• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಾರಣಾಸಿ: ಮಸೀದಿ ಅಡಿಯಲ್ಲಿ ದೇವಾಲಯವಿದೆಯೇ ಎಂದು ಸರ್ವೇ ನಡೆಸಲು ಆದೇಶ ನೀಡಿದ ಕೋರ್ಟ್

by
April 15, 2021
in ದೇಶ
0
ವಾರಣಾಸಿ: ಮಸೀದಿ ಅಡಿಯಲ್ಲಿ ದೇವಾಲಯವಿದೆಯೇ ಎಂದು ಸರ್ವೇ ನಡೆಸಲು ಆದೇಶ ನೀಡಿದ ಕೋರ್ಟ್
Share on WhatsAppShare on FacebookShare on Telegram

ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯ ಭೌತಿಕ ಸಮೀಕ್ಷೆ ನಡೆಸಲು ವಾರಣಾಸಿಯ ನ್ಯಾಯಾಲಯವು ಭಾರತದ ಪುರಾತತ್ವ ಇಲಾಖೆಗೆ (ASI) ಆದೇಶಿಸಿದೆ.

ADVERTISEMENT

ಮೊಘಲ್ ಚಕ್ರವರ್ತಿ ಔರಂಗಜೇಬನು “ಭಗವಾನ್ ವಿಶ್ವೇಶ್ವರ” ಎಂಬ ಪುರಾತನ ದೇವಾಲಯವನ್ನು ನೆಲಸಮಗೊಳಿಸಿ, ಆ ದೇವಾಲಯದ ಅವಶೇಷಗಳ ಸಹಾಯದಿಂದ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಮೂರು ದಶಕಗಳ ಹಿಂದೆ ಹಾಕಿದ್ದ ಹಳೆಯ ಅರ್ಜಿಯೊಂದರಲ್ಲಿ ತೀರ್ಪು ನೀಡುವಾಗ ನ್ಯಾಯಾಲಯ ಈ ಸಮೀಕ್ಷೆಗೆ ಆದೇಶಿಸಿದೆ.

ನ್ಯಾಯಾಲಯವು ತನ್ನ ಆದೇಶದಲ್ಲಿ,  ಪುರಾತತ್ತ್ವ ಶಾಸ್ತ್ರದ ವಿಜ್ಞಾನವನ್ನು ಚೆನ್ನಾಗಿ ತಿಳಿದಿರುವ ಐವರು ಸದಸ್ಯರ ಸಮಿತಿಯನ್ನು ರಚಿಸುವಂತೆ ಸೂಚಿಸಿದ್ದು, ಹಾಗೂ, ಅದರಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಇಬ್ಬರಿಗೆ ಆದ್ಯತೆ ನೀಡುವಂತೆ ಭಾರತದ ಪುರಾತತ್ವ ಇಲಾಖೆ ಮಹಾನಿರ್ದೇಶಕರಿಗೆ ಹೇಳಿದೆ. ಅಲ್ಲದೆ, ಸಮಿತಿಯ ಮೇಲ್ವಿಚಾರಕರಾಗಿ ಒಬ್ಬ ಪ್ರಖ್ಯಾತ ವಿದ್ವಾಂಸ ಅಥವಾ ಶಿಕ್ಷಣ ತಜ್ಞರನ್ನು ನೇಮಕ ಮಾಡುವಂತೆಯೂ ನ್ಯಾಯಾಲಯ ಸೂಚಿಸಿದೆ.

ನ್ಯಾಯಾಲಯವು ತನ್ನ ಆದೇಶದಲ್ಲಿ,  ವಿವಾದಿತ ಸ್ಥಳದಲ್ಲಿ  ಪ್ರಸ್ತುತ ನಿಂತಿರುವ ಧಾರ್ಮಿಕ ರಚನೆಯು ಬೇರೆ ಯಾವುದೇ ಧಾರ್ಮಿಕ ರಚನೆಯ ಮೇಲಿನ ಅತಿಕ್ರಮಣ ಮಾಡಿ ರಚಿಸಲಾಗಿದೆಯೇ ಎಂದು ಕಂಡುಹಿಡಿಯುವುದು ಪುರಾತತ್ತ್ವ ಶಾಸ್ತ್ರದ ಸಮೀಕ್ಷೆಯ ಮುಖ್ಯ ಉದ್ದೇಶವೆಂದು ತಿಳಿಸಿದೆ.

ವಿವಾದಿತ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸುವ ಮೊದಲು ಅಥವಾ ಹಿಂದೂ ಸಮುದಾಯಕ್ಕೆ ಸೇರಿದ ಯಾವುದೇ ದೇವಾಲಯವು ಅಸ್ತಿತ್ವದಲ್ಲಿತ್ತೇ ಎಂಬುದನ್ನು ಸಮಿತಿಯು ಪತ್ತೆಹಚ್ಚುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣದ ಮೂಲ ಅರ್ಜಿಯನ್ನು 1991 ರಲ್ಲಿ ಸಲ್ಲಿಸಲಾಗಿದೆ. 1664 ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ ಪುರಾತನ ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಅದಾಗ್ಯೂ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಆರ್.ಶಂಶದ್ ಅವರು, ಮೊಕದ್ದಮೆಯನ್ನು ನಿರ್ವಹಿಸಲಾಗದು ಮತ್ತು 1991 ರಲ್ಲಿ ಮಾಡಿದ ಕಾನೂನಿನ ದೃಷ್ಟಿಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

“ಈ ಮೊಕದ್ದಮೆಯನ್ನು ವಜಾಗೊಳಿಸುವಂತೆ ಕೋರಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ಅದರ ಮೇಲೆ ಜಿಲ್ಲಾ ನ್ಯಾಯಾಲಯವು ಆದೇಶ ಹೊರಡಿಸಿದೆ. ಈಗ ಮೊಕದ್ದಮೆಯನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬ ಬಗ್ಗೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಇಡೀ ವಿಚಾರಣೆ ಬಾಕಿ ಇದೆ. ಈ ಹಿನ್ನೆಲೆಯಲ್ಲಿ, ಅಲಹಾಬಾದ್ ಹೈಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದೆ. ಈ ಹಂತದಲ್ಲಿ ಅಂತಹ (ಸಮೀಕ್ಷೆಗೆ ಹೊರಡಿಸಿರುವ) ಆದೇಶವನ್ನು ಅಂಗೀಕರಿಸಬಾರದು” ಎಂದು ಅವರು ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.  

Previous Post

18 ವರ್ಷ ಮೇಲ್ಪಟ್ಟ ವ್ಯಕ್ತಿಗೆ ತಮ್ಮ ಧರ್ಮದ ಆಯ್ಕೆ ಮಾಡುವ ಸ್ವಾತಂತ್ರ್ಯವಿದೆ –ಸುಪ್ರೀಂ ಕೋರ್ಟ್

Next Post

ನಿರ್ಲಜ್ಜ ನಿರ್ದಯಿ ವ್ಯವಸ್ಥೆಯೂ ದುಡಿಮೆಯ ದನಿಗಳೂ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post
ನಿರ್ಲಜ್ಜ ನಿರ್ದಯಿ ವ್ಯವಸ್ಥೆಯೂ ದುಡಿಮೆಯ ದನಿಗಳೂ

ನಿರ್ಲಜ್ಜ ನಿರ್ದಯಿ ವ್ಯವಸ್ಥೆಯೂ ದುಡಿಮೆಯ ದನಿಗಳೂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada