• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆಕ್ಸಿಜನ್ ಹಂಚಿಕೆಯಲ್ಲಿ ಕೇಂದ್ರ ಮಾಡುತ್ತಿರುವ ತಾರತಮ್ಯ, ಕಪ್ಪು ಶಿಲೀಂಧ್ರ ಔಷಧದಲ್ಲೂ ಮುಂದುವರಿಯುತ್ತಿದೆ – ಹೆಚ್ ಡಿ ಕುಮಾರಸ್ವಾಮಿ

Any Mind by Any Mind
May 22, 2021
in ಕರ್ನಾಟಕ
0
ಆಕ್ಸಿಜನ್ ಹಂಚಿಕೆಯಲ್ಲಿ ಕೇಂದ್ರ ಮಾಡುತ್ತಿರುವ ತಾರತಮ್ಯ, ಕಪ್ಪು ಶಿಲೀಂಧ್ರ ಔಷಧದಲ್ಲೂ ಮುಂದುವರಿಯುತ್ತಿದೆ – ಹೆಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಆಕ್ಸಿಜನ್‌ ಹಂಚಿಕೆಯಲ್ಲಿ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿರುವ ಕೇಂದ್ರ ಸರ್ಕಾರ ಕಪ್ಪು ಶಿಲೀಂಧ್ರ (ಬ್ಲ್ಯಾಕ್‌ ಫಂಗಸ್)‌ ಔಷಧದಲ್ಲೂ ಇದನ್ನು ಮುಂದುವರೆಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

ರಾಜ್ಯ ಬಿಜೆಪಿ ನಾಯಕರ, ಹಾಗೂ ಬಿಜೆಪಿ ಸರ್ಕಾರದ ಆಲಸ್ಯದಿಂದಲೇ ಲಸಿಕೆ, ಔಷಧಿ ವಿಚಾರದಲ್ಲಿ ಕೇಂದ್ರವನ್ನು ಬೇಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಬೇಕಿರುವ Amphotericin B ಔಷಧಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದತ್ತ ನೊಡುತ್ತಿದೆ. ‘ಮುಂದಿನ ದಿನಗಳಲ್ಲಿ ಔಷಧ ನೀಡುವುದಾಗಿ ಕೇಂದ್ರ ಹೇಳಿದೆ. ಅತ್ತ, ಇತರ ರಾಜ್ಯಗಳು ಕೇಂದ್ರಕ್ಕೆ ಕಾಯದೇ ಖಾಸಗಿ ಸಂಸ್ಥೆಗಳಿಂದ ಖರೀದಿ ಪ್ರಕ್ರಿಯೆ ಆರಂಭಿಸಿವೆ. ಮಾರಕ ರೋಗದ ವಿಚಾರದಲ್ಲಿ ರಾಜ್ಯಕ್ಕೇಕೆ ಇಷ್ಟು ಆಲಸ್ಯ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ 'ರಾಕ್ಷಸ ಅಲಸ್ಯ'ದಲ್ಲಿರುವ ಹೊತ್ತಲ್ಲೇ ತೆಲಂಗಾಣ ಸರ್ಕಾರ Amphotericin B ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಔಷಧ ಪೂರೈಸಲು ಕೋರಿದೆ. ಇದರ ಮಾಹಿತಿ ನನಗಿದೆ. ಇದು ರೋಗದ ವಿರುದ್ಧ ಸರ್ಕಾರವೊಂದು ವರ್ತಿಸುವ ರೀತಿ. ಮತ್ತು, ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ. ಆದರೆ, ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರಕ್ಕೆ ಏಕಿಲ್ಲ ಕಾಳಜಿ?
2/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 22, 2021

ರಾಜ್ಯ ಸರ್ಕಾರ ‘ರಾಕ್ಷಸ ಅಲಸ್ಯ’ದಲ್ಲಿರುವ ಹೊತ್ತಲ್ಲೇ ತೆಲಂಗಾಣ ಸರ್ಕಾರ Amphotericin B ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಔಷಧ ಪೂರೈಸಲು ಕೋರಿದೆ. ಇದರ ಮಾಹಿತಿ ನನಗಿದೆ. ಇದು ರೋಗದ ವಿರುದ್ಧ ಸರ್ಕಾರವೊಂದು ವರ್ತಿಸುವ ರೀತಿ. ಮತ್ತು, ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ. ಆದರೆ, ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರಕ್ಕೆ ಏಕಿಲ್ಲ ಕಾಳಜಿ? ಎಂದು ಕೇಳಿರುವ ಅವರು, ಮುಂದಿನ ದಿನಗಳಲ್ಲಿ ಪ್ರತಿ ವಾರ 400 ಮಂದಿ ಕಪ್ಪು ಶಿಲೀಂಧ್ರ ರೋಗಕ್ಕೆ ಗುರಿಯಾಗುವುದಾಗಿ ತಜ್ಞರು ಹೇಳಿದ್ದಾರೆ. ಈ ಸಂಖ್ಯೆ ಹೆಚ್ಚಲೂಬಹುದು. ಗಮನಿಸಬೇಕಾದ್ದೇನೆಂದರೆ, ಈ ಕಾಯಿಲೆಗೆ ಮೊದಲ 2 ದಿನಗಳಲ್ಲೇ ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದರೆ, ಸಾವು ತರುವ ರೋಗವಾಗಿ ಇದು ಪರಿಣಮಿಸುತ್ತದೆ. ಆದರೆ, ರಾಜ್ಯ ಸರ್ಕಾರ ಔಷಧ ಹೊಂದಿಸಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಆಕ್ಸಿಜನ್‌, ಲಸಿಕೆಗಾಗಿ ಕೇಂದ್ರದತ್ತ ನೋಡಿದ ರಾಜ್ಯ ‘ಇಲ್ಲ’ ಎನಿಸಿಕೊಂಡಿದೆ. ಅದರ ಪರಿಣಾಮ ಜನರು ಅನುಭವಿಸುತ್ತಿದ್ದಾರೆ. ಈಗ ಕಪ್ಪು ಶಿಲೀಂಧ್ರದ ವಿಚಾರದಲ್ಲೂ ರಾಜ್ಯ ಸರ್ಕಾರ ಆಲಸ್ಯದಿಂದ ಕೇಂದ್ರದ ಕಡೆ ನೋಡುತ್ತಿದೆ. ಈಗಲೂ ಕೇಂದ್ರ ಇಲ್ಲ ಎಂದಿದೆ. ರಾಜ್ಯ ಸರ್ಕಾರ ಈ ವಿಚಾರದಲ್ಲಾದರೂ ಸ್ವತಂತ್ರ ನಿರ್ಧಾರ ಕೈಗೊಳ್ಳಲಿ. ಜನರ ಜೀವ ಉಳಿಸಲಿ ಎಂದು ಅವರು ಆಗ್ರಹಿಸಿದ್‌ದಾರೆ.

ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು –ಹೆಚ್‌ಡಿ ಕುಮಾರಸ್ವಾಮಿ

ಕೇಂದ್ರ ಸದಾ ತಾರತಮ್ಯ ಮಾಡುತ್ತದೆ. ಉದಾ: ರಾಜ್ಯದಲ್ಲಿ ಒಬ್ಬ ಕೋವಿಡ್‌ ರೋಗಿಗೆ ಲಭ್ಯವಿರುವ ಆಮ್ಲಜನಕ 1.90 ಲೀಟರ್‌. ಗುಜರಾತ್‌ನಲ್ಲಿ ಪ್ರತಿ ರೋಗಿಗೆ 10.95 ಲೀಟರ್‌ ಸಿಗುತ್ತಿದೆ. ಆದರೆ, ಅಲ್ಲಿಗಿಂತ ಹೆಚ್ಚು ಪ್ರಕರಣಗಳಿರುವುದು ನಮ್ಮಲ್ಲಿ. ಇದು ಕೇಂದ್ರದ ಆಕ್ಸಿಜನ್‌ ಮೋಸ. ಕಪ್ಪು ಶಿಲೀಂದ್ರ ಔಷಧದಲ್ಲೂ ಇದು ಮುಂದುವರಿಯುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರವು ಪ್ರತಿಯೊಂದಕ್ಕೂ ಕೇಂದ್ರದ ಕಡೆ ನೋಡದೇ, ತಾನೇ ನಿರ್ಧಾರಗಳನ್ನು ಕೈಗೊಳ್ಳಲಿ. ಔಷಧಕ್ಕಾಗಿ ಪರ್ಯಾಯ ಮೂಲಗಳನ್ನು ಹುಡಕಲಿ. ಕಪ್ಪು ಶಿಲೀಂಧ್ರದ ಔಷಧ ಎಲ್ಲೆಲ್ಲಿ ಲಭ್ಯವಿದೆ ಎಂದು ನಾನು ಈ ಹಿಂದೆಯೇ ಸರ್ಕಾರಕ್ಕೆ ತಿಳಿಸಿದ್ದೇನೆ. ಕೂಡಲೇ ಔಷಧ ತಯಾರಕ ಸಂಸ್ಥೆಗಳಿಗೆ ಪತ್ರ ಬರೆದು ಪೂರೈಕೆಗೆ ಸರ್ಕಾರ ಮನವಿ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Previous Post

ಜನರಿಗಾಗಿ ನೀವೇನು ಮಾಡಿದ್ದೀರಿ? : ರಾಜಕಾರಣಿಗಳನ್ನು ಪ್ರಶ್ನಿಸಿದ ಹೈಕೋರ್ಟ್

Next Post

ಬ್ಲಾಕ್ ಫಂಗಸ್ ಸಾಂಕ್ರಾಮಿಕ ಅಲ್ಲ: ಸಚಿವ ಸುಧಾಕರ್

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಬ್ಲಾಕ್ ಫಂಗಸ್ ಸಾಂಕ್ರಾಮಿಕ ಅಲ್ಲ: ಸಚಿವ ಸುಧಾಕರ್

ಬ್ಲಾಕ್ ಫಂಗಸ್ ಸಾಂಕ್ರಾಮಿಕ ಅಲ್ಲ: ಸಚಿವ ಸುಧಾಕರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada