• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಿಕ್ಕಬಳ್ಳಾಪುರ ಪತ್ರಕರ್ತ ಆತ್ಮಹತ್ಯೆ ಯತ್ನ ಪ್ರಕರಣದ ತನಿಖೆಗೆ ಹೆಚ್ಚಿದ ಒತ್ತಡ

by
December 28, 2020
in ಕರ್ನಾಟಕ
0
ಚಿಕ್ಕಬಳ್ಳಾಪುರ ಪತ್ರಕರ್ತ ಆತ್ಮಹತ್ಯೆ ಯತ್ನ ಪ್ರಕರಣದ ತನಿಖೆಗೆ ಹೆಚ್ಚಿದ ಒತ್ತಡ
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರದ ಹಿರಿಯ ಪತ್ರಕರ್ತ ಎಲ್ ಅಶ್ವಥನಾರಾಯಣ ಅವರು ಪೊಲೀಸರು ಮತ್ತು ಸಚಿವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ADVERTISEMENT

ಶನಿವಾರ ಅಶ್ವಥನಾರಾಯಣ ಅವರು ತಾವು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿಯೂ ಮತ್ತು ತಮ್ಮ ಅಂತಹ ನಿರ್ಧಾರದ ಹಿಂದೆ ದೊಡ್ಡಬಳ್ಳಾಪುರದ ಶಾಸಕ ಹಾಗೂ ಸಚಿವ ಡಾ ಸುಧಾಕರ್, ಜಿಲ್ಳಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬಟ್ಲಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್, ಕನ್ನಡಪ್ರಭ ಪತ್ರಿಕೆಯ ಸಂಪಾದಕರು ಮತ್ತು ಸಂಪಾದಕೀಯ ಸಮನ್ವಯಕಾರರು ತಮಗೆ ನೀಡಿದ ಕಿರುಕುಳ ಕಾರಣ ಎಂದು ಸುದೀರ್ಘ ಪತ್ರ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದರು. ಆ ಬಳಿಕ ಅವರು ನಾಪತ್ತೆಯಾಗಿದ್ದರು.

ಆ ಹಿನ್ನೆಲೆಯಲ್ಲಿ ಪತ್ರ ಫೇಸ್ಬುಕ್ ಮತ್ತು ವಾಟ್ಸಪ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ರಾಜ್ಯದಲ್ಲಿ ರಾಜ್ಯಮಟ್ಟದ ಮಾಧ್ಯಮಗಳ ಪತ್ರಕರ್ತರಿಗೇ ರಕ್ಷಣೆ ಇಲ್ಲ; ಸ್ವತಃ ಸಚಿವರು, ಮಾಧ್ಯಮದ ಮಂದಿ ಮತ್ತು ಪೊಲೀಸರು ಕೈಜೋಡಿಸಿ ಒಬ್ಬ ಹಿರಿಯ ಪತ್ರಕರ್ತನಿಗೆ ಆತ್ಮಹತ್ಯೆಯಂತಹ ಹತಾಶೆಯ ಅಂತಿಮ ನಿರ್ಧಾರ ಕೈಗೊಳ್ಳುವ ಮಟ್ಟಿಗೆ ಮಾನಸಿಕ ಕಿರುಕುಳ ನೀಡಿದ್ಧಾರೆ. ವಿನಾ ಕಾರಣ ಪ್ರರಕಣದಲ್ಲಿ ಅವರನ್ನು ಸಿಲುಕಿಸಿ ಜೈಲಿಗೆ ಅಟ್ಟಲು ರಾಜಕಾರಣಿ, ಪತ್ರಕರ್ತ ಮತ್ತು ಪೊಲೀಸ್ ಇಲಾಖೆಯ ಪ್ರಭಾವಿಗಳು ಕೈಜೋಡಿಸಿದ್ದಾರೆ ಎಂಬ ವಿಷಯ ಸಾಕಷ್ಟು ಆಘಾತಕ್ಕೆ ಕಾರಣವಾಗಿತ್ತು. ಪತ್ರಕರ್ತರ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಈಡಾಗಿತ್ತು. ಮಾಧ್ಯಮದ ಚುಕ್ಕಾಣಿ ಹಿಡಿದ ಮಂದಿ ಮತ್ತು ರಾಜಕಾರಣಿಗಳ ನಡುವಿನ ಅಪವಿತ್ರ ಮೈತ್ರಿ ಹೇಗೆ ವೃತ್ತಿನಿಷ್ಠ ಪತ್ರಕರ್ತರ ಪಾಲಿಗೆ ಜೀವಕಂಟಕವಾಗುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನೈಜ ಪತ್ರಕರ್ತರು ಎಂಥ ಸಂಕಷ್ಟದ, ಉಸಿರುಗಟ್ಟಿಸುವ ಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ಚರ್ಚೆಗೆ ಈ ಪ್ರಕರಣ ಇಂಬು ನೀಡಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಶನಿವಾರ ತಡರಾತ್ರಿ ಅಶ್ವಥನಾರಾಯಣ ಅವರು ತೀವ್ರ ಅಸ್ವಸ್ಥರಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.

ಈ ನಡುವೆ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು, ಪ್ರರಕಣದ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆದಿದ್ದು, ಹಿರಿಯ ಪತ್ರಕರ್ತರಿಗೆ ಕಿರುಕುಳ ನೀಡಿ ಅವರು ಆತ್ಮಹತ್ಯೆಯಂತಹ ಹತಾಶೆಯ ತೀರ್ಮಾನ ಕೈಗೊಳ್ಳುವಂತಹ ಪರಿಸ್ಥಿತಿ ನಿರ್ಮಿಸಿದ ಪೊಲೀಸರ ವಿರುದ್ಧ ತನಿಖೆಯಾಗಬೇಕು. ಇಡೀ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೆಕ್ಟರನ್ನು ಅಮಾನತುಪಡಿಸಿ ತನಿಖೆಗೆ ಕೂಡಲೇ ಚಾಲನೆ ನೀಡಬೇಕು ಎಂದು ಆಗ್ರಹಿಸಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಒಂದು ಕಡೆ ಪತ್ರಕರ್ತರ ಸಂಘ ಪ್ರರಕಣದ ನಿಷ್ಟಕ್ಷಪಾತ ತನಿಖೆಗೆ ಒತ್ತಾಯಿಸಿದ್ದರೆ, ಕಾಂಗ್ರೆಸ್ ಪಕ್ಷ ಕೂಡ, ಪ್ರಕರಣದಲ್ಲಿ ಸಚಿವ ಸುಧಾಕರ್ ಪಾತ್ರ ಪ್ರಮುಖವಾಗಿದ್ದು, ಅವರನ್ನು ಕೂಡಲೇ ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಹೇಳಿದೆ. ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಅವರು ಈ ಸಂಬಂಧ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, “ಅಶ್ವಥನಾರಾಯಣ ಆತ್ಮಹತ್ಯೆಗೆ ಯತ್ನಿಸಿರುವುದಕ್ಕೆ ಸಚಿವ ಸುಧಾಕರ್ ಅವರೇ ನೇರ ಕಾರಣ, ಅವರೇ ಬರೆದಿರುವ ಪತ್ರದಲ್ಲೂ ಸಚಿವ ಸುಧಾಕರ್ ಕಾರಣ ಎಂದು ಹೇಳಿದ್ದಾರೆ. ಪತ್ರಕರ್ತರ ಸ್ಥಿತಿಯೇ ಈ ರೀತಿ ಆದರೆ ಜನಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ಈ ವಿಚಾರವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ತನಿಖೆ ಮುಗಿಯುವವರೆಗೂ ಸುಧಾಕರ್ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು. ಈ ಸಂಬಂಧ ಕಾಂಗ್ರೆಸ್‌ ಪಕ್ಷದ ವತಿಯಿಂದ ರಾಜ್ಯಪಾಲರು ಹಾಗೂ ರಾಜ್ಯ ಡಿಜಿಪಿ ಅವರಿಗೆ ದೂರು ನೀಡುತ್ತೇವೆ” ಎಂದಿದ್ದಾರೆ.

ಸದ್ಯ ಪ್ರಕರಣ ರಾಜಕೀಯ ವಲಯದಲ್ಲಿಯೂ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ನ್ಯಾಯಯುತ ತನಿಖೆಗೆ ಒತ್ತಡ ಹೆಚ್ಚಿದೆ. ಒಂದು ಕಡೆ ಪತ್ರಕರ್ತರ ಸಂಘಟನೆ, ಮತ್ತೊಂದು ಕಡೆ ರಾಜಕೀಯ ವಲಯದಿಂದಲೂ ನಿಷ್ಪಕ್ಷಪಾತ ತನಿಖೆಗೆ ಆಗ್ರಹ ಕೇಳಿಬಂದಿದೆ. ಆದರೆ, ಮಾಧ್ಯಮ ಸಂಸ್ಥೆಯ ಮುಖ್ಯಸ್ಥರು, ಪ್ರಭಾವಿ ಸಚಿವರು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧವೇ ಗಂಭೀರ ಆರೋಪ ಕೇಳಿಬಂದಿರುವ ಈ ಪ್ರಕರಣದ ವಿಷಯದಲ್ಲಿ ರಾಜ್ಯ ಸರ್ಕಾರ ನಿಜವಾಗಿಯೂ ತನಿಖೆಗೆ, ಅದರಲ್ಲೂ ನಿಷ್ಪಕ್ಷಪಾತ ತನಿಖೆಗೆ ಮುಂದಾಗುವುದೇ ಎಂಬುದನ್ನು ಕಾದುನೋಡಬೇಕಿದೆ.

ಆ ಹಿನ್ನೆಲೆಯಲ್ಲಿ ಪ್ರಕರಣ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬಹುದಾದ ತಿರುವು ಕುತೂಹಲ ಮೂಡಿಸಿದೆ. ಆದರೆ, ಪತ್ರಕರ್ತರೊಬ್ಬರು ತಮ್ಮ ವೃತ್ತಿಯ ಭಾಗವಾಗಿ ಮಾಡಿದ ವರದಿಗಾರಿಕೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಮಾಧ್ಯಮ ಮುಖ್ಯಸ್ಥರು, ಪ್ರಭಾವಿ ರಾಜಕಾರಣಿಗಳು ಮತ್ತು ಪೊಲೀಸರು ಪರಸ್ಪರ ಕೈಜೋಡಿಸಿ ಆತ್ಮಹತ್ಯೆಗೆ ಪ್ರಯತ್ನಿಸುವ ಮಟ್ಟಿನ ಕಿರುಕುಳ ನೀಡಿರುವುದು ಸದ್ಯ ರಾಜ್ಯದಲ್ಲಿ ಇರುವ ಮಾಧ್ಯಮ ಸ್ವಾತಂತ್ರ್ಯ ಮತ್ತು ವೃತ್ತಿ ಭದ್ರತೆಗೆ ಕನ್ನಡಿ ಹಿಡಿದಿದೆ. ಆ ಹಿನ್ನೆಲೆಯಲ್ಲಿ ಪ್ರಕರಣ ವಿವಿಧ ಆಯಾಮಗಳ ಮೇಲೆ ಬೆಳಕು ಚೆಲ್ಲುವ ಪತ್ರಕರ್ತ ಅಶ್ವಥನಾರಾಯಣ ಅವರೇ ಸ್ವತಃ ಬರೆದಿರುವ ಆ ವೈರಲ್ ಪತ್ರದ ಪೂರ್ಣಪಾಠ ಇದು.

ಸ್ನೇಹಿತರೇ ನಮಸ್ಕಾರ, ಹಲವು ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳಬೇಕು ಎಂಬ ಉದ್ಧೇಶದಿಂದ ತುಂಬಾ ದಿನಗಳ ನಂತರ ನಾನು ಮುಖಪುಟದಲ್ಲಿ…

Posted by Aswath Sathya on Saturday, December 26, 2020

Tags: ಎಲ್ ಅಶ್ವಥನಾರಾಯಣಎಲ್ ಲಕ್ಷ್ಮಣ್ಕೆಪಿಸಿಸಿಚಿಕ್ಕಬಳ್ಳಾಪುರಪತ್ರಕರ್ತ ಆತ್ಮಹತ್ಯೆ ಯತ್ನಪತ್ರಕರ್ತರ ಸಂಘಶಿವಾನಂದ ತಗಡೂರುಸಚಿವ ಡಾ ಸುಧಾಕರ್
Previous Post

ಮೋದಿ ಮನ್‌ ಕೀ ಬಾತ್‌ ವಿರೋಧಿಸಿ ರಾಜ್ಯಾದ್ಯಂತ ತಟ್ಟೆ ಬಡಿದು ಪ್ರತಿಭಟನೆ

Next Post

ಹಂಪಿ ವಿವಿ ಉಳಿಸಿಕೊಳ್ಳದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ ಕರವೇ

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ಹಂಪಿ ವಿವಿ ಉಳಿಸಿಕೊಳ್ಳದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ ಕರವೇ

ಹಂಪಿ ವಿವಿ ಉಳಿಸಿಕೊಳ್ಳದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದ ಕರವೇ

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada