿ ಬಿಜೆಪಿಯೊಳಗೆ ಭುಗಿಲೆದ್ದ ಆಂತರಿಕ ಭಿನ್ನಮತ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಪಶ್ಚಿಮ ಬಂಗಾಳ: ವಲಸೆ ನಾಯಕರಿಂದಾಗಿ ಬಿಜೆಪಿಯೊಳಗೆ ಭುಗಿಲೆದ್ದ ಆಂತರಿಕ ಭಿನ್ನಮತ

ಪಶ್ಚಿಮ ಬಂಗಾಳ: ವಲಸೆ ನಾಯಕರಿಂದಾಗಿ ಬಿಜೆಪಿಯೊಳಗೆ ಭುಗಿಲೆದ್ದ ಆಂತರಿಕ ಭಿನ್ನಮತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada