ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ವಾರಗಳಿಂದ ಬಿಜೆಪಿ ನಾಯಕತ್ವ ಬದಲಾವಣೆ ಕುರಿತ ತೀವ್ರ ಚರ್ಚೆಯಾಗುತ್ತಿದ್ದಂತೆಯೇ, ಬಿ ವೈ ವಿಜಯೇಂದ್ರ ತಮ್ಮ ಬೆಂಬಲಿಗರೊಂದಿಗೆ ದೆಹಲಿಗೆ ದೌಡಾಯಿಸಿದ್ದಾರೆ.
ಬೆಂಗಳೂರಿನಿಂದ ಬೆಳಿಗ್ಗೆ 5.30ಕ್ಕೆ ವಿಮಾನದಲ್ಲಿ ಹೊರಟಿದ್ದ ವಿಜಯೇಂದ್ರ ಹಾಗೂ ತಂಡ 8 ಗಂಟೆಗೆ ದೆಹಲಿ ತಲುಪಿದೆ. ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮೇ ಎರಡನೇ ವಾರದಲ್ಲೂ ಸಚಿವ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ದೆಹಲಿಗೆ ಬಂದಿದ್ದ ವಿಜಯೇಂದ್ರ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸಿದ್ದರು. ವಿಜಯೇಂದ್ ಅವರ ಈ ಧಿಡೀರ್ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.