ಗಂಗೇನಹಳ್ಳಿ ಬಳಿಯ 1.11 ಎಕರೆ ಜಮೀನಿಗೆ ಸಂಬಂಧಿಸಿದ ಡಿನೊಟೀಫೀಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ಲೋಕಾಯುಕ್ತ ಪೊಲೀಸರ ತನಿಖೆಗೆ ಹೈಕೋರ್ಟ್ ಹಸಿರು ನಿಶಾನೆ ನೀಡಿದೆ.
ಬಿಎಸ್ವೈ ವಿರುದ್ಧದ ಎಫ್ಐಆರ್ ರದ್ದುಗೊಳಿಸುವ ಅರ್ಜಿಯನ್ನು ತಿರಸ್ಕರಿಸಿರುವ ಹೈಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಮುಂದುವರೆಸಲು ಆದೇಶ ನೀಡಿದೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಕಲಬುರಗಿ ನ್ಯಾಯಪೀಠದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಈ ಆದೇಶ ನೀಡಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 25,000 ರೂಪಾಯಿ ದಂಡ ಕೂಡ ವಿಧಿಸಲಾಗಿದೆ.
2015ರಲ್ಲಿ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಯಕುಮಾರ್ ಹಿರೇಮಠ ಎಂಬವರು ದೂರು ನೀಡಿದ್ದು, ಪ್ರಕರಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಎರಡನೇ ಆರೋಪಿ ಆಗಿದ್ದರು. ಹೆಚ್ ಡಿ ಕೆ ಕುಟುಂಬಸ್ಥರನ್ನೂ ಆರೋಪಿಯನ್ನಾಗಿಸಲಾಗಿದೆ.
ಆರ್.ಟಿ.ನಗರದ ಗಂಗೇನಹಳ್ಳಿ ವ್ಯಾಪ್ತಿಯ ಮಠದಹಳ್ಳಿ ಬಡಾವಣೆ ಪ್ರದೇಶದಲ್ಲಿ 1 ಎಕರೆ 11 ಗುಂಟೆ ಜಮೀನು ಡಿನೋಟಿಫೈ ಮಾಡಲಾಗಿದೆ ಎಂಬ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಅರ್ಜಿ ಸಲ್ಲಿದ್ದರು. ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐರ್ ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದರು.