• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ- ಸಿದ್ದರಾಮಯ್ಯ ಒತ್ತಾಯ

Any Mind by Any Mind
May 11, 2021
in ಕರ್ನಾಟಕ
0
ಲಸಿಕೆ ವಿಷಯದಲ್ಲಿ ರಾಜಕೀಯ ಬೇಡ, ಎಲ್ಲ ಅರ್ಹರಿಗೂ ವ್ಯಾಕ್ಸಿನ್ ಹಾಕಿಸಿ- ಸಿದ್ದರಾಮಯ್ಯ ಒತ್ತಾಯ
Share on WhatsAppShare on FacebookShare on Telegram

ಕೋವಿಡ್ ಲಸಿಕೆ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ಅರ್ಹರಿಗೂ ಲಸಿಕೆ ಹಾಕುವ ಮೂಲಕ ರಾಜ್ಯದ ಜನರನ್ನು ಕಾಪಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ADVERTISEMENT

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಮುಂದಿನ ಕೆಲವು ತಿಂಗಳಲ್ಲಿ ಮೂರನೇ ಅಲೆ ಪ್ರಾರಂಭವಾಗುತ್ತದೆಂದು  ತಜ್ಞರು ಹೇಳುತ್ತಿದ್ದಾರೆ. ಆದ್ದರಿಂದ ಒಂದೆರಡು ತಿಂಗಳಲ್ಲಿ ಸಂಪೂರ್ಣ ಲಸಿಕೆ ಹಾಕಿಸಿ ಮುಗಿಸಬೇಕು. ಲಸಿಕೆಗಳನ್ನು ಕೇಂದ್ರದಿಂದಾದರೂ ಪಡೆಯಬೇಕು ಇಲ್ಲ ರಾಜ್ಯದಲ್ಲೇ ಉತ್ಪಾದಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪತ್ರದ ಸಾರಾಂಶ:

ಕರ್ನಾಟಕದಲ್ಲಿ  18 ವರ್ಷ ತುಂಬಿದವರು 4,37,80,330 ಜನರಿದ್ದಾರೆ. ಆದರೆ ಇದುವರೆಗೆ   ಎರಡೂ ಡೋಸ್ ಲಸಿಕೆ ನೀಡಿರುವುದು ಕೇವಲ  1777751 ಜನರಿಗೆ ಮಾತ್ರ. ಅಂದರೆ ಕೇವಲ ಶೇ. 4.06 ರಷ್ಟು ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ ಎಂದರ್ಥ. ಇದರಲ್ಲಿ ರಾಜ್ಯದಲ್ಲಿ 685327 ಜನ ಹೆಲ್ತ್ ಕೇರ್ ಕಾರ್ಯಕರ್ತರಿಗೆ ಮೊದಲ ಡೋಸ್ ನೀಡಲಾಗಿದೆ. ಆದರೆ ಎರಡನೇ ಡೋಸ್ ನೀಡಿರುವುದು ಕೇವಲ 439162 ಜನರಿಗೆ ಮಾತ್ರ.  440302 ಜನ ಫ್ರಂಟ್ ಲೈನ್ ಕಾರ್ಯಕರ್ತರಿಗೆ ಮೊದಲ ಡೊಸ್ ನೀಡಲಾಗಿದ್ದರೆ, ಎರಡನೆ ಡೋಸ್ ನೀಡಿರುವುದು ಕೇವಲ 167581 ಜನರಿಗೆ ಮಾತ್ರ.

60 ವರ್ಷ ತುಂಬಿದವರಲ್ಲಿ 841056 ಜನರಿಗೆ ಎರಡನೇ ಡೋಸ್ ನೀಡಲಾಗಿದೆ. 44 ರಿಂದ 59 ವರ್ಷದ ಒಳಗೆ ಇರುವವರಿಗೆ 329952 ಜನರಿಗೆ ಮಾತ್ರ ಎರಡನೆ ಡೋಸ್ ಲಸಿಕೆ ನೀಡಲಾಗಿದೆ. ಮೊದಲ ಡೋಸ್ ಅನ್ನು ಎಷ್ಟೇ ಜನರಿಗೆ ನೀಡಿದ್ದರೂ ಸಹ ನಿಗಧಿತ ಸಮಯದಲ್ಲಿ ಎರಡನೆ ಲಸಿಕೆ ನೀಡದಿದ್ದರೆ ಲಸಿಕೆ ಉಪಯೋಗಕ್ಕೆ ಬರುವುದಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ.

ಹಾಗಾಗಿ ಅವಧಿ ಮೀರುವ ಮೊದಲೇ ಎರಡನೆ ಡೋಸನ್ನು ಶೀಘ್ರವಾಗಿ ನೀಡಬೇಕು.  18 ರಿಂದ 45 ರ ವಯೋಮಾನದವರಲ್ಲಿ ಇದುವರೆಗೆ ಕೇವಲ 5759 ಜನರಿಗೆ ಮಾತ್ರ ಮೊದಲ ಡೋಸ್ ಲಸಿಕೆಯನ್ನು ನೀಡಲಾಗಿದೆ.  ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚು ಬಾಧಿತರಾಗಿ ಸಾವು ನೋವುಗಳಿಗೆ ಗುರಿಯಾಗುತ್ತಿರುವವರಲ್ಲಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.  ಈ ಯುವ ಸಮುದಾಯಕ್ಕೆ ಯುದ್ಧೋಪಾದಿಯಲ್ಲಿ ಲಸಿಕೆಯನ್ನು ನೀಡಬೇಕಾಗಿದೆ.

ಕೇಂದ್ರ ಸರ್ಕಾರ ಯುವ ಜನತೆಗೆ ಲಸಿಕೆ ನೀಡುವ ವಿಚಾರದಲ್ಲೂ ಭೀಕರ ರಾಜಕಾರಣ ಮಾಡುತ್ತಿದೆ. ಗುಜರಾತು, ಉತ್ತರ ಪ್ರದೇಶ ಮುಂತಾದ ರಾಜ್ಯಗಳ ಯುವಕರಿಗೆ ವ್ಯಾಪಕ ಪ್ರಮಾಣದಲ್ಲಿ ಲಸಿಕೆ ಹಾಕಲಾಗುತ್ತಿದೆ. ಆದರೆ ರಾಜ್ಯದಲ್ಲಿ ಬೆರಣಿಕೆಯಷ್ಟು ಜನರಿಗೆ ಮಾತ್ರ ನೀಡಲಾಗಿದೆ. ಕೇಂದ್ರ ಮಾಡುತ್ತಿರುವ ಅವೈಜ್ಞಾನಿಕ  ಕ್ರಮಗಳಿಂದಾಗಿ ದೇಶದ ಜನ ಭಾರಿ ಗಂಡಾಂತರ ಎದುರಿಸಬೇಕಾಗಿದೆ. ದೇಶದ ಯಾವುದೋ ಒಂದು ಭಾಗದ ಜನರಿಗೆ ಲಸಿಕೆ ನೀಡಿ ಉಳಿದವರು ವಂಚಿತರಾದರೆ  ವೈರಸ್ಸಿನಲ್ಲಿ ಮ್ಯುಟೇಶನ್ನುಗಳಾಗಿ ಕಡೆಗೆ ಅದು ಲಸಿಕೆಗಳಿಗೂ ಪ್ರತಿರೋಧ ಬೆಳೆಸಿಕೊಂಡರೆ  ಹಾಕುವ ಲಸಿಕೆಗಳೂ ಸಹ ನಿರುಪಯುಕ್ತವಾಗುತ್ತವೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ.  ಹೀಗಾದರೆ ಲಸಿಕೆ ಹಾಕಿಸಿಕೊಂಡವರೂ ಸಹ ಭೀಕರ ಗಂಡಾಂತರಕ್ಕೆ ತುತ್ತಾಗುತ್ತಾರೆ.

ನಮ್ಮ ದೇಶದ ಪ್ರಸ್ತುತ ಆಡಳಿತ ನಡೆಸುತ್ತಿರುವವರು ಕಾರ್ಪೊರೇಟ್ ಕಂಪೆನಿಗಳಿಗೆ ಅಡಿಯಾಳುಗಳಂತೆ ವರ್ತಿಸುತ್ತಿದ್ದಾರೆ.  ಆದ್ದರಿಂದಲೇ ಲಸಿಕೆ ದರವನ್ನು 150, 300, 400, 600 ರೂಗಳೆಂದು ವ್ಯಾಪಾರಕ್ಕಿಡಲಾಗಿದೆ. ತಾರತಮ್ಯಕರವಾದ ಈ ಬೆಲೆಗಳನ್ನು ಕೇಂದ್ರ ಸರ್ಕಾರವೇ ನಿಗಧಿ ಮಾಡುತ್ತಿದೆ. ಇದನ್ನು ನೋಡಿದರೆ ಕೇಂದ್ರದಲ್ಲಿರುವ ಬಿ ಜೆ ಪಿ ಸರ್ಕಾರ ಅಂಗಡಿ ನಡೆಸುತ್ತಿದೆಯೇ ಎಂಬ ಅನುಮಾನ ಬರುತ್ತಿದೆ.   ಕುರಿತು ಸರ್ವೋಚ್ಛ ನ್ಯಾಯಾಲಯ ಕೂಡ ಆಕ್ಷೇಪ ವ್ಯಕ್ತಪಡಿಸುತ್ತಿದೆ.

ದೇಶದ ಎಲ್ಲ ಜನರಿಗೆ ಏಕ ಕಾಲದಲ್ಲಿ ಸಮರೋಪಾದಿಯಲ್ಲಿ ಉಳಿದ ಎರಡು ತಿಂಗಳಲ್ಲಿ ಲಸಿಕೆ ಹಾಕಿ ಮುಗಿಸಬೇಕು. ಹೀಗೆ ಮಾಡಬೇಕಾದರೆ ಲಸಿಕೆ ಉತ್ಪಾದನೆ ಹೆಚ್ಚಬೇಕು. ಹಾಗಾಗಬೇಕಾದರೆ ಸಮರ್ಥವಾಗಿರುವ ಹತ್ತಾರು ಕಂಪೆನಿಗಳನ್ನು ಆಯ್ಕೆ ಮಾಡಿ ಈಗ ಸಿದ್ಧಪಡಿಸಿರುವ ಲಸಿಕೆ ತಯಾರಿಕೆಯ ಪ್ರೋಟೋಕಾಲನ್ನು, ನಿಯಮಗಳನ್ನು ಎಲ್ಲರಿಗೂ ನೀಡಿ ಸೂಕ್ತವಾದ ಬ್ರಿಡ್ಜ್ ಟ್ರಯಲ್ ನಡೆಸಿ ಮನೆ ಮನೆಗೆ ತೆರಳಿ ಆಂದೋಲನದ ರೀತಿಯಲ್ಲಿ ಲಸಿಕೆ ನೀಡಬೇಕು. ಎರಡು ಕಂಪೆನಿಗಳು ತಿಂಗಳಿಗೆ ಹತ್ತು ಕೋಟಿ ಲಸಿಕೆಗಳನ್ನು ತಯಾರಿಸಿದರೆ, ಇಪ್ಪತ್ತು ಕಂಪೆನಿಗಳು ನೂರು ಕೋಟಿ ಲಸಿಕೆ ತಯಾರಿಸಬಲ್ಲವು.  ಮಹಾರಾಷ್ಟ್ರ ಈಗಾಗಲೆ ಕೋವ್ಯಾಕ್ಸಿನ್ ಲಸಿಕೆಯನ್ನು ರಾಜ್ಯ ಸರ್ಕಾರದ ಅಧೀನದಲ್ಲಿರುವ ಕಂಪೆನಿಗಳ ಮೂಲಕ ಉತ್ಪಾದನೆಯಲ್ಲಿ ತೊಡಗಿದೆ ಎಂಬ ವರದಿಗಳಿವೆ. ಕರ್ನಾಟಕವೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಒತ್ತಾಯಿಸುತ್ತೇನೆ.

ಕೋವಿಡ್ ನಿಯಂತ್ರಣದಲ್ಲೂ ಮುಂಬೈ ಮಾದರಿಯನ್ನು  ಸರ್ವೋಚ್ಛ ನ್ಯಾಯಾಲಯವು ಶ್ಲಾಘಿಸಿದೆ. ಅದರ ಕುರಿತೂ ಕೂಡ ರಜ್ಯ ಸರ್ಕಾರ ಸೂಕ್ತ ತಿಳುವಳಿಕೆ ಪಡೆದುಕೊಳ್ಳುವುದು ಸೂಕ್ತ.

18 ವರ್ಷ ತುಂಬಿದವರಿಗೆ ಲಸಿಕೆ ಹಾಕಲು ಆನ್ ಲೈನ್ ಮುಖಾಂತರ ನೋಂದಾಯಿಸಿಕೊಳ್ಳಬೇಕೆಂಬ ನಿಯಮವನ್ನು ರದ್ದು ಪಡಿಸಬೇಕು. ಹೀಗೆ ಮಾಡಿದರೆ ಕಾರ್ಮಿಕರು, ಬಡವರು ಲಸಿಕೆಗಳಿಂದ ವಂಚಿತರಾಗುತ್ತಾರೆ. ಇದುವರೆಗೂ ಮಾಡುತ್ತಿದ್ದಂತೆ ಸ್ಥಳದಲ್ಲಿಯೇ ನೋಂದಾಯಿಸಿಕೊಂಡು ಲಸಿಕೆ ಹಾಕುವುದೇ ಉತ್ತಮ .

Previous Post

ಪ್ರಧಾನಿಯವರೇ ಗಂಗೆಯಲ್ಲಿ ರಾಶಿರಾಶಿ ಹೆಣಗಳು ತೇಲುತ್ತಿವೆ, ಈ ಸಂಧರ್ಭದಲ್ಲಿ ನಿಮ್ಮ ಅನುಪಸ್ಥಿತಿ ಕಾಡುತ್ತಿದೆ ಎಲ್ಲಿದ್ದೀರಿ?

Next Post

ಕರೋನಾ ವೈರಸ್ಸನ್ನು ಜೈವಿಕ ಅಸ್ತ್ರವಾಗಿ ಬಳಸುವ ಬಗ್ಗೆ ಚೀನಾ ವಿಜ್ಞಾನಿಗಳು ಚರ್ಚಿಸಿದ್ದರೇ..?

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
ಕರೋನಾ ವೈರಸ್ಸನ್ನು ಜೈವಿಕ ಅಸ್ತ್ರವಾಗಿ ಬಳಸುವ ಬಗ್ಗೆ ಚೀನಾ ವಿಜ್ಞಾನಿಗಳು ಚರ್ಚಿಸಿದ್ದರೇ..?

ಕರೋನಾ ವೈರಸ್ಸನ್ನು ಜೈವಿಕ ಅಸ್ತ್ರವಾಗಿ ಬಳಸುವ ಬಗ್ಗೆ ಚೀನಾ ವಿಜ್ಞಾನಿಗಳು ಚರ್ಚಿಸಿದ್ದರೇ..?

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada