• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆಕ್ಸಿಜನ್ ದುರಂತ: ರೋಗಿಗಳ ಸಾವಿಗೆ ಸರ್ಕಾರ, ವೈದ್ಯರು & ಜಿಲ್ಲಾಡಳಿತವೇ ನೇರ ಹೊಣೆ -ಸಿದ್ದರಾಮಯ್ಯ

Any Mind by Any Mind
May 3, 2021
in ಕರ್ನಾಟಕ
0
ಆಕ್ಸಿಜನ್ ದುರಂತ: ರೋಗಿಗಳ ಸಾವಿಗೆ ಸರ್ಕಾರ, ವೈದ್ಯರು & ಜಿಲ್ಲಾಡಳಿತವೇ ನೇರ ಹೊಣೆ -ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಕೋವಿಡ್ 2ನೇ ಅನ್ನು ದೇಶದಲ್ಲಿ ನಿಯಂತ್ರಿಸುವುದು ಕಷ್ಟಸಾಧ್ಯವಾಗುತ್ತಿದೆ. ಇದಕ್ಕೆ ಕಾರಣ ಆಡಳಿತಗಾರರ ನಿರ್ಲಕ್ಷ್ಯ ಹಾಗು ಹದಗೆಟ್ಟಿರುವ ವೈದ್ಯಕೀಯ ವ್ಯವಸ್ಥೆಯೆಂಬುದು ಸಾರ್ವಜನಿಕರ ಆರೋಪವಾಗಿದೆ. ಹಲವು ರಾಜ್ಯಗಳಲ್ಲಿ ಸೋಂಕಿತರಿಗೆ ಆಕ್ಸಿಜನ್ ಸಿಗದೆ ಅಮಾಯಕ ಜೀವಗಳು ಬಲಿಯಾಗುತ್ತಿರುವ ಬಗ್ಗೆ ವರದಿಯಾಗುತ್ತಿರುವ ಬೆನ್ನಲೆ, ಕರ್ನಾಟಕದ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಅಘಾತಕಾರಿ ಘಟನೆ ನಡೆದಿದೆ. ಈ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು ಎಂದು ಮೃತರ ಶೋಕತಪ್ತ ಕುಟುಂಬಗಳಿಗೆ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ ಎಂದು ಸಿಎಂ ಬಿಎಸ್‌ವೈ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ರಾಜ್ಯದ ಬಿಜೆಪಿ ಸರ್ಕಾರದ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದು ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Previous Post

ಚಾಮರಾಜನಗರ ಆಕ್ಸಿಜನ್ ದುರಂತ: ಮೈಸೂರು ಜಿಲ್ಲಾಧಿಕಾರಿ ಮತ್ತು ಜನರೇ ಹೊಣೆ ಎಂದ ಸಚಿವ ಸುರೇಶ್ ಕುಮಾರ್

Next Post

ಆಕ್ಸಿಜನ್ ಕೊರತೆಯಿಂದ 24 ಜನ ಸತ್ತಿರುವುದಕ್ಕೆ ಯಾರು ಹೊಣೆ..? ಸರ್ಕಾರವೇ ಹೊಣೆ ಹೊರಬೇಕು -ಡಿಕೆಶಿ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಆಕ್ಸಿಜನ್ ಕೊರತೆಯಿಂದ 24 ಜನ ಸತ್ತಿರುವುದಕ್ಕೆ ಯಾರು ಹೊಣೆ..? ಸರ್ಕಾರವೇ ಹೊಣೆ ಹೊರಬೇಕು -ಡಿಕೆಶಿ

ಆಕ್ಸಿಜನ್ ಕೊರತೆಯಿಂದ 24 ಜನ ಸತ್ತಿರುವುದಕ್ಕೆ ಯಾರು ಹೊಣೆ..? ಸರ್ಕಾರವೇ ಹೊಣೆ ಹೊರಬೇಕು -ಡಿಕೆಶಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!