ಹೊಸ ಪ್ರಬೇಧದ ಕರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಡಿ. 23 ರ ರಾತ್ರಿಯಿಂದ ಘೋಷಿಸಿದ್ದ ರಾತ್ರಿ ಕರ್ಫ್ಯೂವನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ಡಿ. 23 ರ ಬದಲಾಗಿ ಡಿ. 24 ರಿಂದ ರಾಜ್ಯದಲ್ಲಿ ರಾತ್ರಿ 11 ರಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಪೂ ಜಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ಆಧಿಕೃತ ಘೋಷಣೆ ನೀಡಿದೆ. ಡಿ24 ರಿಂಧ ಜ1 ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ.
ಬ್ರಿಟನ್ ನಲ್ಲಿ ಹೊಸ ಮಾದರಿಯ ಕೋವಿಡ್ ಸೋಂಕು ಕಂಡುಬಂದ ಹಿನ್ನಲೆ ಈಗಾಗಲೇ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಂಡು ಯುಕೆಗೆ ವಿಮಾನ ಹಾರಾಟವನ್ನು ನಿರ್ಬಂಧಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಡಿ. 23 ರಿಂದ ಜ. 1 ರವರೆಗೆ ನೈಟ್ ಕರ್ಫ್ಯೂ ಘೋಷಿಸಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ದಿನಾಂಕ ಮತ್ತು ಸಮಯ ಬದಲಾವಣೆಗೊಂಡಿರುವುದನ್ನು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ, ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ ಎಂದು ಹೇಳಿದ್ದಾರೆ.
ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದೂ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ. (1/2)
— CM of Karnataka (@CMofKarnataka) December 23, 2020
ಕರ್ಪ್ಯೂ ಜಾರಿ ವೇಳೆ ಆಸ್ಪತ್ರೆ, ಮೆಡಿಕಲ್ ಶಾಪ್ಗಳು ಸೇರಿದಂತೆ ಅಗತ್ಯ ವಸ್ತುಗಳು ದೊರಕಲಿವೆ. ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ತೆರೆಯುವಂತಿಲ್ಲ ಎಂದು ಆದೇಶಿಸಲಾಗಿದೆ.
ಸರ್ಕಾರದ ಈ ಆದೇಶದಿಂದ ಹೊಸವರ್ಷದ ರಾತ್ರಿ ಆಚರಣೆಗೆ ಬ್ರೇಕ್ ಬಿದ್ದಿದೆ. ರಾತ್ರಿ11 ಗಂಟೆಯ ನಂತರ ಜನ ಹೊರಗೆ ಬರುವಂತಿಲ್ಲ, ಆದರೆ ಉಳಿದ ಸಮಯದಲ್ಲಿ ವ್ಯಾಪಾರ ವಹಿವಾಟಿಗೆ ಎಂದಿನಂತೆ ಅವಕಾಶ ಕಲ್ಪಿಸಲಾಗಿದೆ. ಕರ್ಪ್ಯೂ ಸಮಯ ಹೊರತು ಪಡಿಸಿ ಉಳಿದ ವೇಳೆ ಸಭೆ ಸಮಾರಂಭಗಳಿಗೆ ಅವಕಾಶವಿದೆ ಎಂದು ತಿಳಿಸಲಾಗಿದೆ.