• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

“ಕೈ ಮುಗಿದು ಕೇಳುವೆ, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ” – ಕೇಂದ್ರ ಸರ್ಕಾರಕ್ಕೆ ಕೇಜ್ರಿವಾಲ್‌ ಮನವಿ

by
December 28, 2020
in ದೇಶ
0
"ಕೈ ಮುಗಿದು ಕೇಳುವೆ
Share on WhatsAppShare on FacebookShare on Telegram

“ರೈತರು ತಮ್ಮ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತರ ಜಮೀನನ್ನು ಕಸಿದುಕೊಳ್ಳಲಿವೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಕೈ ಮುಗಿದು ಕೇಳಿಕೊಳ್ಳುತ್ತಿದ್ದೇನೆ, ದಯವಿಟ್ಟು ನೂತನ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮನವಿ ಮಾಡಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿರುವ ಸಿಂಘು ಗಡಿ ಪ್ರದೇಶಕ್ಕೆ ಭಾನುವಾರ ಕೇಜ್ರಿವಾಲ್‌ ಎರಡನೇ ಬಾರಿಗೆ ಭೇಟಿ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತಾಡಿದ ಸಿಎಂ ಅರವಿಂದ್‌ ಕೇಜ್ರಿವಾಲ್‌, ಕೇಂದ್ರ ಸರ್ಕಾರದ ಯಾವುದೇ ಸಚಿವರಾಗಲೀ ಪ್ರತಿಭಟನಾನಿರತ ರೈತರೊಂದಿಗೆ ಮುಕ್ತ ಚರ್ಚೆ ನಡೆಸುವ ಸವಾಲು ಸ್ವೀಕರಿಸಲಿ. ಈ ಕಾಯ್ದೆಗಳು ಎಷ್ಟು ಉಪಯುಕ್ತ ಮತ್ತು ಹಾನಿಕಾರಕ ಎಂದು ರೈತರೇ ಹೇಳಲಿದ್ದಾರೆ ಎಂದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರೈತರು ಕಳೆದ 32 ದಿನಗಳಿಂದ ಚಳಿ, ಮಳೆ, ಗಾಳಿಯೆನ್ನದೇ ತೆರೆದ ಬೀದಿಗಳಲ್ಲಿ ಮಲಗುತ್ತಿದ್ದಾರೆ. ಇದುವರೆಗೂ 40ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇದು ನನಗೆ ಬಹಳ ನೋವು ತಂದಿದೆ. ಕೇಂದ್ರ ಸರ್ಕಾರ ರೈತರೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಆಲಿಸಲಿ. ಮೊದಲು ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡಲಿ ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಆಗ್ರಹಿಸಿದ್ದಾರೆ.

ಮೊದಲ ಬಾರಿ ಡಿಸೆಂಬರ್‌ ಏಳನೇ ತಾರೀಕಿನಂದು ರೈತರ ಪ್ರತಿಭಟನೆಯಲ್ಲಿ ಕೇಜ್ರಿವಾಲ್‌ ಭಾಗಿಯಾಗಿದ್ದರು. ನಂತರ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಅರವಿಂದ್‌ ಕೇಜ್ರೀವಾಲ್‌ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ರೈತರ ಪರವಾಗಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡಿ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ಕಾರ್ಯಕರ್ತರಿಗೆ ಕೇಜ್ರಿವಾಲ್‌ ಕರೆ ನೀಡಿದ್ದರು.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಯ ವಿರುದ್ಧ ದೇಶದ ರೈತರು ಕಳೆದೊಂದು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಈ ಹಿಂದೆಯೇ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್‌ ಸರ್ಕಾರ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದೆ. ಅಲ್ಲದೆ, ಸ್ವತಃ ಕೇಜ್ರಿವಾಲ್ ದೆಹಲಿ ಗಡಿಯಲ್ಲಿದ್ದ ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗಿ ನೈತಿಕ ಬಲ ತುಂಬಿದ್ದರು. ಇದರ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಕೇಂದ್ರ ಸರ್ಕಾರ ಗೃಹ ಬಂಧನದಲ್ಲಿರಿಸಿತ್ತು ಎನ್ನಲಾಗಿತ್ತು.

ಇತ್ತೀಚೆಗೆ ನಡೆದ ಭಾರತ್ ಬಂದ್‌ನಲ್ಲೂ ಎಎಪಿ ಕಾರ್ಯಕರ್ಯರು ಭಾಗವಹಿಸಿದ್ದರು. ರೈತರಿಗೆ ಅಗತ್ಯವಾದ ಎಲ್ಲಾ ಅನುಕೂಲಗಳನ್ನೂ ದೆಹಲಿಯಲ್ಲಿ ನಾವು ಮಾಡಿದ್ದೇವೆ. ನಾವು ಎಂದಿಗೂ ರೈತರ ಸೇವಕರು. ಅಲ್ಲದೆ, ರೈತರನ್ನು ಬೆಂಬಲಿಸುವುದು ನಮ್ಮ ಸರ್ಕಾರದ ಜವಾಬ್ದಾರಿ” ಎಂದು ಎಎಪಿ ಕಾರ್ಯಕರ್ತರು ಹೇಳಿದ್ದರು.

ನಮ್ಮ ಪಕ್ಷ ರೈತ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದೆ. ಹೀಗಾಗಿ ನಮ್ಮ ಸರ್ಕಾರದಿಂದ ರೈತರಿಗೆ ಮುಜುಗರವಾಗುವ ಯಾವುದೇ ಕೆಲಸವನ್ನು ನಾನು ಮಾಡುವುದಿಲ್ಲ. ಈ ಹಿಂದೆ ರೈತರನ್ನು ಬಂಧಿಸಲು ಕ್ರೀಡಾಂಗಣಗಳನ್ನು ಜೈಲುಗಳನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರದಿಂದ ನಮಗೆ ಮನವಿ ಬಂದಿತ್ತು. ಆದರೆ, ನಾನು ಈ ಮನವಿಯನ್ನು ನಾನು ಸಾರಾಸಗಟಾಗಿ ತಳ್ಳಿ ಹಾಕಿದ್ದೆ ಎಂದು ಕೇಜ್ರಿವಾಲ್‌ ತಿಳಿಸಿದ್ದರು.

ReplyForward

Tags: kejriwal has appealed to the central govt to replay the agricultural Act
Previous Post

ರಾಜಕೀಯ ಪ್ರವೇಶಿಸಲಿದ್ದಾರೆಯೇ ಗಂಗೂಲಿ – ಮುಂದಿನ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ದೀದಿ ವರ್ಸಸ್‌ ದಾದಾ?

Next Post

ಬಿಜೆಪಿ vs ಜೆಡಿಯು; ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ತಯಾರಾಗಿರುವ ನಿತೀಶ್ ಕುಮಾರ್

Related Posts

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
0

ಬೆಂಗಳೂರು, ಜನವರಿ 13: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು....

Read moreDetails
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
Next Post
ಬಿಜೆಪಿ vs ಜೆಡಿಯು; ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ತಯಾರಾಗಿರುವ ನಿತೀಶ್ ಕುಮಾರ್

ಬಿಜೆಪಿ vs ಜೆಡಿಯು; ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲು ತಯಾರಾಗಿರುವ ನಿತೀಶ್ ಕುಮಾರ್

Please login to join discussion

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!