• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬ್ಲಾಕ್ ಫಂಗಸ್: ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ, ಉಚಿತ ಚಿಕಿತ್ಸೆ ಕೊಡಿ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

Any Mind by Any Mind
May 17, 2021
in ಕರ್ನಾಟಕ
0
ಬ್ಲಾಕ್ ಫಂಗಸ್: ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ, ಉಚಿತ ಚಿಕಿತ್ಸೆ ಕೊಡಿ  ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ADVERTISEMENT

ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೋವಿಡ್ ನಿಂದಾಗಿ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದವರನ್ನು ಗುರಿ ಮಾಡಿಕೊಂಡು ದಾಳಿ ಮಾಡುತ್ತಿರುವ ಈ ಕಾಯಿಲೆಗೆ ಬಡವರಿರಲಿ, ಮಧ್ಯಮ ವರ್ಗದವರಿಗೂ ಕೂಡ ಸೂಕ್ತ ಚಿಕಿತ್ಸೆ ಪಡೆಯಲಾಗದಷ್ಟು ದುಬಾರಿಯಾಗಿದೆ. ಈ ರೋಗ ಬಂದವರಿಗೆ ದಿನಕ್ಕೆ ಮೂರರಂತೆ 30 ದಿನಗಳವರೆಗೂ ಆಂಫೊಟೆರೆಸಿನ್ ಎಂಬ ಇಂಜೆಕ್ಷನ್‍ಗಳನ್ನು ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ.   ಆದರೆ ಮಾರುಕಟ್ಟೆಯಲಿ ಈ ಔಷಧಗಳು ಸಿಗುತ್ತಿಲ್ಲ. ಒಂದೊಂದು ಇಂಜೆಕ್ಷನ್ನಿನ ಬೆಲೆ ಕಾಳಸಂತೆಯಲ್ಲಿ ಈಗಾಗಲೇ  5 ರಿಂದ 7 ಸಾವಿರ ರೂಗಳವರೆಗೆ ಮಾರಾಟವಾಗುತ್ತಿವೆ ಎಂಬ ದೂರುಗಳು ಬರುತ್ತಿವೆ. ಕೋವಿಡ್ ಸಾಂಕ್ರಾಮಿಕವನ್ನು ಅತ್ಯಂತ ಅರಾಜಕವಾಗಿ ನಿರ್ವಹಿಸುತ್ತಿರುವ, ಸತ್ತವರು ಸಾಯಲಿ ಎಂಬಂತೆ ನಡದುಕೊಳ್ಳುತ್ತಿರುವ ಸರ್ಕಾರ ಬ್ಲಾಕ್ ಫಂಗಸ್ ರೋಗದ ಕುರಿತು ಇನ್ನೂ ಕೂಡ ಸಮರ್ಪಕ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸ್ಟಿರಾಯ್ಡ್‌ಗಳ ಅತಿ ಬಳಕೆ ಮತ್ತು ಮಧುಮೇಹ ಕಾರಣ: ಏಮ್ಸ್ ತಜ್ಞರ ಎಚ್ಚರಿಕೆ

ಚಿಕಿತ್ಸೆ ನೀಡುವ ಕುರಿತಾದಂತೆ ಅಷ್ಟೆ ಅಲ್ಲ. ರೋಗ ಹರಡುತ್ತಿರುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ರೋಗ ಯಾರಲ್ಲಿ ಹರಡುತ್ತಿದೆ..? ಏಕೆ ಹರಡುತ್ತಿದೆ..? ಯಾವಾಗ ಹರಡುತ್ತಿದೆ? ರೋಗ ಲಕ್ಷಣಗಳೇನು..? ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು? ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಅನುಸರಿಸಬೇಕು..? ಕೋವಿಡ್ ಚಿಕಿತ್ಸೆಯಿಂದ ಈ ಶಿಲೀಂದ್ರ ಸೋಂಕು ಬರುತ್ತದೆ ಅಂತಾದರೆ, ಕೋವಿಡ್ ಚಿಕಿತ್ಸೆಯಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಟುಗಳೇನು? ಎಂಬೆಲ್ಲ ವಿಚಾರಗಳ ಕುರಿತು ಸಮರ್ಪಕ ಎಸ್‍ಓಪಿ ಯನ್ನು ಹೊರಡಿಸಬೇಕು.

ಕೋವಿಡ್ ಸೋಂಕಿನ ವಿಚಾರದಲ್ಲಿ ಅವೈಜ್ಞಾನಿಕವಾಗಿ ನಡೆದುಕೊಂಡಂತೆ ಬ್ಲಾಕ್ ಫಂಗಸ್ಸಿನ ವಿಚಾರದಲ್ಲಿ ನಡೆದುಕೊಳ್ಳಬಾರದು. ಉತ್ತರ ಭಾರತದ ಅನೇಕ ಕಡೆ ಸಗಣಿ ಬಳಸಿ ಚಿಕಿತ್ಸೆ ಪಡೆಯಲು ಹೊರಟವರಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ. ಬಹುತೇಕ ವೈದ್ಯರು  ಕೋವಿಡ್ ಚಿಕಿತ್ಸೆಯಲ್ಲಿ ಅನಿಯಮಿತವಾಗಿ ಬಳಸುವ ಸ್ಟಿರಾಯ್ಡ್‍ಗಳಿಂದ ಹರಡುತ್ತಿದೆ ಎನ್ನುತ್ತಾರೆ. ಕೋವಿಡ್ ಬಂದವರಿಗೆ ಸಕ್ಕರೆ ಕಾಯಿಲೆ ಇದ್ದರೆ ಅವರಿಗೆ ಸುಲಭವಾಗಿ ಹರಡುತ್ತದೆ ಎನ್ನಲಾಗುತ್ತಿದೆ. ಆಕ್ಸಿಜನ್ ನೀಡುವಾಗ ಉಂಟಾಗುವ ಸೋಂಕುಗಳಿಂದ ಹರಡುತ್ತದೆ ಎಂಬ ಅಭಿಪ್ರಾಯವೂ ಇದೆ. ಆದ್ದರಿಂದ ಈ ಕುರಿತು ಸೂಕ್ತವಾಗಿ ಶೀಘ್ರವಾಗಿ ಅಧ್ಯಯನ ಮಾಡಿ ಚಿಕಿತ್ಸೆ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಬ್ಲಾಕ್​ ಫಂಗಸ್: ರಾಜ್ಯದಲ್ಲಿ ಔಷಧ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ -ಹೆಚ್‌ಡಿಕೆ

ಮಧುಮೇಹ ಮುಂತಾದ ಸಮಸ್ಯೆ ಇದ್ದು ಕೋವಿಡ್ ಬಂದವರನ್ನು ಕನಿಷ್ಟ ಮೂರು ತಿಂಗಳ ಕಾಲ ಗಮನಿಸುತ್ತಿರಬೇಕು. ಜೊತೆಗೆ ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರ ವಿವರಗಳನ್ನು ಮತ್ತು ಹೆಚ್ಚು ಸ್ಟಿರಾಯ್ಡ್ ನೀಡಲಾಗಿರುವವರ ಪಟ್ಟಿಯನ್ನು ತಾಲ್ಲೂಕುವಾರು, ವಾರ್ಡ್‍ವಾರು ಸಿದ್ಧಪಡಿಸಿಕೊಂಡು ಅವರನ್ನೂ ಸಹ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರ ಮೂಲಕ ನಿಗಾವಹಿಸಬೇಕು. ಈ ನಿಗಾ ಅವಧಿಯಲ್ಲಿ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಕೂಡಲೇ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಉಚಿತವಾಗಿ ಸಮರ್ಪಕ ಚಿಕಿತ್ಸೆಯನ್ನು ನೀಡಬೇಕು. ಅದಕ್ಕೂ ಮೊದಲು ಈ ಕೂಡಲೇ ಈ ರೋಗಕ್ಕೆ ಚಿಕಿತ್ಸೆ ನೀಡಲು ಜಿಲ್ಲಾವಾರು ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿ, ಅಧಿಸೂಚನೆ ಹೊರಡಿಸಬೇಕು. ಚಿಕಿತ್ಸೆಗಾಗಿ ಅಗತ್ಯ ಇರುವಷ್ಟು ಆಂಫೊಟೆರೆಸಿನ್ ಮುಂತಾದ ಔಷಧಗಳನ್ನು ಕೂಡಲೇ ಅಂದಾಜು ಮಾಡಿ ತರಿಸಿಕೊಳ್ಳಬೇಕು ಎಂದು ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ.

ಸರ್ಕಾರ ತಡಮಾಡದೆ ಸೂಕ್ತ ಅಧಿ ಸೂಚನೆಗಳನ್ನು ಹೊರಡಿಸಿ ಉಚಿತ ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಈಗಾಗಾಲೇ ಬಹಳಷ್ಟು ಜನರು ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಅಂಥವರಿಗೆ, ಅಂಥವರ ಕುಟುಂಬ ಸೂಕ್ತ ಪರಿಹಾರ ನೀಡಬೇಕು. ಈ ರೋಗವು ಇನ್ನಷ್ಟು ಅಮೂಲ್ಯ ಜೀವಗಳನ್ನು ಹೊತ್ತೊಯ್ಯುವ ಮೊದಲು ಕೂಡಲೇ ಉಚಿತ ಚಿಕಿತ್ಸೆ ನೀಡಲು  ಆರಂಭಿಸಬೇಕೆಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

Previous Post

ನಾರದಾ ಲಂಚ ಪ್ರಕರಣ- ಟಿಎಂಸಿ ಶಾಸಕ, ಸಚಿವರ ಬಂಧನ ವಿರೋಧಿಸಿ ಸಿಬಿಐ ಕಚೇರಿ ಮುಂದೆ ಟಿಎಂಸಿ ಬೆಂಬಲಿಗರಿಂದ ಪ್ರತಿಭಟನೆ

Next Post

ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ

ಕರೋನಾ ಪ್ರಕರಣ ಇಳಿಕೆಯಾಗಿದೆ ಅನ್ನುವುದು ಭ್ರಮೆ, ಭಾರತದ ಅಂಕಿಅಂಶಗಳು ವಿಶ್ವಾಸಾರ್ಹವಲ್ಲ – ತಜ್ಞರ ಕಳವಳ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada