• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನರೇಂದ್ರ ಮೋದಿಯವರ ಮೇಲೆ ಭರವಸೆ ಇಟ್ಟುಕೊಂಡಿದ್ದೆ, ಆದರೆ ಎಲ್ಲಾ ಹುಸಿಯಾಯಿತು – ಶಂಕರ ಬಿದರಿ

by
April 20, 2021
in ಕರ್ನಾಟಕ
0
ನರೇಂದ್ರ ಮೋದಿಯವರ ಮೇಲೆ ಭರವಸೆ ಇಟ್ಟುಕೊಂಡಿದ್ದೆ, ಆದರೆ ಎಲ್ಲಾ ಹುಸಿಯಾಯಿತು – ಶಂಕರ ಬಿದರಿ
Share on WhatsAppShare on FacebookShare on Telegram

ಕರ್ನಾಟಕದ ನಿವೃತ್ತ ಪೊಲೀಸ್‌ ಮಹಾನಿರ್ದೇಶಕರಾಗಿರುವ ಶಂಕರ ಬಿದರಿ ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಬೇಸರ ವ್ಯಕ್ತಪಡಿಸಿದ್ದಾರೆ. ಮೋದಿಯವರನ್ನು ಬೆಂಬಲಿಸಿ ನಾನು ಬಹಳ ದೊಡ್ಡ ತಪ್ಪು ಮಾಡಿದೆ ಎಂದು ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ADVERTISEMENT

“ಜನರ ಸಂಕಷ್ಟಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸ್ಪಂದಿಸುತ್ತಿಲ್ಲ. ಪ್ರಧಾನಿ ಮೋದಿಯವರ ಮೇಲೆ ಸಾಕಷ್ಟು ಭರವಸೆಗಳಿದ್ದವು. ಆದರೆ, ಅವರೂ ವಿಫಲರಾಗಿದ್ದಾರೆ. ಮೋದಿಯವರು 2014ರಲ್ಲಿ ಪ್ರಧಾನಿಯಾದಾಗ ನಾನು ಖುಶಿಪಟ್ಟಿದ್ದೆ. ದೇಶದ 130 ಕೋಟಿ ಜನರನ್ನು ಜೊತೆಗೆ ಕರೆದೊಯ್ಯುತ್ತಾರೆ ಹಾಗೂ ದೇಶ ಸಾಗುತ್ತಿರುವ ಹಾದಿಯನ್ನು ಬದಲಾಯಿಸುತ್ತಾರೆಂದು ನಾನು ನಂಬಿದ್ದೆ. ನೋಟ್‌ ಬ್ಯಾನ್‌ ಹಾಗೂ 370ನೇ ವಿಧಿ ರದ್ದು ಮಾಡಿದ್ದನ್ನೂ ಬೆಂಬಲಿಸಿದ್ದೆ. ಆದರೆ, ಇಂದು ಬೇಸವಾಗುತ್ತಿದೆ. ಅವರೂ ವಿಫಲರಾಗಿದ್ದಾರೆ,” ಎಂದು ಬರೆದಿದ್ದಾರೆ.

ಇದರೊಂದಿಗೆ ಕೇಂದ್ರ ಸರ್ಕಾರದ ವಿರುದ್ದ ಬೇಸರ ಮೂಡಲು ಕಾರಣವಾಗಿರುವ ವಿಚಾರಗಳನ್ನು ಕೂಡಾ ಪಟ್ಟಿ ಮಾಡಿದ್ದಾರೆ. ಕೃಷ್ಣಾ ನದಿ ಕಣಿವೆ ಭಾಗದ ಜನರು 1999ರಿಂದ ನಿರಂತರವಾಗಿ ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈ ನದಿಯ ಒಂದು ಹನಿ ನೀರನ್ನೂ ವ್ಯರ್ಥವಾಗಲು ಬಿಡಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ, ಈಗಲೂ 300 ಟಿಎಂಸಿ ನೀರು ವ್ಯರ್ಥವಾಗುತ್ತಿದೆ, ಎಂದಿದ್ದಾರೆ.

“ರಾಜಕೀಯದಲ್ಲಿ ಭ್ರಷ್ಟಾಚಾರದ ಆರೋಪವನ್ನು ಹೊತ್ತಿರುವ ಜನರನ್ನು ಪ್ರಧಾನಿ ಮೋದಿ ಕಿತ್ತೆಸೆಯುತ್ತಾರೆ ಎಂಬ ಭರವಸೆ ಹೊಂದಿದ್ದೆ. ಏಳು ವರ್ಷಗಳಾದವು, ನಮ್ಮ ಭರವಸೆ ಈಗ ನುಚ್ಚುನೂರಾಗಿದೆ. ಇಂದು ದೇಶದ ಹಲವು ಪ್ರಭಾವಿ ಸಚಿವರು ಹಾಗೂ ಮುಖ್ಯಮಂತ್ರಿಗಳು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ದೇಶದ ಪರಿಣಾಮಕಾರಿಯಲ್ಲದ ನ್ಯಾಯಾಂಗ ವ್ಯವಸ್ಥೆಯ ಕಾರಣದಿಂದ ಅವರು ಇನ್ನೂ ಅಧಿಕಾರದಲ್ಲಿದ್ದಾರೆ,” ಎಂದಿದ್ದಾರೆ.

ಇನ್ನು ದೇಶದಲ್ಲಿ ಸರ್ಕಾರಿ ಸ್ವಾಮ್ಯದಲ್ಲಿದ್ದ ಸಂಸ್ಥೆಗಳನ್ನು ಖಾಸಗಿ ಬಂಡವಾಳಶಾಹಿಗಳಿಗೆ ಮಾರುತ್ತಿರುವ ವಿಚಾರವನ್ನು ಪ್ರಸ್ತಾಪಿಸಿರುವ ಬಿದರಿ ಅವರು ನೆಹರೂ, ಶಾಸ್ತ್ರಿ, ಇಂದಿರಾ, ಮೊರಾರ್ಜಿಯವರು ಮೂರ್ಖರೇ? ಎಂದು ಪ್ರಶ್ನಿಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ, ವಿಮಾ ಕಂಪೆನಿ, ವಿದೇಶಿ ತೈಲ ಮತ್ತು ಇತರ ಪ್ರಮುಖ ಸಂಸ್ಥೆಗಳನ್ನು ರಾಷ್ಟ್ರೀಕೃತಗೊಳಿಸಿದ್ದರು. ಆದರೆ, ಅವುಗಳು ಇಷ್ಟು ಬೇಗ ವಿದೇಶಿ ಕಂಪೆನಿಗಳಿಗೆ ಮಾರಾಟವಾಗುತ್ತದೆ ಎಂದು ಊಹಿಸಿರಲಿಕ್ಕಿಲ್ಲ ಎಂದಿದ್ದಾರೆ.

ಒಟ್ಟಾರೆಯಾಗಿ, ಕೇಂದ್ರ ಸರ್ಕಾರದ ನೀತಿಗಳ ವಿರುದ್ದ ಕಿಡಿ ಕಾರಿರುವ ಶಂಕರ ವಿದರಿ ಅವರು, ಬಿಜೆಪಿ ಸರ್ಕಾರದ ಆಡಳಿತ ವೈಖರಿಯನ್ನು ಟೀಕಿಸಿದ್ದಾರೆ. ಈ ಹಿಂದೆಯೂ ಏರುಗತಿಯಲ್ಲಿ ಸಾಗುತ್ತಿರುವ ತೈಲ ಬೆಲೆಯ ಕುರಿತು ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದರು.

Previous Post

Big-B, ಅಕ್ಷಯ್‌ ಕುಮಾರ್ ಚಿತ್ರಗಳ ಚಿತ್ರೀಕರಣಕ್ಕೆ ಅವಕಾಶ ಇಲ್ಲ: ಮಹಾರಾಷ್ಟ್ರ ಕಾಂಗ್ರೆಸ್

Next Post

ಗಾಲ್ವಾನ್ ಘರ್ಷಣೆಯಲ್ಲಿ ತನ್ನ ಸೈನಿಕರು ಮೃತಪಟ್ಟಿರುವುದನ್ನು ಒಪ್ಪಿಕೊಂಡ ಚೀನಾ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಗಾಲ್ವಾನ್ ಘರ್ಷಣೆಯಲ್ಲಿ ತನ್ನ ಸೈನಿಕರು ಮೃತಪಟ್ಟಿರುವುದನ್ನು ಒಪ್ಪಿಕೊಂಡ ಚೀನಾ

ಗಾಲ್ವಾನ್ ಘರ್ಷಣೆಯಲ್ಲಿ ತನ್ನ ಸೈನಿಕರು ಮೃತಪಟ್ಟಿರುವುದನ್ನು ಒಪ್ಪಿಕೊಂಡ ಚೀನಾ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!