• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೊರೆಸ್ವಾಮಿಯವರ ಬದುಕಿನ ಆದರ್ಶ, ಮೌಲ್ಯಗಳು ಎಲ್ಲರಿಗೂ ಸ್ಪೂರ್ತಿ: ಎಚ್‌ಡಿ‌ಕೆ ಸಂತಾಪ

Any Mind by Any Mind
May 26, 2021
in ಕರ್ನಾಟಕ, ದೇಶ
0
ದೊರೆಸ್ವಾಮಿಯವರ ಬದುಕಿನ ಆದರ್ಶ, ಮೌಲ್ಯಗಳು ಎಲ್ಲರಿಗೂ ಸ್ಪೂರ್ತಿ: ಎಚ್‌ಡಿ‌ಕೆ ಸಂತಾಪ
Share on WhatsAppShare on FacebookShare on Telegram

ನಾಡಿನ ಸಾಕ್ಷಿ ಪ್ರಜ್ಞೆ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ 104 ವರ್ಷದ ಎಚ್.ಎಸ್, ದೊರೆಸ್ವಾಮಿ ಅವರ ವಿಧಿವಶರಾದ ಸುದ್ದಿ ತಿಳಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಟ್ವೀಟ್ ಮಾಡುವ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ADVERTISEMENT

“ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಗಾಂಧಿವಾದಿ, ಪ್ರಾತಃಸ್ಮರಣೀಯರು ಹಾಗೂ ನಾಡಿನ ಸಾಕ್ಷಿಪ್ರಜ್ಞೆಯಂತಿದ್ದ ದೊರೆಸ್ವಾಮಿ ಅವರ ನಿಧನದಿಂದ ಶತಮಾನದ ಮಹಾನ್ ಹೋರಾಟಗಾರರನ್ನು ಕಳೆದುಕೊಳ್ಳುವ ಮೂಲಕ ನಾಡು ಹಾಗೂ ದೇಶ ಬಡವಾಗಿದೆ ಎಙದು ತಮ್ಮ ಸಂಪಾತ ವ್ಯಕ್ತಪಡಿಸಿದ್ದಾರೆ.

ಶತಾಯುಷಿಯಾಗಿದ್ದರೂ ದಣಿವರಿಯದ ಅವರ ಹೋರಾಟದ ಕಿಚ್ಚು ಮತ್ತು ಸಾಮಾಜಿಕ ಬದ್ಧತೆ ಅನನ್ಯ. ಹತ್ತಾರು ಬಾರಿ ಅವರನ್ನು ಭೇಟಿ ಮಾಡಿ ಚರ್ಚಿಸಿ, ಮಾರ್ಗದರ್ಶನ ಮತ್ತು ಆಶೀರ್ವಾದ ಪಡೆದಿದ್ದೇನೆ. ಅದು ನನ್ನ ಭಾಗ್ಯ ಎಂದು ಟ್ವೀಟಿಸಿದ್ದಾರೆ.

ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದ ದೊರೆಸ್ವಾಮಿ (104) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದು ನನ್ನ ಮನಸ್ಸಿಗೆ ತೀವ್ರ ನೋವನ್ನುಂಟು ಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯಪೂರ್ವ, ಸ್ವಾತಂತ್ರ್ಯೋತ್ತರ ನಂತರ ಸೆರೆವಾಸ ಅನುಭವಿಸಿದ್ದ ದೊರೆಸ್ವಾಮಿಯವರ ಬದುಕಿನ ಆದರ್ಶ, ಮೌಲ್ಯಗಳು ಎಲ್ಲರಿಗೂ ಸ್ಪೂರ್ತಿ. ಇಂತಹ ಮಹಾನ್ ಚೇತನ ಎರಡು ಶತಮಾನಗಳ ಕಾಲಘಟ್ಟದಲ್ಲಿ ನಮ್ಮೆಲ್ಲರಿಗೂ ಹೋರಾಟದ ಸ್ಪೂರ್ತಿಯ ಸೆಲೆಯಾಗಿ ಮುಂಚೂಣಿಯ ಮಾರ್ಗದರ್ಶಕರಾಗಿದ್ದರು ಎಂಬುದನ್ನು ಅತ್ಯಂತ ವಿನೀತ ಭಾವದಿಂದ ಸ್ಮರಿಸಿಕೊಳ್ಳುತ್ತೇನೆ ಎಂದಿದ್ದಾರೆ.

ಮೃತರ ಕುಟುಂಬದ ಸದಸ್ಯರು, ಅವರ ಅಸಂಖ್ಯ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Tags: H S DoreswamyHDKHdKumaraswamy
Previous Post

ಮಕ್ಕಳಿಂದ ಹೆತ್ತವರನ್ನು ಬೇರ್ಪಡಿಸುತ್ತಿರುವ ಕೋವಿಡ್: ದೇಶದಲ್ಲಿ 577 ಮಕ್ಕಳು ಅನಾಥ

Next Post

ಡಾ.ಎಚ್.ಎಸ್.ದೊರೆಸ್ವಾಮಿ ಶತಮಾನದ ವ್ಯಕ್ತಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಡಾ.ಎಚ್.ಎಸ್.ದೊರೆಸ್ವಾಮಿ ಶತಮಾನದ ವ್ಯಕ್ತಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಡಾ.ಎಚ್.ಎಸ್.ದೊರೆಸ್ವಾಮಿ ಶತಮಾನದ ವ್ಯಕ್ತಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!