• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬ್ಲಾಕ್ ಫಂಗಸ್ ಸಾಂಕ್ರಾಮಿಕ ಅಲ್ಲ: ಸಚಿವ ಸುಧಾಕರ್

Any Mind by Any Mind
May 22, 2021
in ಕರ್ನಾಟಕ
0
ಬ್ಲಾಕ್ ಫಂಗಸ್ ಸಾಂಕ್ರಾಮಿಕ ಅಲ್ಲ: ಸಚಿವ ಸುಧಾಕರ್

Dr K Sudhakar, Medical Education Minister addressing press regarding Arogya Sethu App and Covid-19 lockdown, Coronavirus at Vidhana Soudha in Bengaluru on Thursday, 21 May 2020. Photo by S K Dinesh

Share on WhatsAppShare on FacebookShare on Telegram

ಬ್ಲಾಕ್‌ ಫಂಗಸ್‌ ಅನ್ನೋದು ಸಾಂಕ್ರಾಮಿಕ ರೋಗವಲ್ಲ, ಯಾರೋ ಕೂಡ ಹೆದರುವ ಅವಶ್ಯಕತೆಯಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಶುಕ್ರವಾರ ಹೇಳಿಕೊಟ್ಟಿದ್ದಾರೆ. ಆದರೆ ಈಗಾಗಲೇ ಕೆಲವು ರಾಜ್ಯಗಳು ಸಾಂಕ್ರಾಮಿಕ ರೋಗಗಳ ಪಟ್ಟಿಗೆ ಸೇರಿಸಿದೆ.

ADVERTISEMENT

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಬ್ಲಾಕ್‌ ಫಂಗಸ್‌ಗೆ ಚಿಕಿತ್ಸೆ ದೊರಕುವಂತೆ ಮಾಡಲಾಗಿದೆ. ಇದು ಸಾಂಕ್ರಾಮಿಕ ರೋಗವಲ್ಲ,ಯಾರು ಕೂಡ ಭಯಪಡುವ ಅವಶ್ಯಕತೆಯಿಲ್ಲ, ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಔಷಧಿ ಪೂರೈಕೆಗೆ ಕ್ರಮವಹಿಸಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ಹಂಚಿಕೊಂಡಿದ್ದಾರೆ.

ಆದರೆ ರಾಜಸ್ಥಾನ ಮತ್ತು ತೆಲಂಗಾಣ ಸರ್ಕಾರ ಈಗಾಗಲೇ ಬ್ಲ್ಯಾಕ್ ಫಂಗಸ್ ಅಥವಾ ಕಪ್ಪು ಶಿಲೀಂಧ್ರವನ್ನು (ಮ್ಯೂಕೋರ್ಮೈಕೋಸಿಸ್) ಸಾಂಕ್ರಾಮಿಕ ರೋಗವೆಂದು ಘೋಷಿಸಿದೆ.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ರೋಗ ಪತ್ತೆಯಾದರೆ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದೆ. ರೋಗ ನಿಯಂತ್ರಣ ಮಾರ್ಗಸೂಚಿಗಳನ್ನು ಅನುಸರಿಸಬೇಕು” ಎಂದು ಅಧಿಸೂಚನೆ ಹೇಳಿದೆ.

ರಾಜ್ಯದಲ್ಲಿ ಬ್ಲಾಕ್‌ ಫಂಗಸ್‌ ರೋಗವನ್ನು ಸಾಂಕ್ರಾಮಿಕ ರೋಗಗಳ ಪಟ್ಟಿಗೆ ಸೇರಿಸಿ

ರಾಜ್ಯದ ವಿರೋಧ ಪಕ್ಷದ ಅನೇಕ ನಾಯಕರು ಬ್ಲಾಕ್‌ ಫಂಗಸ್‌ ಅನ್ನು ಸಾಂಕ್ರಾಮಿಕ ರೋಗಗಳ ಪಟ್ಟಿಗೆ ಸೇರಿಸಿ ಉಚಿತ ಚಿಕಿತ್ಸೆ ಕೊಡಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು.

ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು. ಇದರ ವಿರುದ್ಧ ಹೋರಾಡಲು ಅಗತ್ಯವಿರುವ ನೇತ್ರ ತಜ್ಞರು, ಇಎನ್ಟಿ ಪರಿಣತರು, ಜನರಲ್ ಸರ್ಜನ್ಗಳು, ನರರೋಗ ತಜ್ಞರು, ದಂತವೈದ್ಯರನ್ನು ಸರ್ಕಾರ ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದರು.

ಕಪ್ಪು ಶಿಲೀಂಧ್ರ ಸೋಂಕನ್ನು (ಮ್ಯೂಕರ್ ಮೈಕೊಸಿಸ್) ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ರಾಜ್ಯವೂ ಈ ಮಾರಕ ಕಾಯಿಲೆಯನ್ನು ಈ ಕೂಡಲೇ ‘ಸಾಂಕ್ರಾಮಿಕ’ ಎಂದು ಘೋಷಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದರು.

ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಈಗಾಗಾಲೇ ಬಹಳಷ್ಟು ಜನರು ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಅಂಥವರಿಗೆ, ಅಂಥವರ ಕುಟುಂಬ ಸೂಕ್ತ ಪರಿಹಾರ ನೀಡಬೇಕು. ಈ ರೋಗವು ಇನ್ನಷ್ಟು ಅಮೂಲ್ಯ ಜೀವಗಳನ್ನು ಹೊತ್ತೊಯ್ಯುವ ಮೊದಲು ಕೂಡಲೇ ಉಚಿತ ಚಿಕಿತ್ಸೆ ನೀಡಲು ಆರಂಭಿಸಬೇಕೆಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದರು.

ಕೋವಿಡ್‌ ಎರಡನೇ ಅಲೆಯಲ್ಲಿ ರಾಜ್ಯದಲ್ಲಿ ರೋಗಿಗಳಿಗೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ದೊರೆಯದೆ ಉಳಿಯುವ ಜೀವಗಳು ಪ್ರಾಣಬಿಟ್ಟಿವೆ. ಇದರ ಮಧ್ಯೆ ಬ್ಲಾಕ್‌ ಫಂಗಸ್‌ ಸೋಂಕು ಕಾಣಿಸಿಕೊಂಡಿದ್ದು, ಈ ಕುರಿತು ಸಾಕಷ್ಟು ಮುಂಜಾಗ್ರತೆ ವಹಿಸಬೇಕು ಇದೊಂದು ಅಪಾಯಕಾರಿ ಸೋಂಕೆಂದು ತಜ್ಞರು ಎಚ್ಚರಿಸಿದ್ದಾರೆ. ಯಾರೂ ಹೆದರುವ ಅವಶ್ಯಕತೆಯಿಲ್ಲ ಇದೊಂದು ಸಾಂಕ್ರಾಮಿಕ ರೋಗವೇ ಅಲ್ಲ ಎಂದ ಆರೋಗ್ಯ ಸಚಿವ ಸುಧಾಕರ್ ಅವರ ಧಿಡೀರ್ ಹೇಳಿಕೆ ಸಾಕಷ್ಟು ಗೊಂದಲಗಳಿಗೆ ಎಡೆಮಾಡಿಕೊಟ್ಟಿದೆ.

Previous Post

ಆಕ್ಸಿಜನ್ ಹಂಚಿಕೆಯಲ್ಲಿ ಕೇಂದ್ರ ಮಾಡುತ್ತಿರುವ ತಾರತಮ್ಯ, ಕಪ್ಪು ಶಿಲೀಂಧ್ರ ಔಷಧದಲ್ಲೂ ಮುಂದುವರಿಯುತ್ತಿದೆ – ಹೆಚ್ ಡಿ ಕುಮಾರಸ್ವಾಮಿ

Next Post

ದಲಿತ ಯುವಕನಿಗೆ ಪೊಲೀಸರಿಂದ ಕಿರುಕುಳ, ಮೂತ್ರ ಕುಡಿಯುವಂತೆ ಒತ್ತಾಯ ಆರೋಪ: SI ತಲೆದಂಡಕ್ಕೆ ಆಗ್ರಹ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ದಲಿತ ಯುವಕನಿಗೆ ಪೊಲೀಸರಿಂದ ಕಿರುಕುಳ, ಮೂತ್ರ ಕುಡಿಯುವಂತೆ ಒತ್ತಾಯ ಆರೋಪ: SI ತಲೆದಂಡಕ್ಕೆ ಆಗ್ರಹ

ದಲಿತ ಯುವಕನಿಗೆ ಪೊಲೀಸರಿಂದ ಕಿರುಕುಳ, ಮೂತ್ರ ಕುಡಿಯುವಂತೆ ಒತ್ತಾಯ ಆರೋಪ: SI ತಲೆದಂಡಕ್ಕೆ ಆಗ್ರಹ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!