ಬೆಂಗಳೂರಿನ ನಾಗರಿಕರ ಮೇಲೆ ಸರ್ಕಾರ ಮತ್ತು ಬಿಬಿಎಂಪಿ ಹೊರಿಸಿರುವ ತೆರಿಗೆಗಳನ್ನು ಖಂಡಿಸಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಿಂದ ಬಿಬಿಎಂಪಿ ಕಚೇರಿಯವರೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ʼಬಿಬಿಎಂಪಿ ಚಲೋʼ ರ್ಯಾಲಿ ನಡೆಸಲಾಯಿತು.
ʼಬಿಬಿಎಂಪಿ ಚಲೋʼ ರ್ಯಾಲಿಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರತೀ ವರ್ಷ ಬಿಬಿಎಂಪಿಯಲ್ಲಿ ಸುಮಾರು ಎರಡು ಸಾವಿರ ಕೋಟಿಗಳಷ್ಟು ಅವ್ಯವಹಾರ ನಡೆಯುತ್ತಿದೆ. ಈ ಕುರಿತಾಗಿ ದಾಖಲೆಗಳನ್ನು ನೀಡಲು ಕಾಂಗ್ರೆಸ್ ಸಿದ್ದವಿದೆ ಎಂದಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಈಗಾಗಲೇ ಬೆಂಗಳೂರಿನ ಜನರಿಗೆ ಸರ್ಕಾರ ಹಲವು ರೀತಿಯಲ್ಲಿ ತೊಂದರೆಗಳನ್ನು ನೀಡಿದೆ, ಈಗ ವಿಧಿಸಿರುವ ತೆರಿಗೆ ಆ ಪಟ್ಟಿಗೆ ಹೊಸ ಸೇರ್ಪಡೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮೈಸೂರು ಬ್ಯಾಂಕ್ ವೃತ್ತದಿಂದ ಬಿಬಿಎಂಪಿ ಕಡೆಗೆ ಕಾಲ್ನಡಿಗೆಯಲ್ಲಿ ಮೆರವಣಿಗೆ ಹೊರಟ ಕಾರ್ಯಕರ್ತರನ್ನು ಪೊಲೀಸರು ತಡೆಯಲು ಯತ್ನಿಸಿದರು ಅದು ಸಾಧ್ಯವಾಗಲಿಲ್ಲ.
ಇತ್ತ ಬಿಬಿಎಂಪಿ ಮುತ್ತಿಗೆ ಹಾಕಲಾಗುತ್ತದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ, ಕಚೇರಿಯ ಗೇಟನ್ನು ಮುಚ್ಚಲಾಯಿತು. ಈ ವೇಳೆ ಭದ್ರತಾ ಸಿಬ್ಬಂದಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಬಿರುಸಿನ ವಾತಾವರಣ ನಿರ್ಮಾಣವಾಗಿತ್ತು.