• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೃಷಿ ಕಾಯ್ದೆ ಕುರಿತು ರಾಹುಲ್‌ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ಕೇಂದ್ರ ಸಚಿವ

by
December 26, 2020
in ದೇಶ
0
ಕೃಷಿ ಕಾಯ್ದೆ ಕುರಿತು ರಾಹುಲ್‌ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿದ ಕೇಂದ್ರ ಸಚಿವ
Share on WhatsAppShare on FacebookShare on Telegram

ಕೃಷಿ ಕಾನೂನುಗಳ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸಿರುವ ಕೇಂದ್ರ ಸಚಿವ ಪ್ರಕಾಶ್‌ ಜಾವೇಡ್ಕರ್‌, ಕಾನೂನಿನ ವಿರುದ್ಧ ರೈತರ ಪ್ರತಿಭಟನೆ ರಾಜಕೀಯ ಪಿತೂರಿಯ ಭಾಗವಾಗಿದೆಯೆಂದು ಆರೋಪಿಸಿದ್ದಾರೆ.

ADVERTISEMENT

ಕೆಲವು ರಾಜಕೀಯ ಶಕ್ತಿಗಳು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ಕುರಿತು ತಪ್ಪು ಮಾಹಿತಿ ಹರಡುತ್ತಿದೆ, ಇದು ದೆಹಲಿಯಲ್ಲಿ ರೈತರ ಪ್ರತಿಭಟನೆಗೆ ಕಾರಣ, ಹಾಗೂ ಆ ಶಕ್ತಿಗಳು ದೇಶದಾದ್ಯಂತ ರೈತರು ತಮ್ಮ ಪರವಾಗಿ ಇರುವಂತೆ ಚಿತ್ರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೃಷಿ ಕಾನೂನುಗಳ ಕುರಿತಂತೆ ಟೀಕಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಜಾವೇಡ್ಕರ್‌, ಕೃಷಿ ಕಾನೂನುಗಳ ಕುರಿತಂತೆ ಬಹಿರಂಗವಾಗಿ ಚರ್ಚೆಗೆ ಆಹ್ವಾನಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೃಷಿ ಕಾನೂನುಗಳ ಕುರಿತು ಹಾಗೂ ಕೇಂದ್ರದ ಇನ್ನಿತರ ಕೃಷಿ ಸಂಬಂಧಿತ ಯೋಜನೆಗಳ ಬಗ್ಗೆ ದೇಶದ ರೈತರು ಸಂತುಷ್ಟರಾಗಿದ್ದಾರೆಂದು ಸಚಿವರು ಹೇಳಿದ್ದಾರೆ.

ಚೆನ್ನೈ ಸಮೀಪ ರೈತರೊಂದಿಗೆ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಜಾವೇಡ್ಕರ್‌, ಪಂಜಾಬಿನ ರೈತರು ಯುಪಿಎ ಅವಧಿಗಿಂತಲೂ ಹೆಚ್ಚು ಕನಿಷ್ಟ ಬೆಂಬಲ ಬೆಲೆ ಎನ್‌ಡಿಎ ಅವಧಿಯಲ್ಲಿ ಪಡೆಯುತ್ತಿದ್ದಾರೆ, ಅವರ ಆದಾಯ ವರ್ಷದಿಂದ ವರ್ಷಕ್ಕೆ ದ್ವಿಗುಣಗೊಳ್ಳುತ್ತಿದೆ, ಅದಾಗ್ಯೂ ಅವರ ಹಾದಿ ತಪ್ಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಭಾರತದಾದ್ಯಂತ ತೀವ್ರ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ ಏಕೆಂದರೆ “ಕೆಲವು ರೈತರು ಮತ್ತು ಅವರ ರಾಜಕೀಯ ನಾಯಕರು ನವದೆಹಲಿಯಲ್ಲಿ ತಮ್ಮ ಆಂದೋಲನವನ್ನು ಪ್ರಾರಂಭಿಸಿದ್ದಾರೆ, ಇದು ಅಖಿಲ ಭಾರತದ ವಿದ್ಯಮಾನ ಮತ್ತು ರೈತರ ಹಿತಾಸಕ್ತಿ ಎಂದು ತೋರಿಸುತ್ತದೆ. “

“ಆದರೆ ಎಲ್ಲೆಡೆ ರೈತರು ಹೊಸ ಕಾನೂನುಗಳಿಂದ ಸಂತೋಷವಾಗಿದ್ದಾರೆ ಮತ್ತು ರೈತರ ಕಲ್ಯಾಣ ಯೋಜನೆಗಳು ಮುಂದುವರಿಯುತ್ತವೆ” ಎಂದು ಸಚಿವರು ಹೇಳಿದ್ದಾರೆ.

ಕನಿಷ್ಟ ಬೆಂಬಲ ಬೆಲೆ ಹಾಗೂ ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮುಂದುವರೆಯತ್ತದೆ ಎಂದು ಭರವಸೆ ನೀಡಿದ ಅವರು, ಮೋದಿ ಸರ್ಕಾರ ರೈತರ ಬೆನ್ನ ಹಿಂದೆ ಗಟ್ಟಿಯಾಗಿ ನಿಲ್ಲಲಿದೆ ಎಂದು ಹೇಳಿದ್ದಾರೆ.

Tags: ‌ ರಾಹುಲ್‌ ಗಾಂಧಿUnion Ministerಕೃಷಿ ಕಾಯ್ದೆಕೃಷಿ ಕಾಯ್ದೆ ತಿದ್ದುಪಡಿ
Previous Post

10ನೇ ದಿನಕ್ಕೆ ಕಾಲಿಟ್ಟ ರಾಜ್ಯ ರೈತರ ಧರಣಿಗೆ ಬೆಂಬಲ ನೀಡಿದ ಕಾರ್ಮಿಕ ಸಂಘಟನೆಗಳು

Next Post

ಯೂ ಟರ್ನ್ ಸರ್ಕಾರದ ನಗೆಪಾಟಲಿನ ಯಡವಟ್ಟುಗಳಿಗೆ ಕೊನೆಯೇ ಇಲ್ಲ!

Related Posts

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

by ಪ್ರತಿಧ್ವನಿ
February 8, 2026
0

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ...

Read moreDetails
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
Next Post
ಯೂ ಟರ್ನ್ ಸರ್ಕಾರದ ನಗೆಪಾಟಲಿನ ಯಡವಟ್ಟುಗಳಿಗೆ ಕೊನೆಯೇ ಇಲ್ಲ!

ಯೂ ಟರ್ನ್ ಸರ್ಕಾರದ ನಗೆಪಾಟಲಿನ ಯಡವಟ್ಟುಗಳಿಗೆ ಕೊನೆಯೇ ಇಲ್ಲ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada