ಕರ್ನಾಟಕದಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ ಕೋವಿಡ್ ಸೋಂಕಿತರು ಮೃತಪಡುತ್ತಿದ್ದು, ಕೇಂದ್ರದಿಂದ ರಾಜ್ಯಕ್ಕೆ ಪೂರೈಕೆಯಾಗುತ್ತಿರುವ ಆಕ್ಸಿಜನ್ ಮಟ್ಟ ಹೆಚ್ಚಿಸ ಬೇಕೆಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು, ಈ ಆದೇಶದ ವಿರುದ್ಧ ಕೇಂದ್ರ ಸುಪ್ರೀಂ ಮೊರೆ ಹೋಗಿತ್ತು. ಇದೀಗಾ ಸುಪ್ರೀಂ ಕೋರ್ಟ್ ಕೇಂದ್ರದ ಮೇಲ್ಮನವಿಯನ್ನು ತಿರಸ್ಕರಿಸಿದೆ. ಕೋರ್ಟ್‌ನ ಈ ಆದೇಶಕ್ಕೆ ಕಾಂಗ್ರೆಸ್ ನಾಯಕ ಕೆ.ಜೆ ಜಾರ್ಜ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ ಕನ್ನಡಿಗರ ಪರ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ತಿಳಿಸಿದ್ದಾರೆ. ಹಾಗು ಕೇಂದ್ರ ಮತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆಯನ್ನು ಹೆಚ್ಚಿಸುವ ಬಗ್ಗೆ ವಿರುದ್ಧ ಕೇಂದ್ರ ಸರ್ಕಾರದ ಮನವಿಯನ್ನು ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಎತ್ತಿಹಿಡಿಯುವಂತಹ ಆದೇಶವನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್ ನೀಡಿದೆ. ಇದನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಇದು ಜೀವದಾಯಿ ತೀರ್ಪು. ಸಕಲ ಕನ್ನಡಿಗರ ಪರವಾಗಿ ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಅರ್ಪಿಸಿದ್ದಾರೆ. ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆಯನ್ನು ಹೆಚ್ಚಿಸುವ ಕರ್ನಾಟಕ ಹೈಕೋರ್ಟ್‌ನ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಅಮಾನವೀಯ. ನಮ್ಮ ಜನ ಸಾಯುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಬೇರೆ ರಾಜ್ಯಗಳಿಗೆ ಇರುವ ಹಾಗೆ ನಮಗೂ ಇಲ್ಲಿ ಆಮ್ಲಜನಕ ಬೇಕು ಎಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕರ್ನಾಟಕದ ಬಿಜೆಪಿ ಸಂಸದರು ದೆಹಲಿಯಲ್ಲಿರುವ ತಮ್ಮ ’ಹಿರಿಯರಿಗೆ’ ಇದನ್ನು ತಿಳಿಸಿ ಹೇಳಲು ಸಾಧ್ಯವಿಲ್ಲವೇ..? ಇದರಿಂದ ಹೆಚ್ಚಿನ ಸಾವುಗಳು ಆಗುತ್ತವೆ ಎಂದು ಹೇಳಲಾಗುವುದಿಲ್ಲವೆ..? ಕನ್ನಡಿಗರ ಜೀವಗಳು ಅಗ್ಗವೇ..? ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧವೂ ಆಕ್ರೋಶಗೊಂಡಿದ್ದಾರೆ.