• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ ಸಂಕಷ್ಟದಲ್ಲಿ ಜನರ ಕೈಹಿಡಿದ ಜನನಾಯಕರು

Any Mind by Any Mind
May 29, 2021
in ಕರ್ನಾಟಕ
0
ಕೋವಿಡ್ ಸಂಕಷ್ಟದಲ್ಲಿ ಜನರ ಕೈಹಿಡಿದ ಜನನಾಯಕರು
Share on WhatsAppShare on FacebookShare on Telegram
  • ಶಿವಕುಮಾರ್ ಎ

ಕರೋನಾ ಸೋಂಕು, ಲಾಕ್ಡೌನ್, ಕುಸಿಯುತ್ತಿರುವ ಆರ್ಥಿಕತೆ, ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆ ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ. ಹಲವು ಕುಟುಂಬಗಳು ಒಪ್ಪತ್ತಿನ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ನಾವು ಮತ ಕೊಟ್ಟು ಆರಿಸಿದಂತಹ ಜನ ಪ್ರತಿನಿಧಿಗಳ ಸಹಕಾರ ಹಾಗೂ ಔದಾರ್ಯತೆ ಅಲ್ಪ ಮಟ್ಟಿಗೆ ಜನರು ಉಸಿರಾಡುವಂತೆ ಮಾಡಿದೆ.

ADVERTISEMENT

ರಾಜ್ಯದಲ್ಲಿ ಲಾಕ್’ಡೌನ್ ಘೋಷಣೆಯಾದ ನಂತರ, ಹಲವು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಜಾತಿ, ಧರ್ಮ, ರಾಜಕೀಯ ಸಿದ್ದಾಂತಗಳನ್ನೆಲ್ಲಾ ಬದಿಗೊತ್ತಿ, ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವಂತಹ ಕೆಲಸ ನಡೆಯುತ್ತಿದೆ. ಅಂತಹ ಆಯ್ದ ಶಾಸಕರ ಕಾರ್ಯ ವೈಖರಿಯ ಕುರಿತಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

೧. ಕೆ ಜೆ ಜಾರ್ಜ್

ಬೆಂಗಳೂರಿನ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಕೆ ಜೆ ಜಾರ್ಜ್ ಅವರು, ತಮ್ಮ ಕ್ಷೇತ್ರದಲ್ಲಿ ಕೋವಿಡ್ ಕೇರ್ ಸೆಂಟರ್’ಗಳ ನಿರ್ಮಾಣದಿಂದ ಹಿಡಿದು ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸುವವರೆಗೆ ಎಲ್ಲಾ ರೀತಿಯಲ್ಲೂ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ ೧೮-೪೪ ವರ್ಷದೊಳಗಿನ ಅರ್ಹ ಫಲಾನುಭವಿಗಳಿಗೆ ಲಸಿಕೆಯನ್ನು ತಲುಪಿಸುವಂತಹ ಕೆಲಸವನ್ನು ಜಾರ್ಜ ಅವರು ಮಾಡಿದ್ದಾರೆ.

ಇದರೊಂದಿಗೆ, ಬಡವರಿಗೆ ಹಾಗೂ ಅಶಕ್ತರಿಗೆ ದಿನಸಿ ಕಿಟ್’ಗಳ ವಿತರಣೆ, ಆಹಾರ ವಿತರಣೆ ಸೇರಿದಂತೆ ತಮ್ಮ ಕ್ಷೇತ್ರದ ಜನರ ಕುಂದು ಕೊರತೆಗಳನ್ನು ನೀಗಿಸುವತ್ತ ತಮ್ಮ ದೃಷ್ಟಿ ನೆಟ್ಟಿದ್ದಾರೆ. ಈಗಾಗಲೇ ಸರ್ವಜ್ಞ ನಗರದ ಕಾಚರಕನಹಳ್ಳಿಯ ಕ್ಯಾಂಪಸ್ ಕ್ರುಸೇಡ್‌ನಲ್ಲಿ ಸ್ಥಾಪಿಸಲಾದ ಅತ್ಯಾಧುನಿಕ ಕೋವಿಡ್ ಆರೈಕೆ ಕೇಂದ್ರದಲ್ಲಿ ಕೋವಿಡ್ ಸೋಂಕಿತರು ಶೀಘ್ರವಾಗಿ ಗುಣಮುಖರಾಗಲು ಬೇಕಾಗುವ ವ್ಯವಸ್ಥೆಗಳನ್ನು ಮಾಡಿದ್ದಾರೆ.

ಗೌರವಾನ್ವಿತ ವಸತಿ ಮತ್ತು ಕೋವಿಡ್ ಉಸ್ತುವಾರಿ ಸಚಿವ (ಬೆಂಗಳೂರು ಪೂರ್ವ ವಲಯ) ಶ್ರೀ ವಿ ಸೋಮಣ್ಣ ಅವರು ಕಾಚರಕನಹಳ್ಳಿಯ ಕ್ಯಾಂಪಸ್ ಕ್ರುಸೇಡ್‌ನಲ್ಲಿ ಸ್ಥಾಪಿಸಲಾದ ಅತ್ಯಾಧುನಿಕ ಕೋವಿಡ್ ಆರೈಕೆ ಕೇಂದ್ರವನ್ನು ಉದ್ಘಾಟಿಸಿದರು. @VSOMANNA_BJP @PCMohanMP @CMofKarnataka @mla_sudhakar @BBMPCOMM #SarvagnaNagarFightsCOVID19 pic.twitter.com/JySV2uEpqw

— KJ George (@thekjgeorge) May 26, 2021

೨. ರೇಣುಕಾಚಾರ್ಯ

ಹೊನ್ನಾಳಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆಗಿರುವ ರೇಣುಕಾಚಾರ್ಯ ಅವರ ಕೋವಿಡ್ ಪರಿಹಾರ ಕಾರ್ಯ ವೈಖರಿ ಹುಬ್ಬೇರಿಸುವಂತಿದೆ. ಕೋವಿಡ್ ಸೋಂಕಿತರ ಆರೈಕೆ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಅಲ್ಲಿನ ಕುಂದು ಕೊರತೆಗಳನ್ನು ಸೋಂಕಿತರಿಂದಲೇ ತಿಳಿದುಕೊಂಡು ಅವರಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡುವ ಕಾರ್ಯ ಹೊನ್ನಾಳಿಯಲ್ಲಿ ರೇಣುಕಾಚಾರ್ಯನವರು ಮಾಡುತ್ತಿದ್ದಾರೆ.

ಇತ್ತೀಚಿಗೆ ಸೋಂಕಿತರನ್ನು ಮನೋರಂಜನೆಗಾಗಿ ತಾವೇ ಕುಣಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದರೊಂದಿಗೆ, ಆಕ್ಸಿಜನ್ ಕೊರತೆ ಉಂಟಾದಾಗ ರಾತ್ರೋ ರಾತ್ರಿ ತಾಲ್ಲೂಕು ಆಸ್ಪತ್ರೆಗೆ ಆಕ್ಸಿಜನ್ ಸರಬರಾಜು ಮಾಡಲು ಮುತುವರ್ಜಿ ವಹಿಸಿದ ರೇಣುಕಾಚಾರ್ಯ ಅವರು ಕ್ಷೇತ್ರದ ಜನರ ಪಾಲಿಗೆ ಆಪತ್ಬಾಂದವರಾಗಿದ್ದಾರೆ.

ಈಗಾಗಲೇ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ ನಾಲ್ಕು ಕೋವಿಡ್ ಕೇರ್ ಕೇಂದ್ರಗಳಿದ್ದು ೫೦೦ ಹಾಸಿಗೆಗಳ ಐದನೇ ಕೋವಿಡ್ ಕೇರ್ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದೆ

ಹೊನ್ನಾಳಿ-ನ್ಯಾಮತಿ ತಾಲ್ಲೂಕಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಅರಬಗಟ್ಟೆಯಲ್ಲಿರುವ ನೂತನ ಇಂದಿರಾಗಾಂಧಿ ವಸತಿ ಶಾಲೆಯನ್ನು 5⃣0⃣0⃣ ಬೆಡ್ ಗಳ ಕೋವಿಡ್ ಆರೈಕೆ ಕೇಂದ್ರ ಮಾಡುತ್ತಿದ್ದೇವೆ.#KarnatakaFightsCorona pic.twitter.com/3Tfv89V2bY

— M P Renukacharya (ನಾನು ಮೋದಿ ಪರಿವಾರ) (@MPRBJP) May 29, 2021

೩. ಕುಮಾರ್ ಬಂಗಾರಪ್ಪ

ಈ ಹಿಂದೆ ಸರ್ಕಾರಿ ಕಚೇರಿಗಳಲ್ಲಿನ ಅವ್ಯವಸ್ಥೆಯ ಕುರಿತು ಕಠಿಣವಾದ ಕ್ರಮಗಳನ್ನು ಕೈಗೊಂಡು ಕುಮಾರ್ ಬಂಗಾರಪ್ಪ ಅವರು ಮನೆಮಾತಾಗಿದ್ದರು. ಈಗ ಲಾಕ್’ಡೌನ್ ಸಂದರ್ಭದಲ್ಲಿಯೂ ತಮ್ಮ ಕ್ಷೇತ್ರದಲ್ಲಿ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.

ಅನವಟ್ಟಿಯಲ್ಲಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣ, ಇತರೆ ಕೋವಿಡ್ ಕೇರ್ ಸೆಂಟರ್’ನಲ್ಲಿರುವ ಸೋಂಕಿತರಿಗೆ ಪ್ರತಿನಿತ್ಯ ಊಟದ ವ್ಯವಸ್ಥೆಯನ್ನು ಮಾಡುವ ಮೂಲಕ ಸೋಂಕಿತರು ಶೀಘ್ರದಲ್ಲಿಯೇ ಗುಣಮುಖರಾಗಲು ಸ್ಪೂರ್ತಿ ತುಂಬುತ್ತಿದ್ದಾರೆ.

ಇದರೊಂದಿಗೆ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆ ಸರಣಿ ಸಭೆ ನಡೆಸಿ ತಮ್ಮ ಕ್ಷೇತ್ರದಲ್ಲಿ ಕೈಗೊಳ್ಳಲಾದ ಕೋವಿಡ್ ಸುರಕ್ಷತಾ ಕ್ರಮಗಳ ಕುರಿತಾಗಿ ಮಾಹಿತಿಯನ್ನು ಪಡೆದು ಅಗತ್ಯ ಸೂಚನೆಗಳನ್ನು ನೀಡುವ ಕೆಲಸವೂ ನಡೆಯುತ್ತಿದೆ.

ದಿನಾಂಕ 27/೦5/2021 ರ ಗುರುವಾರದಂದು, ಆನವಟ್ಟಿ ಭಾಗದ ಕೊರೋನ ಹೆಚ್ಚಾಗಿದ್ದು, ಅದರ ಅಲೆಯನ್ನು ತಡೆಗಟ್ಟಲು ಹಾಗೂ ಆನವಟ್ಟಿ ಭಾಗದ ಜನತೆಯ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ಯಾವೊಬ್ಬ ಸೋಂಕಿತನು ಭಯಪಡಬಾರದು, ಆ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ ಆನವಟ್ಟಿ ಭಾಗದ ಹುಣಸವಳ್ಳಿಯಲ್ಲಿ ಕೊರೊನಾ ಕೆರ್ ಸೆಂಟರ್ ನ್ನು ಪ್ರಾರಂಭಿಸಿ ಉದ್ಘಾಟನೆ… pic.twitter.com/Q8G4f0Kar4

— Kumar Bangarappa (Modi Ka Pariwar) (@kumarbangarappa) May 28, 2021

೪. ರಾಜು ಗೌಡ

ಸುರಪುರ ಕ್ಷೇತ್ರದ ಶಾಸಕರಾದ ನರಸಿಂಹ ನಾಯಕ್ (ರಾಜು ಗೌಡ) ಅರು ತಮ್ಮ ಕ್ಷೇತ್ರದಲ್ಲೊ ಒಂದು ಲಕ್ಷಕ್ಕು ಹೆಚ್ಚಿನ ಜನರಿಗೆ ಮಾಸ್ಕ್ ವಿತರಿಸುವ ಕೆಲಸಕ್ಕೆ ಚಾಲನೆ ನಿಡಿದ್ದಾರೆ. ಇದರೊಂದಿಗೆ ಬಡವರಿಗೆ ದಿನಸಿ ಕಿಟ್’ಗಳ ವಿತರಣೆ, ಕೋವಿಡ್ ಆರೈಕೆ ಕೇಂದ್ರಕ್ಕೆ ಅಗತ್ಯ ವಸ್ತುಗಳ ಪೂರೈಕೆ ಸೇರಿದಂತೆ ಇತರ ಕಾರ್ಯಗಳನ್ನು ಖುದ್ದಾಗಿ ನಿರ್ವಹಿಸುತ್ತಿದ್ದಾರೆ.

ಕೋವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್ ಪೂರೈಕೆಯಲ್ಲಿಯೂ ತಡವಾಗದಂತೆ ಶಾಸಕ ರಾಜು ಗೌಡ ಅವರು ನಿಗಾ ವಹಿಸಿದ್ದಾರೆ.

೫. ಸಂಜೀವ ಮಟಾಂದೂರು

ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಸಂಜೀವ ಮಟಾಂದೂರು ಅವರು ತಮ್ಮ ಕ್ಷೇತ್ರದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕದ ನಿರ್ಮಾಣ ಕಾರ್ಯ ಸೇರಿದಂತೆ, ಕೋವಿಡ್ ಕೇರ್ ಸೆಂಟರ್’ಗಳ ಸ್ಥಾಪನೆಗೂ ಮುತುವರ್ಜಿ ವಹಿಸಿಕೊಂಡಿದ್ದಾರೆ.

ಪ್ರಮುಖವಾಗಿ ಲಾಕ್’ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ಭಿಕ್ಷುಕರು ಹಾಗೂ ಇತರ ನಿರ್ಗತಿಕರಿಗಾಗಿ ಸರ್ಕಾರಿ ಶಾಲೆಯಲ್ಲಿ ನಿರಾಶ್ರಿತರ ಶಿಬಿರ ಆರಂಭಿಸಿ ಅವರ ಆರೈಕೆಯನ್ನೂ ಮಾಡಲಾಗುತ್ತಿದೆ. ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ರೂ. ಒಂದು ಕೋಟಿ ಮೊತ್ತದ ಆಕ್ಸಿಜನ್ ಉತ್ಪಾದನಾ ಘಟಕವನ್ನು ಖಾಸಗಿ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಆರಂಭವಾಗುವಂತೆ ಮಾಡಿದ್ದಾರೆ.

ಇದರೊಂದಿಗೆ ಹಲವು ವರ್ಷಗಳ ಹಿಂದೆ ಮುಚ್ಚಲ್ಪಟ್ಟಿದ್ದ ಖಾಸಗಿ ಆಸ್ಪತ್ರೆಯೊಂದನ್ನು ಅತೀ ವೇಗದಲ್ಲಿ ನವೀಕರಿಸಿ ಸುಸಜ್ಜಿತ ಕೋವಿಡ್ ಕೇರ್ ಕೇಂದ್ರವನ್ನು ಆರಂಭಿಸುವ ಯೋಜನೆ ನಿಜಕ್ಕೂ ಶ್ಲಾಘನೀಯ

ಕ್ಯಾಂಪ್ಕೋ ಸಂಸ್ಥೆಯ ಸಹಭಾಗಿತ್ವದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ರೂ.1ಕೋಟಿ ಅನುದಾನದಲ್ಲಿ 450LPM ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಗೆ ಚಾಲನೆಯನ್ನು ಮಾನ್ಯ ಸಂಸದರು, ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ @nalinkateel ಅವರ ಉಪಸ್ಥಿತಿಯಲ್ಲಿ ನಡೆಯಿತು.@BJP4Karnataka
@bjp4puttur@campcochocolate#oxygenplants pic.twitter.com/h3BEOEuojc

— Sanjeeva Matandoor (@s__matandoor) May 19, 2021

೬. ಶರತ್ ಕುಮಾರ್ ಬಚ್ಚೇಗೌಡ

ಹೊಸಕೋಟೆಯ ಪಕ್ಷೇತರ ಶಾಸಕರಾದ ಶರತ್ ಬಚ್ಚೇಗೌಡ ಅವರು ಕೋವಿಡ್ ಸಂದರ್ಭದಲ್ಲಿ ತಮ್ಮ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರದಾದ್ಯಂತ ಪ್ರವಾಸವನ್ನು ಕೈಗೊಂಡಿದ್ದಾರೆ. ಕೋವಿಡ್ ಹೊರತುಪಡಿಸಿ ಇತರ ರೋಗಿಗಳಿಗೆ ಅಗತ್ಯ ಚಿಕಿತ್ಸೆಗೆಂದು ಫೀವರ್ ಕ್ಲೀನಿಕ್ ಗಳ ಸ್ಥಾಪನೆ, ಕ್ಷೇತ್ರದಾದ್ಯಂತ ದಿನಸಿ, ಆಹಾರ ಕಿಟ್ ಗಳ ವಿತರಣೆಯನ್ನು ಶರತ್ ಅವರು ಮುತುವರ್ಜಿ ವಹಿಸಿದ್ದಾರೆ.

https://twitter.com/SBG4Hosakote/status/1398303491597111299

ಇನ್ನು ಕ್ಷೇತ್ರದ ಮೂಲೆ ಮೂಲೆಗೂ ಭೇಟಿ ನೀಡಿ ಆರೋಗ್ಯಾಧಿಕಾರಿಗಳ ಜತೆಯಲ್ಲಿ ಚರ್ಚೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ. ಇದರೊಂದಿಗೆ ಕೋವಿಡ್ ಕೇರ್ ಕೇಂದ್ರಗಳಲ್ಲಿನ ಕುಂದು ಕೊರತೆಗಳನ್ನು ಬಗೆಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವತ್ತ ಗಮನಹರಿಸುತ್ತಿದ್ದಾರೆ.

ಕೋವಿಡ್-19 ಸೋಂಕು ತಡೆಗಟ್ಟಲು ಇಂದು ದಿನಾಂಕ 21/05/2021 ರಂದು, ಹೊಸಕೋಟೆ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ನೋಡಲ್ ಅಧಿಕಾರಿಗಳ ಮತ್ತು ತಾಲ್ಲೂಕಿನ 28 ಗ್ರಾ.ಪಂ ಗಳ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಯಿತು. #Hosakote pic.twitter.com/Q7nynnwHwF

— Sharath Bachegowda (@SBG4Hosakote) May 21, 2021

ಇಂತಹ ಕಷ್ಟ ಕಾಲದಲ್ಲಿ ಸಾಕಷ್ಟು ಜನ ಜನ ಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಇವರೆಲ್ಲರ ಕಾರ್ಯ ನಿಜಕ್ಕೂ ಶ್ಲಾಘನೀಯ. ಯಾವುದೇ ಕಟ್ಟುಪಾಡುಗಳನ್ನು ಹಾಕಿಕೊಳ್ಳದೇ ಸಮಾಜದ ಎಲ್ಲಾ ವರ್ಗದ ಜನರ ಕಷ್ಟಕ್ಕೆ ಸ್ಪಂದಿಸುವ ಇವರ ಕಾರ್ಯ ಹೀಗೇ ಮುಂದುವರೆಯಲಿ ಎಂದು ಆಶಿಸೋಣ.

Previous Post

ದೇಶದಲ್ಲಿ ಇಳಿಮುಖವಾಗುತ್ತಿರುವ ಕರೋನ ಸೋಂಕಿನ ಸಂಖ್ಯೆ: ಗುಣಮುಖ ಹೆಚ್ಚಳ

Next Post

ಖಾಸಗಿ ಆಸ್ಪತ್ರೆಗಳ ದೋಚುವಿಕೆ ತಡೆಯಲು ಕೋವಿಡ್ ಲಸಿಕೆಗೆ ಏಕರೂಪ ದರ ನಿಗದಿ ಮಾಡುವಂತೆ ಸಿದ್ದರಾಮಯ್ಯ ಆಗ್ರಹ

Related Posts

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್
ಕರ್ನಾಟಕ

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

by ಪ್ರತಿಧ್ವನಿ
November 19, 2025
0

ಬೆಂಗಳೂರು: ನಗರದಲ್ಲಿ ಹಾಡಹಗಲೇ ಎಟಿಎಂ ವಾಹನ ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಹಿಡಿಯುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದ್ದಾರೆ‌ ವಿಧಾನಸೌಧದಲ್ಲಿ...

Read moreDetails
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
Next Post
ಖಾಸಗಿ ಆಸ್ಪತ್ರೆಗಳ ದೋಚುವಿಕೆ ತಡೆಯಲು ಕೋವಿಡ್ ಲಸಿಕೆಗೆ ಏಕರೂಪ ದರ ನಿಗದಿ ಮಾಡುವಂತೆ ಸಿದ್ದರಾಮಯ್ಯ ಆಗ್ರಹ

ಖಾಸಗಿ ಆಸ್ಪತ್ರೆಗಳ ದೋಚುವಿಕೆ ತಡೆಯಲು ಕೋವಿಡ್ ಲಸಿಕೆಗೆ ಏಕರೂಪ ದರ ನಿಗದಿ ಮಾಡುವಂತೆ ಸಿದ್ದರಾಮಯ್ಯ ಆಗ್ರಹ

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

ದರೋಡೆ ಆರೋಪಿಗಳ‌ ಸುಳಿವು ಸಿಕ್ಕಿದೆ: ಗೃಹ ಸಚಿವ ಪರಮೇಶ್ವರ್

November 19, 2025
ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada